AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10.45 ಗಂಟೆಯಲ್ಲಿ ಶ್ರೀಲಂಕಾದಿಂದ ಭಾರತಕ್ಕೆ ಈಜಿದ ಜೋಡಿ: ಐತಿಹಾಸಿಕ ಸಾಧನೆ ಮಾಡಿದ ಬೆಂಗಳೂರಿನ ದಂಪತಿ

ಬೆಂಗಳೂರಿನ ಡ್ಯಾನಿಶ್ ಅಬ್ದಿ ಮತ್ತು ವೃಶಾಲಿ ಪ್ರಸಾದ್ ದಂಪತಿ ಶ್ರೀಲಂಕಾದಿಂದ ಭಾರತಕ್ಕೆ ಪಾಲ್ಕ್ ಜಲಸಂಧಿ ಮೂಲಕ ಈಜಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. 32 ಕಿ.ಮೀ. ದೂರವನ್ನು 10 ಗಂಟೆ 45 ನಿಮಿಷಗಳಲ್ಲಿ ಕ್ರಮಿಸಿ, ಈ ಮಾರ್ಗದಲ್ಲಿ ಓಪನ್ ವಾಟರ್ ಈಜು ಪೂರ್ಣಗೊಳಿಸಿದ ಮೊದಲ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರ ಈ ಸಾಧನೆ ಭಾರಿ ಮೆಚ್ಚುಗೆಗೆ ವ್ಯಕ್ತವಾಗಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

10.45 ಗಂಟೆಯಲ್ಲಿ ಶ್ರೀಲಂಕಾದಿಂದ ಭಾರತಕ್ಕೆ ಈಜಿದ ಜೋಡಿ: ಐತಿಹಾಸಿಕ ಸಾಧನೆ ಮಾಡಿದ ಬೆಂಗಳೂರಿನ ದಂಪತಿ
10.45 ಗಂಟೆಯಲ್ಲಿ ಶ್ರೀಲಂಕಾದಿಂದ ಭಾರತಕ್ಕೆ ಈಜಿದ ಜೋಡಿ
ಪ್ರಸನ್ನ ಹೆಗಡೆ
|

Updated on: May 12, 2026 | 3:54 PM

Share

ಬೆಂಗಳೂರು, ಮೇ 12: ಶ್ರೀಲಂಕಾದಿಂದ ಭಾರತಕ್ಕೆ ಐತಿಹಾಸಿಕ ರಾಮಸೇತು ಮಾರ್ಗದ ಮೂಲಕ ಈಜಿ ಬೆಂಗಳೂರಿನ (Bengaluru) ದಂಪತಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಆ ಮೂಲಕ ಡ್ಯಾನಿಶ್ ಅಬ್ದಿ ಮತ್ತು ವೃಶಾಲಿ ಪ್ರಸಾದ್ ಈ ಮಾರ್ಗದ ಮೂಲಕ ಓಪನ್ ವಾಟರ್ ಈಜು ಪೂರ್ಣಗೊಳಿಸಿದ ಮೊದಲ ಜೋಡಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಮೇ 7ರಂದು ಶ್ರೀಲಂಕಾದ ತಲೈಮನ್ನಾರ್‌ನಿಂದ ಬೆಳಗ್ಗೆ ಸುಮಾರು 4.30ಕ್ಕೆ ಈಜು ಆರಂಭಿಸಿದ್ದ ದಂಪತಿ, ತಮಿಳುನಾಡಿನ ಧನುಷ್ಕೋಡಿಗೆ ಮಧ್ಯಾಹ್ನ ಸುಮಾರು 3.15ಕ್ಕೆ ತಲುಪಿದ್ದಾರೆ. ಪಾಲ್ಕ್ ಜಲಸಂಧಿಯಲ್ಲಿ ಸುಮಾರು 32 ಕಿಲೋಮೀಟರ್ ದೂರವನ್ನು ಈ ಸಮಯದಲ್ಲಿ ಅವರು ಈಜಿದ್ದಾರೆ. ಈ ಸವಾಲಿನ ಈಜು ಪೂರ್ಣಗೊಳಿಸಲು ಅವರಿಗೆ 10 ಗಂಟೆ 45 ನಿಮಿಷಗಳು ತಗುಲಿವೆ.

ಮುಖ್ಯಾಂಶಗಳು

  • ಶ್ರೀಲಂಕಾದಿಂದ ಭಾರತಕ್ಕೆ ಒಟ್ಟಾಗಿ ಈಜಿದ ದಂಪತಿ
  • ಬೆಂಗಳೂರಿನ ದಂಪತಿಯಿಂದ ಐತಿಹಾಸಿಕ ಸಾಧನೆ
  • 10 ಗಂಟೆ 45 ನಿಮಿಷದಲ್ಲಿ 32 ಕಿ.ಮೀ. ಈಜಿದ ಜೋಡಿ

ಇದನ್ನೂ ಓದಿ: 30 ಕಿಮೀ ಸಮುದ್ರ ಈಜಿ ದಾಖಲೆ ಬರೆದ ಚಿನ್ನದ ನಾಡಿನ ಬಾಲಕಿ

ಸೋಶಿಯಲ್​ ಮೀಡಿಯಾ ಪೋಸ್ಟ್​​ ಮೂಲಕ ಸಂತಸ

ಸಾಹಸ ಯಶಸ್ವಿಯಾದ ಬಳಿಕ ಇನ್‌ಸ್ಟಾಗ್ರಾಂನಲ್ಲಿ ಈ ಬಗ್ಗೆ ದಂಪತಿ ಸಂತಸ ಹಂಚಿಕೊಂಡಿದ್ದು, ನಾವು ಸಾಧಿಸಿದ್ದೇವೆ! ಶ್ರೀಲಂಕಾದಿಂದ ಭಾರತಕ್ಕೆ. 10 ಗಂಟೆ 45 ನಿಮಿಷದ ನೀರಿನ ಹಾದು ಅತ್ಯಂತ ಕಠಿಣವಾಗಿತ್ತು. ಈಗ 12 ಗಂಟೆಗಳ ಅಲಾರ್ಮ್ ಇಲ್ಲದ ನಿದ್ರೆ ಬೇಕಾಗಿದೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ನಂತರ ಮತ್ತೊಂದು ಪೋಸ್ಟ್‌ನಲ್ಲಿ, ಕೇವಲ ನಾಲ್ಕು ವರ್ಷಗಳ ಹಿಂದೆ ಈಜು ಕಲಿಯಲು ಆರಂಭಿಸಿದ್ದೇವೆ. ಇಷ್ಟು ದೂರ ಬಂದಿದ್ದೇವೆ ಎಂಬುದನ್ನು ಇನ್ನೂ ನಂಬಲಾಗುತ್ತಿಲ್ಲ. ಈ ಸಾಹಸದಲ್ಲಿ ಒಬ್ಬರ ಜೊತೆಗೊಬ್ಬರು ಇದ್ದದ್ದು ನಮಗೆ ಮಾನಸಿಕ ಹಾಗೂ ಭಾವನಾತ್ಮಕ ಶಕ್ತಿಯಾಯಿತು. ನಮ್ಮ ಕೋಚ್‌ಗಳಾದ ಸತೀಶ್ ಮತ್ತು ಯಾಕೂಬ್ ಅವರು ನೀಡಿದ ತರಬೇತಿಯೇ ಈ ದೊಡ್ಡ ಸವಾಲನ್ನು ಎದುರಿಸಲು ಸಹಾಯ ಮಾಡಿತು ಎಂದು ತಿಳಿಸಿದ್ದಾರೆ. ಈಜಿನ ವೇಳೆ ಭಾರತೀಯ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ, ವೈದ್ಯಕೀಯ ತಂಡ ಹಾಗೂ ಸಹಾಯಕ ದೋಣಿಗಳು ಸಂಪೂರ್ಣ ಸುರಕ್ಷತಾ ವ್ಯವಸ್ಥೆ ಒದಗಿಸಿದ್ದವು.

ದಂಪತಿಯ ಸಾಧನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ನಿಮ್ಮ ಸಾಧನೆ ಅನೇಕರಿಗೆ ಪ್ರೇರಣೆಯಾಗಿದೆ, ಎಂದು ಒಬ್ಬರು ಕಾಮೆಂಟ್ ಮಾಡಿದ್ದರೆ, ಮತ್ತೊಬ್ಬರು ಅಸಾಧ್ಯವೆನ್ನುವುದೇ ಇಲ್ಲ ಎಂಬುದನ್ನು ನೀವು ಸಾಬೀತುಪಡಿಸಿದ್ದೀರಿ ಎಂದು ಹೇಳುವ ಮೂಲಕ ದಂಪತಿಯನ್ನು ಅಭಿನಂದಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು