AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಎಳಿಯುವ ಮುನ್ನ ಎಚ್ಚರ: ಚಿಕ್ಕಜಾಲದಲ್ಲಿ ಧೂಮಪಾನಿಗಳ ಬೆವರಿಳಿಸಿದ ರಾಣಿ ಚೆನ್ನಮ್ಮ ಪಡೆ

ಬೆಂಗಳೂರಿನಲ್ಲಿ ಸಾರ್ವಜನಿಕ ಆರೋಗ್ಯ ಕಾಪಾಡಲು ಪೊಲೀಸ್ ಆಯುಕ್ತರ ಆದೇಶದಂತೆ ಈಶಾನ್ಯ ವಿಭಾಗದ 'ರಾಣಿ ಚೆನ್ನಮ್ಮ ಪಡೆ' ಚಿಕ್ಕಜಾಲದಲ್ಲಿ ಕೋತ್ಪಾ (COTPA) ಕಾಯ್ದೆ ಜಾರಿಗೊಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದ 10 ಮಂದಿಗೆ ದಂಡ ವಿಧಿಸಿ, ಧೂಮಪಾನದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ಪರೋಕ್ಷ ಧೂಮಪಾನದಿಂದಾಗುವ ಹಾನಿಯ ಕುರಿತು ಮನವರಿಕೆ ಮಾಡಿಕೊಟ್ಟು, ಆರೋಗ್ಯಕರ ಬೆಂಗಳೂರು ನಿರ್ಮಾಣಕ್ಕೆ ಸಹಕರಿಸಲು ಮನವಿ ಮಾಡಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಎಳಿಯುವ ಮುನ್ನ ಎಚ್ಚರ: ಚಿಕ್ಕಜಾಲದಲ್ಲಿ ಧೂಮಪಾನಿಗಳ ಬೆವರಿಳಿಸಿದ ರಾಣಿ ಚೆನ್ನಮ್ಮ ಪಡೆ
ರಾಣಿ ಚೆನ್ನಮ್ಮ ಪಡೆImage Credit source: Twitter
ಅಕ್ಷಯ್​ ಪಲ್ಲಮಜಲು​​
|

Updated on:Jun 22, 2026 | 1:05 PM

Share

ಬೆಂಗಳೂರು, ಜೂ.22: ರಾಜಧಾನಿಯಲ್ಲಿ ಸಾರ್ವಜನಿಕ ಆರೋಗ್ಯ ಕಾಪಾಡುವ ಮತ್ತು ಧೂಮಪಾನ ಮುಕ್ತ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಈಶಾನ್ಯ ವಿಭಾಗದ ‘ರಾಣಿ ಚೆನ್ನಮ್ಮ ಪಡೆ’ ಭರ್ಜರಿ ಕಾರ್ಯಾಚರಣೆ ಕೈಗೊಂಡಿದೆ. ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯ್ದೆ (COTPA) ಉಲ್ಲಂಘಿಸುವವರ ವಿರುದ್ಧ ವಿಶೇಷ ಜಾಗೃತಿ ಹಾಗೂ ಕಠಿಣ ಜಾರಿ ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಕಾರ್ಯಾಚರಣೆಯ ವೇಳೆ ರಾಣಿ ಚೆನ್ನಮ್ಮ ಪಡೆ ಹಾಗೂ ಚಿಕ್ಕಜಾಲ ಠಾಣೆಯ ಸಿಬ್ಬಂದಿ ತಂಡವು ಬಸ್ ನಿಲ್ದಾಣಗಳು, ಪ್ರಮುಖ ವಾಣಿಜ್ಯ ಸಂಕೀರ್ಣಗಳ ಸುತ್ತಮುತ್ತಲಿನ ಪ್ರದೇಶಗಳು, ಸಾರ್ವಜನಿಕ ರಸ್ತೆ ಬದಿಗಳು ಹಾಗೂ ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ ದಿಢೀರ್ ಪರಿಶೀಲನೆ ನಡೆಸಿತು. ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲೇ ನಿಯಮ ಉಲ್ಲಂಘಿಸಿ ಧೂಮಪಾನ ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆಹಚ್ಚಿ, ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ ಅಡಿಯಲ್ಲಿ ಒಟ್ಟು 10 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗಿದೆ.

ಇಲ್ಲಿದೆ ನೋಡಿ ಎಕ್ಸ್ ಪೋಸ್ಟ್​:

ಕೇವಲ ಕಾನೂನು ಕ್ರಮ ಜರುಗಿಸುವುದಷ್ಟೇ ಅಲ್ಲದೆ, ಪೊಲೀಸರು ಸ್ಥಳದಲ್ಲೇ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದರಿಂದ ಉಂಟಾಗುವ ಆರೋಗ್ಯ ಹಾನಿಗಳು ಹಾಗೂ ಪರೋಕ್ಷವಾಗಿ ಧೂಮಪಾನದಿಂದ ಸುತ್ತಮುತ್ತಲಿನ ಮಹಿಳೆಯರು, ಮಕ್ಕಳು ಸೇರಿದಂತೆ ಇತರೆ ಅಮಾಯಕ ಸಾರ್ವಜನಿಕರಿಗೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಮನವರಿಕೆ ಮಾಡಿಕೊಟ್ಟರು. ಕೋತ್ಪಾ (COTPA) ಕಾಯ್ದೆಯ ಕಠಿಣ ನಿಯಮಗಳ ಬಗ್ಗೆ ವಿವರಿಸಿ, ನಗರವನ್ನು ಆರೋಗ್ಯಕರವಾಗಿಸಲು ಸಹಕರಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಮನೆಗಳ ಮುಳುಗಡೆಗೆ ರಸ್ತೆಗಳೇ ಕಂಟಕ: ಮಿಲ್ಲಿಂಗ್ ಮಾಡದೆ ಡಾಂಬರು ಹಾಕಿ ಮನೆಗಳಿಗಿಂತ ರಸ್ತೆ ಎತ್ತರಿಸುತ್ತಿರುವ ಜಿಬಿಎ

“ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಕಾನೂನುಬಾಹಿರ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಇಂತಹ ಉಲ್ಲಂಘನೆಗಳ ವಿರುದ್ಧ ಪೊಲೀಸ್ ಇಲಾಖೆಯು ಮುಂಬರುವ ದಿನಗಳಲ್ಲೂ ನಿರಂತರವಾಗಿ ಇಂತಹ ಜಾಗೃತಿ ಹಾಗೂ ಜಾರಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಲಿದೆ” ಎಂದು ಅಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:03 pm, Mon, 22 June 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್