Alert: ನೀವು ವಾಸಿಸುವ ಏರಿಯಾದಲ್ಲಿ ಯಾವುದಾದರೂ ಕಟ್ಟಡ ಶಿಥಿಲಗೊಂಡಿದೆಯೇ? ಬಿಬಿಎಂಪಿಯನ್ನು ಸಂಪರ್ಕಿಸಿ

ಶಿಥಿಲಗೊಂಡಿರುವ ಕಟ್ಟಡವನ್ನು ತೆರವುಗೊಳಿಸದಿದ್ದರೆ ಸಾವು ನೋವಿಗೆ ನೀವೇ ಹೊಣೆಗಾರರು ಎಂದು ಮನೆ ಮಾಲೀಕರಿಗೆ ಬಿಬಿಎಂಪಿ ದಾಸರಹಳ್ಳಿ ವಲಯದ ಜಂಟಿ ಆಯುಕ್ತ ನರಸಿಂಹಮೂರ್ತಿ ಎಚ್ಚರಿಕೆ ವಿಧಿಸಿದ್ದಾರೆ.

Follow us
TV9 Web
| Updated By: guruganesh bhat

Updated on:Sep 28, 2021 | 7:27 PM

ನೆಲಮಂಗಲ: ಬೆಂಗಳೂರಲ್ಲಿ ಶಿಥಿಲಗೊಂಡ ಕಟ್ಟಡಗಳ ಕುಸಿತ ಹೆಚ್ಚಾಗಿದ್ದು, ಟಿ.ದಾಸರಹಳ್ಳಿಯಲ್ಲಿ ಶಿಥಿಲಗೊಂಡ ಕಟ್ಟಡವೊಂದು ಕುಸಿಯುವ ಆತಂಕವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಸ್ಥಳೀಯರಿಂದ ದೂರು ಬಂದ ಹಿನ್ನೆಲೆಯಲ್ಲಿ ಕಟ್ಟಡವನ್ನು ಬಿಬಿಎಂಪಿ ದಾಸರಹಳ್ಳಿ ವಲಯದ ಜಂಟಿ ಆಯುಕ್ತ ನರಸಿಂಹಮೂರ್ತಿ ಪರಿಶೀಲಿಸಿದ್ದಾರೆ. ಜತೆಗೆ ಕಟ್ಟಡ ತೆರವುಗೊಳಿಸುವಂತೆ ಮನೆ ಮಾಲೀಕನಿಗೆ ಎಚ್ಚರಿಕೆ ನೀಡಿದ್ದಾರೆ.

ಶಿಥಿಲಗೊಂಡಿರುವ ಕಟ್ಟಡವನ್ನು ತೆರವುಗೊಳಿಸದಿದ್ದರೆ ಸಾವು ನೋವಿಗೆ ನೀವೇ ಹೊಣೆಗಾರರು ಎಂದು ಮನೆ ಮಾಲೀಕರಿಗೆ ಬಿಬಿಎಂಪಿ ದಾಸರಹಳ್ಳಿ ವಲಯದ ಜಂಟಿ ಆಯುಕ್ತ ನರಸಿಂಹಮೂರ್ತಿ ಎಚ್ಚರಿಕೆ ವಿಧಿಸಿದ್ದಾರೆ. ನಿಗದಿತ ಶುಲ್ಕ ಪಾವತಿಸಿದಲ್ಲಿ ಬಿಬಿಎಂಪಿ ತೆರವುಗೊಳಿಸುವ ಅವಕಾಶವೂ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಜತೆಗೆ ಕಟ್ಟಡ ತೆರವುಗೊಳಿಸಲು ವಾರ್ಡ್ ಇಂಜಿನಿಯರ್​ಗೆ ಸೂಚನೆ ನೀಡಿದ್ದಾರೆ. ಈಮೂಲಕ ಶಿಥಿಲಗೊಂಡ ಕಟ್ಟಡವನ್ನು ತೆರವುಗೊಳಿಸುವ ಶುಲ್ಕ ಪಾವತಿಸಿದರೆ ಬಿಬಿಎಂಪಿಯೇ ತೆರವುಗೊಳಿಸುವುದಾಗಿ ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಶಿಥಿಲಗೊಂಡ ಕಟ್ಟಡಗಳ ತೆರವಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್​​ ಗುಪ್ತಾ ಸೂಚನೆ ಬೆಂಗಳೂರು ನಗರದಲ್ಲಿ ಶಿಥಿಲಗೊಂಡ ಕಟ್ಟಡಗಳ ತೆರವಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್​​ ಗುಪ್ತಾ ಸೂಚನೆ ನೀಡಿದ್ದಾರೆ. ವಾಸಿಸಲು ಯೋಗ್ಯವಲ್ಲದ ಕಟ್ಟಡ ಬಾಡಿಗೆಗೆ ನೀಡಬಾರದು. ಅಂಥವರ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯ ಅಧಿಕಾರಿಗಳಿಗೆ ಹೇಳಿದ್ದಾರೆ. ಒಂದೊಮ್ಮೆ ಕಟ್ಟಡ ಮಾಲೀಕರ ನಿರ್ಲಕ್ಷ್ಯ ಕಂಡುಬಂದರೆ ಅವರ ವಿರುದ್ಧ ಎಫ್​ಐಆರ್ ದಾಖಲಿಸುವ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಎರಡು ದಿನದ ಅವಧಿಯಲ್ಲಿ ಎರಡು ಕಟ್ಟಡ ಕುಸಿತ ಪ್ರಕರಣ ನಡೆದಿದೆ. ಕಟ್ಟಡ ಶಿಥಿಲಗೊಂಡಿದ್ದರೂ ಅದನ್ನು ಬಳಕೆ ಮಾಡುತ್ತಿದ್ದದ್ದು ಹಾಗೂ ಬಾಡಿಗೆಗೆ ನೀಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಮೂರು ಅಂತಸ್ತಿನ ಕಟ್ಟಡಗಳು ಕುಸಿತವಾಗಿದ್ದು ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಹಿನ್ನೆಲೆಯಲ್ಲಿ ಗೌರವ್ ಗುಪ್ತಾ ಇದೀಗ ಅಧಿಕಾರಿಗಳಿಗೆ ಹೀಗೆ ಸೂಚನೆ ಕೊಟ್ಟಿದ್ದಾರೆ.

ಬೆಂಗಳೂರಿನ ಬಮೂಲ್ ಕ್ವಾರ್ಟರ್ಸ್‌ನಲ್ಲಿ ಕಟ್ಟಡ ಕುಸಿತ ಘಟನೆಗೆ ಸಂಬಂಧಿಸಿ ಕಟ್ಟಡ ಕುಸಿತ ಸ್ಥಳಕ್ಕೆ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಭೇಟಿ ನೀಡಿದ್ದಾರೆ. ಕಟ್ಟಡ ಪರಿಶೀಲನೆ ಬಳಿಕ ಕೆಎಂಎಫ್ ಎಂಡಿ ಸತೀಶ್ ಮಾತನಾಡಿದ್ದಾರೆ. 2016 ರಲ್ಲಿ ಕೆಎಂಎಫ್ ಇಂಜಿನಿಯರ್​ಗಳ ತಂಡ ಕಟ್ಟಡ ಪರಿಶೀಲಿಸಿತ್ತು. 10 ವರ್ಷ ವಾಸಿಸಲು ಯೋಗ್ಯ ಎಂದು ಪ್ರಮಾಣಪತ್ರ ನೀಡಿತ್ತು. ಹೀಗಾಗಿ, ನಿವಾಸಿಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ನಷ್ಟದ ಬಗ್ಗೆ ಪರಿಶೀಲನಾ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು. ಯಾರೂ ಸಹ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 

World Rabies Day 2021: ರೇಬೀಸ್ ರೋಗದ ಕುರಿತಾಗಿ ನೀವು ತಿಳಿಯಬೇಕಾದ ಒಂದಿಷ್ಟು ಮಾಹಿತಿ ಇಲ್ಲಿದೆ

ಲ್ಯಾಂಡ್​ಸ್ಯಾಟ್​ 9 ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ನಾಸಾ; ಏನಿದರ ವಿಶೇಷತೆ?

(Bengaluru contact BBMP If the building dilapidated near your home)

Published On - 7:14 pm, Tue, 28 September 21

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?