AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಬೆಂಗಳೂರಿನಲ್ಲಿಲ್ಲ ಕಾಂಗ್ರೆಸ್​ ಪ್ರತಿಭಟನೆಗೆ ಅವಕಾಶ, ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮಕ್ಕೆ ಸೂಚಿಸಿದ ಪೊಲೀಸ್ ಆಯುಕ್ತರು

ಹೈಕೋರ್ಟ್‌ ಆದೇಶದಂತೆ ಫ್ರೀಡಂಪಾರ್ಕ್‌ನಲ್ಲಿ ಧರಣಿ ನಡೆಸಬೇಕು. ಆದರೆ ಕಾಂಗ್ರೆಸ್ ಬೆಂಗಳೂರಿನ ಹಲವೆಡೆ ಪ್ರತಿಭಟನೆ ಹಮ್ಮಿಕೊಂಡಿರುವುದರಿಂದ ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡಿಲ್ಲ.

ನಾಳೆ ಬೆಂಗಳೂರಿನಲ್ಲಿಲ್ಲ ಕಾಂಗ್ರೆಸ್​ ಪ್ರತಿಭಟನೆಗೆ ಅವಕಾಶ, ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮಕ್ಕೆ ಸೂಚಿಸಿದ ಪೊಲೀಸ್ ಆಯುಕ್ತರು
ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ (ಎಡ ಚಿತ್ರ)
TV9 Web
| Updated By: Rakesh Nayak Manchi|

Updated on:Jan 22, 2023 | 8:06 PM

Share

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಜನವರಿ 23ರಂದು ಕಾಂಗ್ರೆಸ್ ಪಕ್ಷವು ನಗರದ ಹಲವೆಡೆ ಪ್ರತಿಭಟನೆ (Congress Protest In Bengaluru) ಹಮ್ಮಿಕೊಂಡು ಜನಜಾಗೃತಿ ಮೂಡಿಸಲು ಯೋಜನೆ ರೂಪಿಸಿಕೊಂಡಿತ್ತು. ಆದರೆ ಹೈಕೋರ್ಟ್ ಆದೇಶದ ಅನ್ವಯ ಪ್ರೀಡಂ ಪಾರ್ಕ್​ನಲ್ಲಿ ಮಾತ್ರ ಧರಣಿ ನಡೆಸಬೇಕು. ಹೀಗಾಗಿ ನಗರದ ಹಲವೆಡೆ ಪ್ರತಿಭಟನೆ ನಡೆಸುವ ಕಾಂಗ್ರೆಸ್ ಮನವಿಯನ್ನು ತಿರಸ್ಕರಿಸಿದ ಪೊಲೀಸ್ ಇಲಾಖೆ, ನಾಳೆ ಕಾಂಗ್ರೆಸ್‌ ಪ್ರತಿಭಟನೆಗೆ ಅವಕಾಶ ನೀಡದಂತೆ ಆಯಾ ವಿಭಾಗದ ಡಿಸಿಪಿಗಳಿಗೆ ಖಡಕ್ ಸೂಚನೆ ನೀಡಿದೆ. ಕಾನೂನು ನಿಯಮ ಉಲ್ಲಂಘನೆ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ (Pratap Reddy) ಸೂಚಿಸಿದ್ದಾರೆ.

ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಾಳೆ ಬೆಳಗ್ಗೆ 10ರಿಂದ ನಗರದ ನೂರಾರು ಕಡೆಗಳಲ್ಲಿ ಮೌನ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಪ್ಲಾನ್ ಹಾಕಿಕೊಂಡಿತ್ತು. ಬೆಳಗ್ಗೆ 10ರಿಂದ ಮಧ್ಯಾಹ್ನ 12 ಗಂಟೆವರೆಗೆ 51 ಮೆಟ್ರೋ ನಿಲ್ದಾಣ, 26 ಫ್ಲೈಓವರ್​ಗಳಲ್ಲಿ ಹಾಗೂ 200 ಸಿಗ್ನಲ್​ಗಳಲ್ಲಿ ಮೌನ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಹೇಳಿತ್ತು.

ಹೈಕೋರ್ಟ್​ ಆದೇಶದ ಅನ್ವಯ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಲು ಅವಕಾಶ ಇದೆ. ಆದರೆ ಕಾಂಗ್ರೆಸ್​ನವರು ನೂರಾರು ಕಡೆಗಳಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿರುವ ಹಿನ್ನಲೆ ಪ್ರತಿಭಟನೆಗೆ ಅವಕಾಶ ನಿರಾಕರಿಸಲಾಗಿದೆ. ಅದಾಗ್ಯೂ ಬಿಜೆಪಿ ಸರ್ಕಾರದ ವಿರುದ್ಧ ಸಮರ ಸಾರಿರುವ ಕೈ ನಾಯಕರು ಪ್ರತಿಭಟನೆ ನಡೆಸಲು ಮುಂದಾಗಿದ್ದು, ಈ ಹಿನ್ನಲೆ ಆಯಾ ವಿಭಾಗದ ಡಿಸಿಪಿಗಳಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿಭಟನೆಗೆ ಅವಕಾಶ ನೀಡದಂತೆ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಪೆರು ರಾಜಧಾನಿಯಲ್ಲಿ ಸರ್ಕಾರದ ವಿರುದ್ದ ಹೆಚ್ಚಿದ ಆಕ್ರೋಶ, ರಾಜಧಾನಿ ಲಿಮಾದಲ್ಲಿ ಜನರಿಂದ ಪ್ರತಿಭಟನೆ, ಹಿಂಸಾಚಾರ

ಕಾನೂನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳಲು ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಕೆಎಸ್​​ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, ಪ್ರತಿಭಟನೆ ನಡೆಸುವವರನ್ನ ಸ್ಥಳದಲ್ಲೇ ವಶಕ್ಕೆ ಪಡೆಯುವಂತೆ ಕಟ್ಟಾಜ್ಞೆ ಹೊರಡಿಸಲಾಗಿದೆ.

ಈಗಾಗಲೇ ಕಾಂಗ್ರೆಸ್ ಪ್ರತಿಭಟನೆಯ ರೂಪುರೇಷೆಗಳು ಪೊಲೀಸ್ ಇಲಾಖೆ ಕೈ ಸೇರಿದ್ದು, ಎಲ್ಲೆಲ್ಲಿ ಪ್ರತಿಭಟನೆಗೆ ಸ್ಥಳ ಸೂಚಿಸಲಾಗಿದೆಯೋ ಅಲ್ಲಿ ಕೆಎಸ್​​ಆರ್​ಪಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದರ ಜೊತೆಗೆ ಆಯಾ ವ್ಯಾಪ್ತಿಯಲ್ಲಿ ಬರುವ ಪೊಲೀಸರನ್ನ ಭದ್ರತೆಗೆ ನಿಯೋಜನೆಗೆ ಸೂಚಿಸಲಾಗಿದ್ದು, ಸರಿ ಸುಮಾರು ನಗರದಾದ್ಯಂತ ಎಲ್ಲ ವಿಭಾಗಗಳು ಸೇರಿ 2000 ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನ ನಿಯೋಜನೆಗೆ ಮಾಡಲು ಪೊಲೀಸ್ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:06 pm, Sun, 22 January 23