ಗಗನಕ್ಕೇರಿದ ಕೊಬ್ಬರಿ ಎಣ್ಣೆ ದರ: ಲೀಟರ್​ಗೆ 300 ರೂಪಾಯಿ

ಬೆಂಗಳೂರಿನಲ್ಲಿ ಅಡುಗೆ ಎಣ್ಣೆಯ ಬೆಲೆ ಏರಿಕೆಯಾಗಿದ್ದು, ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತೆಂಗಿನ ಎಣ್ಣೆಯ ದರ ಲೀಟರ್‌ಗೆ 300 ರೂಪಾಯಿಗಳನ್ನು ದಾಟಿದೆ. ಎಳನೀರಿನ ಬೇಡಿಕೆ ಹೆಚ್ಚಾದ ಕಾರಣ ಕೊಬ್ಬರಿ ಪೂರೈಕೆ ಕಡಿಮೆಯಾಗಿದೆ. ಇದರಿಂದಾಗಿ ಇತರ ಅಡುಗೆ ಎಣ್ಣೆಗಳ ಬೆಲೆಯೂ ಏರಿಕೆಯಾಗಿದೆ. ಈ ಬೆಲೆ ಏರಿಕೆಯು ಮಧ್ಯಮ ವರ್ಗದ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ.

ಗಗನಕ್ಕೇರಿದ ಕೊಬ್ಬರಿ ಎಣ್ಣೆ ದರ: ಲೀಟರ್​ಗೆ 300 ರೂಪಾಯಿ
ಗಗನಕ್ಕೇರಿದ ಕೊಬ್ಬರಿ ಎಣ್ಣೆ ದರ: ಲೀಟರ್​ಗೆ 300 ರೂಪಾಯಿ

Updated on: Feb 23, 2025 | 8:21 AM

ಬೆಂಗಳೂರು, ಫೆಬ್ರವರಿ 23: ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರಿಗೆ ಬರ ಸಿಡಿಲು ಬಡಿದಂತಾಗಿದೆ. ಮಧ್ಯಮ ವರ್ಗದ ಜನರ ಪಾಡು ಕೆಳೋರೆ ಇಲ್ಲದಂತೆ ಆಗಿದ್ದು, ದಿನ ಬಳಕೆ ವಸ್ತುಗಳು ಗಗನ ಕುಸುಮವಾಗಿವೆ. ಈಗ ಅಡುಗೆ ಎಣ್ಣೆ (Cooking Oil) ಸಹ ಜಾಸ್ತಿಯಾಗಿದ್ದು, ದರ ಕೇಳಿ ಜನ ದಂಗಾಗಿದ್ದಾರೆ. ಅಡುಗೆ ಎಣ್ಣೆಗೆ ಬೆಲೆ ಏರಿಕೆಯ ಬರೆ ಬಿದ್ದಿದೆ.

ಕೊಬ್ಬರಿ ಎಣ್ಣೆ ದರ ಲೀಟರ್‌ಗೆ 300 ರೂ. ಗಡಿ ದಾಟಿದೆ. ಎಳನೀರು ಯಥೇಚ್ಛವಾಗಿ ಮಾರಾಟವಾಗುತ್ತಿರುವ ಕಾರಣ ಕೊಬ್ಬರಿ ಬೇಡಿಕೆ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ. ಇದರ ನೇರ ಪರಿಣಾಮ ತೆಂಗಿನ ಎಣ್ಣೆಯ ಮೇಲೆ ಬಿದ್ದಿದೆ. 15 ಕೆಜಿ ಟಿನ್ ಕೊಬ್ಬರಿ ಎಣ್ಣೆ ದರ 4,600 ರೂಪಾಯಿ ಆಗಿದೆ.

ಸಾಧಾರಣವಾಗಿ ಮಾರ್ಚ್‌ ಮಧ್ಯಭಾಗದಿಂದ ರಾಜ್ಯದಲ್ಲಿ ಬಿಸಿಲು ಹೆಚ್ಚಾಗುತ್ತದೆ. ಆದರೆ ಈ ಬಾರಿ ಫೆಬ್ರವರಿ ಕೊನೆಯಿಂದಲೇ ಉಷ್ಣಾಂಶ ಏರಿಕೆಯಾಗುತ್ತಿದ್ದು ಎಳೆನೀರಿಗೆ ಹೆಚ್ಚು ಬಳಕೆಯಾಗುತ್ತಿವೆ. ಇದರ ಜೊತೆ ಕೊಬ್ಬರಿಯ ದರವೂ ಏರಿಕೆಯಾಗಿದೆ. ಇನ್ನು ಸನ್ ಫ್ಲವರ್, ಪಾಮ್ ಆಯಿಲ್, ಕಡಲೇಕಾಯಿ ಎಣ್ಣೆ, ಅರಳೆಎಣ್ಣೆ ಹಾಗೂ ಸಾಸಿವೆ ಎಣ್ಣೆ ಕೂಡ 10-20 ರೂ. ರೂ. ಹೆಚ್ಚಾಗಿದೆ.

ಇದನ್ನೂ ಓದಿ: ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ನೀಡಿದ್ರು ಬಿಗ್​ ಅಪ್ಡೇಟ್

ಹಾಲಿನ ದರ ಏರಿಕೆ ಸಾಧ್ಯತೆ

ಹಾಲಿನ ದರ ಏರಿಕೆಗಾಗಿ ರಾಜ್ಯ ಸರ್ಕಾರದ ಮೇಲೆ ಹಾಲು ಒಕ್ಕೂಟಗಳು ಒತ್ತಡ ಹೇರುತ್ತಿದ್ದು, ಲೀಟರ್​​ಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿವೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿತ್ತು. ಕಳೆದ ತಿಂಗಳು ಪಶು ಸಂಗೋಪನಾ ಸಚಿವರು ಕೆಎಂಎಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಸಭೆಯಲ್ಲಿ ಹಾಲಿನ ದರ ಏರಿಕೆ ಮಾಡಬೇಕಾದ ಅನಿವಾರ್ಯತೆ ಕುರಿತು ಚರ್ಚೆಯಾಗಿತ್ತು. ಈ ವೇಳೆ ಹಾಲಿನ ದರ ಲೀಟರಿಗೆ 5 ರೂಪಾಯಿ ಏರಿಸಬೇಕು ಎಂದು ಒಕ್ಕೂಟಗಳು ಪ್ರಸ್ತಾವನೆ ಸಲ್ಲಿಸಿದ್ದವು. ಸಂಗೋಪನೆಯ ಖರ್ಚು ವೆಚ್ಚಗಳ ಹೆಚ್ಚಳದಿಂದ ಬೆಲೆ ಏರಿಸಲೇ ಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಹೇಳಿದ್ದವು.

ವರದಿ: ಲಕ್ಷ್ಮೀ. ಎನ್

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ