AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಂದು ಚೀಟಿ ಪಂಗನಾಮ: ಬರೋಬ್ಬರಿ 40 ಕೋಟಿ ರೂ.ನೊಂದಿಗೆ ದಂಪತಿ ಎಸ್ಕೇಪ್‌

ಬೆಂಗಳೂರಿನ ಜರಗನಹಳ್ಳಿಯಲ್ಲಿ ವಾಸವಾಗಿದ್ದ ದಂಪತಿ ಕೋಟ್ಯಾಂತರ ರೂಪಾಯಿ ಚೀಟಿ ಹಣ ತೆಗೆದುಕೊಂಡು ಪರಾರಿಯಾಗಿದ್ದಾರೆ. ಸುಧಾ ಮತ್ತು ಸಿದ್ದಿಚಾರಿ ದಂಪತಿ 600ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಪರಾರಿಯಾಗಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ವಂಚನೆಗೊಳಗಾದವರು ಆರೋಪಿಗಳನ್ನು ಬಂಧಿಸಿ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ಚೀಟಿ ಪಂಗನಾಮ: ಬರೋಬ್ಬರಿ 40 ಕೋಟಿ ರೂ.ನೊಂದಿಗೆ ದಂಪತಿ ಎಸ್ಕೇಪ್‌
ಆರೋಪಿಗಳಾದ ಸುಧಾ, ಸಿದ್ದಿಚಾರಿ
ವಿವೇಕ ಬಿರಾದಾರ
|

Updated on:Jul 06, 2025 | 6:08 PM

Share

ಬೆಂಗಳೂರು, ಜುಲೈ 06: ಚೀಟಿ ಹಣಕ್ಕಾಗಿ (Bengaluru Chit Fund Fraud) ಆಸೆ ಪಟ್ಟು ಅದೆಷ್ಟೋ ಜನರು ಮೋಸ ಹೋಗಿದ್ದಾರೆ. ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಚೀಟಿ ಹಣ ಕಟ್ಟಿಸಿಕೊಂಡು ದಂಪತಿ ಪರಾರಿಯಾಗಿರುವ ಘಟನೆ ಬೆಂಗಳೂರಿನ (Bengaluru) ಜರಗನಹಳ್ಳಿಯಲ್ಲಿ ನಡೆದಿದೆ. ಆರೋಪಿಗಳಾದ ಸುಧಾ ಮತ್ತು ಸಿದ್ದಿಚಾರಿ ಸುಮಾರು 40 ಕೋಟಿ ರೂ.‌ ಚೀಟಿ ಹಣ ಕಟ್ಟಿಸಿಕೊಂಡು ಪರಾರಿಯಾಗಿ ಒಂದು ತಿಂಗಳು ಕಳೆದಿದೆ. ಆದರೆ, ಇನ್ನೂವರೆಗೂ ಪೊಲೀಸರ ಬಲೆಗೆ ಬಿದ್ದಿಲ್ಲ.

ಪುಟ್ಟೇನಹಳ್ಳಿ ಠಾಣೆ ಪೊಲೀಸರು ಮೂರು ತಂಡಗಳಾಗಿ ಆರೋಪಿಗಳಾದ ಸುಧಾ ಮತ್ತು ಸಿದ್ದಾಚಾರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ನಡುವೆ ವಂಚನೆಗೆ ಒಳಗಾದವರು ಗೃಹ ಸಚಿವ ಜಿ‌.ಪರಮೇಶ್ವರ್ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮೊರೆ ಹೋಗಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಹಿಡಿದು ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ.

ಏನಿದು ಪ್ರಕರಣ?

ಜರಗನಹಳ್ಳಿಯಲ್ಲಿ ವಾಸವಾಗಿದ್ದ ಸುಧಾ ಎಂಬುವರ ಕುಟುಂಬ ಕಳೆದ 20 ವರ್ಷದಿಂದ ಚೀಟಿ ಹಣ ನಡೆಸುತ್ತಿದೆ. ಈ ಕುಟುಂಬ ಸುಮಾರು 600ಕ್ಕೂ ಹೆಚ್ಚು ಜನರಿಂದ ಚೀಟಿ ಹಣ ಕಟ್ಟಿಸಿಕೊಂಡಿದೆ. ಸಾರ್ವಜನಿಕರು 5 ರಿಂದ 10 ಲಕ್ಷ ರೂ.ವರೆಗೂ ಚೀಟಿ ಹಣ ಕಟ್ಟಿದ್ದಾರೆ. ಆದರೆ, ಸುಧಾ ಮತ್ತು ಆಕೆಯ ಪತಿ ಸಿದ್ದಾಚಾರಿ ಕಳೆದ ಒಂದು ವರ್ಷದಿಂದ ಚೀಟಿ ಹಣ ನೀಡದೆ ಸತಾಯಿಸುತ್ತಿದ್ದರು. ಈ ನಡುವೆ ಸುಧಾ ಮತ್ತು ಸಿದ್ದಾಚಾರಿ ದಂಪತಿ ತಮ್ಮ ಇಬ್ಬರು ಮಕ್ಕಳ ಸಮೇತ ಜೂನ್​ 3ರ ಮಧ್ಯರಾತ್ರಿ ಇದ್ದಕ್ಕಿದ್ದಂತೆ ಮನೆ ಬಿಟ್ಟು ಹೋಗಿದ್ದಾರೆ.

ಇದನ್ನೂ ಓದಿ
Image
ಇಡಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಪತ್ತೆ: ರನ್ಯಾ​ಗೆ ಸೇರಿದ ಆಸ್ತಿ ಜಪ್ತಿ
Image
ಗುಡ್ ನ್ಯೂಸ್: ಶೀಘ್ರವೇ ಹೆಬ್ಬಾಳ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ
Image
ದೇಶದ ಮೊದಲ ಸಂಪೂರ್ಣ ಯುಪಿಐ ಆಧಾರಿತ ಬ್ಯಾಂಕ್ ಶಾಖೆ ಬೆಂಗಳೂರಿನಲ್ಲಿ ಶುರು
Image
ಬೆಂಗಳೂರು: ಅಪಾರ್ಟ್‌ಮೆಂಟ್​ನಲ್ಲಿ ಸಿಕ್ಕ ಅಸ್ಥಿಪಂಜರ ಪ್ರಕರಣಕ್ಕೆ ಟ್ವಿಸ್ಟ್

ಮನೆ ಬಿಟ್ಟು ಹೋಗುವ ಮುನ್ನ, ದಂಪತಿ ಬ್ಯಾಂಕ್‌ನಲ್ಲಿದ್ದ ತಮ್ಮ ಚಿನ್ನವನ್ನೆಲ್ಲ ಬಿಡಿಸಿಕೊಂಡಿದ್ದಾರೆ. ಬಳಿಕ, ಮನೆಯಲ್ಲೇ ಮೊಬೈಲ್ ಬಿಟ್ಟು, ಬೇರೆಲ್ಲ ವಸ್ತುಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ದಂಪತಿ ಕಾಣೆಯಾದ ಮರುದಿನ ಸುಧಾ ತವರು ಮನೆಯವರು ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಬೆಸ್ಕಾಂ ಟೆಂಪರರಿ ಕನೆಕ್ಷನ್ ಪಡೆದವರ ಬವಣೆ: ಸರ್ಕಾರ ತೋರಬೇಕಿದೆ ಕರುಣೆ..!

ಚೀಟಿ ಹಣ ಕಟ್ಟಿದವರು ಕೂಡ ಪುಟ್ಟೇನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ. ಆದರೆ, ಸುಧಾ ಕುಟುಂಬ ಕಳೆದ ಒಂದು ತಿಂಗಳಿಂದ ಪತ್ತೆಯಾಗಿಲ್ಲ. ಮೊಬೈಲ್ ಬಳಸುತ್ತಿಲ್ಲ, ಸಂಬಂಧಿಕರ ಸಂಪರ್ಕಕ್ಕೂ ಸಿಗದೆ ಸುಧಾ ಕುಟುಂಬ ಭೂಗತವಾಗಿದೆ. ಪುಟ್ಟೇನಹಳ್ಳಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ವರದಿ: ಪ್ರದೀಪ್​ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:02 pm, Sun, 6 July 25

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ