AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಕಾಲೇಜು ವಿದ್ಯಾರ್ಥಿ ಮೇಲೆ ಲಾಂಗ್​ನಿಂದ ಹಲ್ಲೆ! ಘಟನೆಗೆ ಕಾರಣವಾಯ್ತಾ ಹುಡುಗಿ ವಿಚಾರ?

ಪೋಷಕರು ಮಕ್ಕಳ ಭವಿಷ್ಯ ಉಜ್ವಲವಾಗಲೆಂದು ಕಷ್ಟಪಟ್ಟು ಉನ್ನತ ವಿದ್ಯಾಭ್ಯಾಸಕ್ಕೆಂದು ಕಾಲೇಜಿಗೆ ಕಳುಹಿಸುತ್ತಾರೆ. ಆದರೀಗ ವಿದ್ಯಾಭ್ಯಾಸ ಮಾಡಬೇಕಾದ ವಿದ್ಯಾರ್ಥಿಗಳ ಮೇಲೆ ಕಾಲೇಜಿನ ಅಸುಪಾಸಿನಲ್ಲೇ ಲಾಂಗು, ಮಚ್ಚುಗಳು ಅಟ್ಟಹಾಸ ಮಾಡಿದ್ದು, ವಿದ್ಯಾರ್ಥಿಯೊರ್ವನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಏನಿದು ಅಂತೀರಾ? ಇಲ್ಲಿದೆ ನೋಡಿ

ಹಾಡಹಗಲೇ ಕಾಲೇಜು ವಿದ್ಯಾರ್ಥಿ ಮೇಲೆ ಲಾಂಗ್​ನಿಂದ ಹಲ್ಲೆ! ಘಟನೆಗೆ ಕಾರಣವಾಯ್ತಾ ಹುಡುಗಿ ವಿಚಾರ?
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on:Jun 24, 2023 | 8:02 AM

Share

ಬೆಂಗಳೂರು: ಜೂ.5 ರಂದು ಖಾಸಗಿ ಕಾಲೇಜು ವಿದ್ಯಾರ್ಥಿ(Student) ಮೇಲೆ ಲಾಂಗ್​ನಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೆಶ್ವರಿ ಠಾಣೆ ಪೊಲೀಸರು(Annapoorneshwari Police Station) 10 ಕ್ಕೂ ಹೆಚ್ಚು ಯುವಕರನ್ನು ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಹೌದು ಹಾಡಹಗಲೇ ದರ್ಶನ್ ಎಂಬ ವಿದ್ಯಾರ್ಥಿ ಮೇಲೆ ಬೈಕ್​​ಗಳ ಮೇಲೆ ಹೆಲ್ಮೆಟ್ ಧರಿಸಿ ಬಂದು, 6 ಜನರ ಗ್ಯಾಂಗ್ ಅಟ್ಯಾಕ್ ಮಾಡಿತ್ತು. ಉಲ್ಟಾ ಲಾಂಗ್ ಬೀಸಿ ಎಸ್ಕೇಪ್ ಆಗಿದ್ದರು. ಈ ಕುರಿತು ದರ್ಶನ್​ ಪೊಲೀಸ್​ ಠಾಣೆಗೆ ಹೋಗಿ ದೂರು ದಾಖಲಿಸಿದ್ದರು. ಇದೀಗ ಈ ಕೇಸ್​ನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಪ್ರಕರಣ ಸಂಬಂಧ ಮೊಬೈಲ್ ವಿಡಿಯೋ ಮತ್ತು ಸಿಸಿಟಿವಿ ದೃಶ್ಯಗಳ ಆಧರಿಸಿ ತನಿಖೆ ಚುರುಕುಗೊಳಿಸಿದ್ದಾರೆ.

ಅಟ್ಯಾಕ್ ಹಿಂದಿನ ಸಿಕ್ರೇಟ್ ರಿವೀಲ್ ಮಾಡಲು ವಿದ್ಯಾರ್ಥಿ ಹಿಂದೇಟು!

ಹೌದು ಕೃತ್ಯ ನಡೆದ ಏರಿಯಾದ ಸಿಸಿ ಕ್ಯಾಮರಾಗಳ ಪರಿಶೀಲನೆ ಮಾಡುತ್ತಿರುವ ಪೊಲೀಸರು, ಈ ಕುರಿತು ವಿದ್ಯಾರ್ಥಿ ದರ್ಶನ್​ ದೂರು ನೀಡಿ, ತನಿಖೆಗೆ ಸಹಕರಿಸಲು ಮೀನಾಮೇಷ ಮಾಡುತ್ತಿದ್ದಾನೆ. ಈ ಹಿನ್ನೆಲೆ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ಮುಂದುವರೆಸಿದ್ದಾರೆ. ಈ ಕುರಿತು ಈಗಾಗಲೇ 10 ಕ್ಕೂ ಹೆಚ್ಚು ಯುವಕರನ್ನು ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ರಾಮನಗರ: ಬೈಕ್​​ ವ್ಹೀಲಿಂಗ್​​ ಪ್ರಶ್ನಿಸಿದ್ದಕ್ಕೆ ಯುವಕನ ಮೇಲೆ ಲಾಂಗ್‌ನಿಂದ ಹಲ್ಲೆ

ಘಟನೆಗೆ ಕಾರಣವಾಯ್ತಾ ಹುಡುಗಿ ವಿಚಾರ?

ಇನ್ನು ಹುಡುಗಿ ವಿಚಾರಕ್ಕೆ ಲಾಂಗ್​ನಿಂದ ವಿದ್ಯಾರ್ಥಿ ಮೇಲೆ ಅಟ್ಯಾಕ್ ನಡೀತಾ ಎಂಬ ಅನುಮಾನಗಳು ಮೂಡಿದೆ. ಕೆಲ ದಿನಗಳ ಹಿಂದೆ ಸ್ನೇಹಿತನ ಸಂಗಾತಿ ವಿಚಾರಕ್ಕೆ ಕೆಲ ಹುಡುಗರೊಂದಿಗೆ ದರ್ಶನ್​ ಕಿರಿಕ್ ಮಾಡಿಕೊಂಡಿದ್ದ. ಇದೇ ವಿಚಾರವಾಗಿ ಹಲ್ಲೆ ನಡೆದಿರುವ ಸಾಧ್ಯತೆಯಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಆದ್ರೆ, ಘಟನೆ ಕುರಿತು ದೂರದಾರ ದರ್ಶನ್ ಮಾತ್ರ ನಿಜಾಂಶ ರಿವೀಲ್ ಮಾಡದೆ ಸತಾಯಿಸುತ್ತಿದ್ದಾನೆ.

ಘಟನೆ ವಿವರ

ಇನ್ನು ಈ ಭೀಕರ ಅಟ್ಯಾಕ್ ನಡೆದಿದ್ದು, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜಿನ ಸಮೀಪದ ರಸ್ತೆಯಲ್ಲಿ. ಬಿಬಿಎ ಓದುತ್ತಿದ್ದ ವಿದ್ಯಾರ್ಥಿ ದರ್ಶನ್ ಎಂಬಾತನ ಮೇಲೆ ಜೂನ್ 5 ರಂದು 6 ಜನ ಯುವಕರ ಈ ಡೆಡ್ಲಿ ಗ್ಯಾಂಗ್ ಅಟ್ಯಾಕ್ ಮಾಡಿದ್ದರು. ಕೂದಲೆಳೆ ಅಂತರದಲ್ಲಿ ವಿದ್ಯಾರ್ಥಿ ದರ್ಶನ್ ಪಾರಾಗಿದ್ದ. ಆದ್ರೆ, ಘಟನೆ ಬಳಿಕ ದೂರು ನೀಡಿ ಕೇಸ್ ದಾಖಲಿಸಿರುವ ವಿದ್ಯಾರ್ಥಿ ದರ್ಶನ್, ಪ್ರಕರಣ ತನಿಖೆಗೆ ಪೋಲಿಸರಿಗೆ ಯಾವುದೇ ಸಹಕಾರ ನೀಡದೆ ಮೀನಾ ಮೇಷ ಏಣಿಸುತ್ತಿದ್ದಾನೆ. ಕಾಲೇಜು ಅಸುಪಾಸಿನಲ್ಲೇ ಲಾಂಗು, ಮಚ್ಚುಗಳು ಝಳಪಿಸಿದ್ದು, ಸೊಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:01 am, Sat, 24 June 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್