ಅಪ್ರಾಪ್ತ ಮಕ್ಕಳ ಮೇಲೆ ಕಾಂಗ್ರೆಸ್‌ ಮುಖಂಡನ ಪೈಶಾಚಿಕ ಕೃತ್ಯ: ಕಬ್ಬಿಣದ ರಾಡ್‌ನಿಂದ ಏಟು; ಪೊಕ್ಸೋ ಅಡಿಯಲ್ಲಿ ಕೇಸ್!

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಅಪ್ರಾಪ್ತ ಮಕ್ಕಳ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿದ ಕಾಂಗ್ರೆಸ್ ಮುಖಂಡ ಆನಂದ್ ನಾಯ್ಡು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪೊಕ್ಸೋ ಕೇಸ್ ದಾಖಲಾಗಿದೆ. ಅಲ್ಲದೆ ಸಂಬಂಧ ಹೊಂದಿದ್ದ ಮಹಿಳೆಯ ಪತಿಯ ಆಸ್ತಿ ಕಬಳಿಕೆ ಮಾಡಿದ ಆರೋಪವೂ ಕೇಳಿಬಂದಿದೆ.

ಅಪ್ರಾಪ್ತ ಮಕ್ಕಳ ಮೇಲೆ ಕಾಂಗ್ರೆಸ್‌ ಮುಖಂಡನ ಪೈಶಾಚಿಕ ಕೃತ್ಯ: ಕಬ್ಬಿಣದ ರಾಡ್‌ನಿಂದ ಏಟು; ಪೊಕ್ಸೋ ಅಡಿಯಲ್ಲಿ ಕೇಸ್!
ಆನಂದ ನಾಯ್ಡು
Edited By:

Updated on: Apr 28, 2026 | 2:09 PM

ಬೆಂಗಳೂರು, ಏಪ್ರಿಲ್ 28: ರಾಜಧಾನಿಯಲ್ಲಿ ಕಾಂಗ್ರೆಸ್‌ (Congress) ಮುಖಂಡನೊಬ್ಬ ಅಕ್ರಮ ಸಂಬಂಧದ ವಿಚಾರವಾಗಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ಜಿಲ್ಲಾ ಡಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಆನಂದ್ ನಾಯ್ಡು ಎಂಬಾತನ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಗಂಭೀರ ಪ್ರಕರಣ ದಾಖಲಾಗಿದೆ.

ಏನಿದು ಘಟನೆ?

ದೂರುದಾರ ರಾಘವೇಂದ್ರ ಎಂಬುವವರ ಪತ್ನಿಯ ಜೊತೆ ಕಾಂಗ್ರೆಸ್ ಮುಖಂಡ ಆನಂದ್ ನಾಯ್ಡು ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈ ವಿಚಾರವನ್ನು ರಾಘವೇಂದ್ರ ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಆನಂದ್ ನಾಯ್ಡು, ರಾಘವೇಂದ್ರ ಅವರ ಅಪ್ರಾಪ್ತ ಮಕ್ಕಳ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಕಬ್ಬಿಣದ ರಾಡ್‌ನಿಂದ ಮಕ್ಕಳ ಕಾಲು ಹಾಗೂ ಮೈಮೇಲೆ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದಲ್ಲದೆ, ಮಕ್ಕಳಿಗೆ ಕಚ್ಚಿ ವಿಕೃತಿ ಮೆರೆದಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.

ಇದನ್ನೂ ಓದಿ ಉದ್ಯೋಗ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ! ಮಹಿಳೆಯರನ್ನ ದಂಧೆಗೆ ಇಳಿಸ್ತಿದ್ದ ಕಿಂಗ್ ಪಿನ್ ಸೇರಿ 11 ಜನ ಅರೆಸ್ಟ್

ಆಸ್ತಿ ಲೂಟಿ ಆರೋಪ

ಮಕ್ಕಳ ಮೇಲಿನ ಹಲ್ಲೆ ಮಾತ್ರವಲ್ಲದೆ, ಪತಿ ರಾಘವೇಂದ್ರ ಅವರ ಒಪ್ಪಿಗೆ ಇಲ್ಲದೆಯೇ ಅವರ ಪತ್ನಿ ಮತ್ತು ಆನಂದ್ ನಾಯ್ಡು ಸೇರಿಕೊಂಡು ಆಸ್ತಿಯನ್ನು ಬರೆಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಕ್ರಮ ಸಂಬಂಧ ಮತ್ತು ಆಸ್ತಿ ಹಗರಣದ ಈ ಕರಾಳ ಮುಖ ಈಗ ಬೀದಿಗೆ ಬಂದಿದೆ. ಸದ್ಯ ಮಕ್ಕಳ ಹೇಳಿಕೆ ಹಾಗೂ ತಂದೆಯ ದೂರಿನ ಅನ್ವಯ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಆನಂದ್ ನಾಯ್ಡು ವಿರುದ್ಧ ಪೊಕ್ಸೋ (POCSO) ಕಾಯ್ದೆ ಹಾಗೂ ಹಲ್ಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ರಾಜಕೀಯ ಪ್ರಭಾವ ಬಳಸಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವ ಮುಖಂಡನ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:08 pm, Tue, 28 April 26

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us