AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳದಿ ಮಾರ್ಗದಲ್ಲಿ ಮೆಟ್ರೋ ರೈಲುಗಳ ಕೊರತೆ ಹಿನ್ನೆಲೆ ನಿತ್ಯ ಪರದಾಟ: BMRCL ವಿರುದ್ಧ ಪ್ರಯಾಣಿಕರ ಆಕ್ರೋಶ

ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ರೈಲುಗಳ ಸಂಚಾರ ತಡವಾಗುತ್ತಿರುವುದಕ್ಕೆ ಪ್ರಯಾಣಿಕರು ಬಿಎಂಆರ್‌ಸಿಎಲ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪೀಕ್ ಅವರ್‌ನಲ್ಲೂ 9 ರಿಂದ 14 ನಿಮಿಷ ಕಾಯಬೇಕಾದ ದುಸ್ಥಿತಿ ಇದೆಯೆಂಬ ಮಾತುಗಳು ಕೇಳಿಬಂದಿದ್ದು, 9 ಮತ್ತು 10ನೇ ರೈಲುಗಳು ಶೀಘ್ರವಾಗಿ ವಾಣಿಜ್ಯ ಸಂಚಾರಕ್ಕೆ ಲಭ್ಯವಾಗಬೇಕು ಎಂಬ ಆಗ್ರಹವೂ ಕೇಳಿಬಂದಿದೆ.

ಹಳದಿ ಮಾರ್ಗದಲ್ಲಿ ಮೆಟ್ರೋ ರೈಲುಗಳ ಕೊರತೆ ಹಿನ್ನೆಲೆ ನಿತ್ಯ ಪರದಾಟ: BMRCL ವಿರುದ್ಧ ಪ್ರಯಾಣಿಕರ ಆಕ್ರೋಶ
ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುImage Credit source: wikipedia
ಕಿರಣ್​ ಸೂರ್ಯ
| Edited By: |

Updated on:May 29, 2026 | 7:03 PM

Share

ಬೆಂಗಳೂರು, ಮೇ 29: ರಾಜಧಾನಿ ಬೆಂಗಳೂರಿನ (Bengaluru) ಟ್ರಾಫಿಕ್​ ಸಮಸ್ಯೆ ನಿವಾರಸುವ ನಿಟ್ಟಿನಲ್ಲಿನ ಪ್ರಮುಖ ಯೋಜನೆಗಳ ಪೈಕಿ ನಮ್ಮ ಮೆಟ್ರೋ ಕೂಡ ಒಂದು. ಹಸಿರು, ನೇರಳೆ ಮತ್ತು ಹಳದಿ  ಸೇರಿ ಒಟ್ಟು ಮೂರು ಮಾರ್ಗಗಳಲ್ಲಿ ಈಗಾಗಲೇ ಮೆಟ್ರೋ ರೈಲುಗಳು ಪ್ರಯಾಣಿಕರಿಗೆ ಸೇವೆ ಒದಗಿಸುತ್ತಿವೆ. ಹೀಗಿದ್ದರೂ ಪ್ರಯಾಣಿಕರು ಮಾತ್ರ ಬಿಎಂಆರ್​​ಸಿಎಲ್​​ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇದಕ್ಕೆ ಕಾರಣವಾಗಿರೋದು ಹಳದಿ ಮಾರ್ಗದಲ್ಲಿ ಸಂಚರಿಸುವ ರೈಲುಗಳ ನಡುವೆ ಇರುವ ಸಮಯದ ಅಂತರ.

ಮುಖ್ಯಾಂಶಗಳು

  • ಹಳದಿ ಮಾರ್ಗದಲ್ಲಿ ರೈಲುಗಳ ಕೊರತೆ ಹಿನ್ನೆಲೆ ಪರದಾಟ
  • BMRCL ವಿರುದ್ಧ ನಮ್ಮ ಮೆಟ್ರೋ ಪ್ರಯಾಣಿಕರ ಆಕ್ರೊಶ
  • ಪ್ರಯಾಣಿಕರ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮಕ್ಕೆ ಆಗ್ರಹ

ಹೌದು, ಪ್ರಧಾನಿ ನರೇಂದ್ರ ಮೋದಿ ಅವರಿಂದ 2025ರ ಆಗಸ್ಟ್​​ 10ರಂದು ನಮ್ಮ ಮೆಟ್ರೋದ ಯೆಲ್ಲೋ ಮಾರ್ಗಕ್ಕೆ ಚಾಲನೆ ಸಿಕ್ಕಿದ್ದು, ಆಗಸ್ಟ್​​ 11ರಿಂದ ವಾಣಿಜ್ಯ ಕಾರ್ಯಾಚರಣೆ ಆರಂಭವಾಗಿತ್ತು. ಆದರೆ ಈ ಮಾರ್ಗದಲ್ಲಿ ಮೆಟ್ರೋ ರೈಲುಗಳ ಸಂಚಾರ ಶುರುವಾಗಿ 9 ತಿಂಗಳುಗಳೇ ಕಳೆದಿದ್ದರೂ ರೈಲುಗಳಿಗಾಗಿ ಪ್ರಯಾಣಿಕರ ಪರದಾಟ ಮಾತ್ರ ತಪ್ಪಿಲ್ಲ. ಹಸಿರು ಮತ್ತು ನೇರಳೆ ಮಾರ್ಗದಲ್ಲಿ ಹೆಚ್ಚು ಜನಸಂದಣಿ ಇರುವ ಸಮಯದ ವೇಳೆ 3-4 ನಿಮಿಷಕ್ಕೊಂದರಂತೆ ರೈಲು ಸಂಚರಿಸುತ್ತವೆ. ಹಾಗೆಯೇ ಉಳಿದ ಸಮದಲ್ಲಿ 5 ನಿಮಿಷಗಳಿಗೊಂದು ಮೆಟ್ರೋ ಓಡಾಡಲಿದೆ. ಹೀಗಿರುವಾಗ ಯೆಲ್ಲೋ ಲೈನ್​​ನಲ್ಲಿ ಮಾತ್ರ ಪೀಕ್​​ ಅವರ್​​ನಲ್ಲಿ 9 ನಿಮಿಷಕ್ಕೊಂದು ಹಾಗೆಯೇ ಉಳಿದ ಸಮಯದಲ್ಲಿ 14 ನಿಮಿಷಗಳಿಗೊಂದು ರೈಲು ಸಂಚಾರ ಯಾಕೆಂದು ಪ್ರಯಾಣಿಕರು ಪ್ರಶ್ನಿಸಿದ್ದಾರೆ. ಗ್ರೀನ್ ಲೈನ್ ಮೂಲಕ ಆರ್. ವಿ. ರೋಡ್​​ಗೆ ಬರುವ ಪ್ರಯಾಣಿಕರು, ಯೆಲ್ಲೋ ಲೈನ್​​ನ ರೈಲಿಗಾಗಿ ಇಲ್ಲಿ ಸುಮಾರು 10 ರಿಂದ 14 ನಿಮಿಷಗಳ ಕಾಲ ಕಾಯಬೇಕಾದ ಸ್ಥಿತಿ ಇದೆ ಎಂದು ಅಲವತ್ತುಕೊಂಡಿದ್ದಾರೆ.

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರೇ ಗಮನಿಸಿ!; ಭಾನುವಾರ ನೇರಳೆ ಮಾರ್ಗದ ಈ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ!

ಹಳದಿ ಮಾರ್ಗದ ಮೆಟ್ರೋ ರೈಲುಗಳ ಕಾರ್ಯಾಚರಣೆ ಶುರುವಾಗಿ 9 ತಿಂಗಳುಗಳೇ ಕಳೆದರೂ ರೈಲುಗಳ ಸಂಖ್ಯೆ ಮಾತ್ರ ಹೆಚ್ಚಾಗಿಲ್ಲ. ಈ ಲೈನ್​​ ಆರಂಭದ ವೇಳೆ 3 ರೈಲುಗಳು ಕಾರ್ಯಾಚರಣೆ ನಡೆಸುತ್ತಿದ್ದರೆ ಈಗ ಅವುಗಳ ಸಂಖ್ಯೆ 8ಕ್ಕೆ ಏರಿವೆ. 9 ಮತ್ತು 10ನೇ ರೈಲು ಅದಾಗಲೇ ಬೆಂಗಳೂರಿಗೆ ಆಗಮಿಸಿದ್ದರೂ ಅವುಗಳಿನ್ನೂ ವಾಣಿಜ್ಯ ಸಂಚಾರಕ್ಕೆ ಲಭ್ಯವಾಗಿಲ್ಲ. ಅವುಗಳ ಪರೀಕ್ಷೆ ಇನ್ನೂ ಮುಗಿಯದ ಕಾರಣ ಮೆಟ್ರೋ ಪ್ರಯಾಣಿಕರಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಹೀಗಾಗಿ ಶೀಘ್ರ ಆ ಎರಡು ರೈಲುಗಳ ಪರೀಕ್ಷೆ ಮುಗಿಸಿ ಅವುಗಳನ್ನು ವಾಣಿಜ್ಯ ಸಂಚಾರಕ್ಕೆ ಲಭ್ಯ ಮಾಡಬೇಕು ಎಂಬ ಆಗ್ರಹ ಕೇಳಿಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:58 pm, Fri, 29 May 26

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ