Viral Video: ವರಮಹಾಲಕ್ಷ್ಮಿ ಹಬ್ಬದಂದು ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಪೂಜೆ ಮಾಡಿದ ಜನ!

ಬೆಂಗಳೂರಿನ ಕಳಪೆ ರಸ್ತೆಗಳ ವಿರುದ್ಧ ಪ್ರತಿಭಟಿಸಲು ವಿನೂತನವಾದ ಕ್ರಮವನ್ನು ಆಯ್ಕೆ ಮಾಡಿಕೊಂಡ ನಿವಾಸಿಗಳು ರಸ್ತೆಯ ಗುಂಡಿಗಳಿಗೆ ಪೂಜೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಜಯನಗರದ ನಿವಾಸಿಗಳು ವರಮಹಾಲಕ್ಷ್ಮಿ ವ್ರತದ ನಿಮಿತ್ತ ವಿಶೇಷವಾಗಿ ರಸ್ತೆ ಗುಂಡಿಗೆ ಪೂಜೆ ಸಲ್ಲಿಸಿದ್ದಾರೆ.

Follow us
ಸುಷ್ಮಾ ಚಕ್ರೆ
|

Updated on:Aug 17, 2024 | 8:28 PM

ಬೆಂಗಳೂರು: ಬೆಂಗಳೂರಿನ ಕಳಪೆ ರಸ್ತೆಗಳಿಂದ ಜನರು ಬೇಸತ್ತಿದ್ದಾರೆ. ಇದರ ವಿರುದ್ಧ ಪ್ರತಿಭಟಿಸಲು ವಿನೂತನ ಮಾರ್ಗ ಕಂಡುಕೊಂಡ ಜಯನಗರದ ದಂಪತಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ರಸ್ತೆ ಗುಂಡಿಗಳಿಗೆ ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ರಸ್ತೆಯ ಹೊಂಡಗಳಿಂದ ಹಲವಾರು ಅಪಘಾತಗಳು ಉಂಟಾಗಿ, ಜೀವಗಳನ್ನು ಬಲಿತೆಗೆದುಕೊಳ್ಳುತ್ತಿವೆ. ಈ ಬಗ್ಗೆ ದೂರುಗಳ ಹೊರತಾಗಿಯೂ, ಅನೇಕ ನಗರಗಳಲ್ಲಿ ರಸ್ತೆ ಪರಿಸ್ಥಿತಿಗಳು ಹದಗೆಡುವುದರೊಂದಿಗೆ ಸಮಸ್ಯೆ ಮುಂದುವರಿದಿದೆ.

ಬೈಕ್ ಸವಾರರು ಮತ್ತು ವಾಹನಗಳು ಗಂಭೀರ ಅಪಘಾತಗಳನ್ನು ಎದುರಿಸುತ್ತಿರುವ ವೀಡಿಯೊಗಳು ಮತ್ತು ಸಿಸಿಟಿವಿ ದೃಶ್ಯಗಳು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಆದರೆ, ಹಲವು ಪ್ರದೇಶಗಳಲ್ಲಿ ಸ್ಥಳೀಯರು ಪದೇ ಪದೇ ಮನವಿ ಮಾಡಿದರೂ ರಸ್ತೆ ಸ್ಥಿತಿ ಬದಲಾಗಿಲ್ಲ. ಹೀಗಾಗಿ, ರಸ್ತೆಯ ಹೊಂಡಗಳಿಗೆ ಹೂವು ಹಾಕಿ, ಆರತಿ ಮಾಡಿ ಪೂಜೆ ಮಾಡುವ ಮೂಲಕ ಜಯನಗರದ ದಂಪತಿ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: Crime News: 13 ವರ್ಷದ ಮಗಳ ಮೇಲೆ ಅಪ್ಪನಿಂದ ಅತ್ಯಾಚಾರ; ಉತ್ತರ ಪ್ರದೇಶದಲ್ಲೊಂದು ಶಾಕಿಂಗ್ ಘಟನೆ

ನೀರು ತುಂಬಿದ ಬೆಂಗಳೂರಿನ ದೊಡ್ಡ ಗುಂಡಿಯ ಸುತ್ತ ಮಹಿಳೆ ಮತ್ತು ಪುರುಷ ಧಾರ್ಮಿಕ ಕ್ರಿಯೆಯನ್ನು ನಡೆಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಅವರು ಆ ಗುಂಡಿಗೆ ಹೂವಿನ ದಳಗಳು, ಅರಿಶಿನ ಪುಡಿ ಮತ್ತು ಕುಂಕುಮವನ್ನು ಹಾಕಿ ಪೂಜೆ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 pm, Sat, 17 August 24

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು