AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಂಬ್ ಬೆದರಿಕೆ: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ

ರಾಜ್ಯದಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚುತ್ತಿದ್ದು, ಕಲಬುರಗಿ ಹಾಗೂ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗಳಿಗೆ ಇತ್ತೀಚೆಗೆ ಹುಸಿ ಬಾಂಬ್ ಇ-ಮೇಲ್ ಬೆದರಿಕೆ ಬಂದಿದೆ. ಬೆಂಗಳೂರಿನಲ್ಲಿ ತಮಿಳು ಭಾಷೆಯ ಇ-ಮೇಲ್ ಬಂದ ನಂತರ ಪೊಲೀಸರು ತೀವ್ರ ಶೋಧ ನಡೆಸಿದರು. ಯಾವುದೇ ಸ್ಫೋಟಕಗಳು ಪತ್ತೆಯಾಗದ ಕಾರಣ ಇದು ಹುಸಿ ಬೆದರಿಕೆ ಎಂದು ದೃಢಪಟ್ಟಿದೆ. ಅಪರಾಧಿಗಳನ್ನು ಪತ್ತೆಹಚ್ಚಲು ಸೈಬರ್ ಕ್ರೈಂ ವಿಭಾಗದ ನೆರವು ಪಡೆಯಲಾಗುತ್ತಿದೆ.

ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಂಬ್ ಬೆದರಿಕೆ: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ
ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Mar 03, 2026 | 7:05 PM

Share

ಬೆಂಗಳೂರು, ಮಾ.3: ರಾಜ್ಯದಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ, ಶಾಲೆ, ಇದೀಗ ಕೋರ್ಟ್​​​ಗೂ ಬೆದರಿಕೆ ಬರುತ್ತಿದೆ. ಇಂದು ಮಧ್ಯಾಹ್ನ ಕಲಬುರ್ಗಿಯ ಜಿಲ್ಲಾ ಕೋರ್ಟ್​​ಗೆ ಬೆದರಿಕೆ ಬಂದಿತ್ತು. ಇದೀಗ ರಾಜಧಾನಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣವನ್ನು ಸ್ಫೋಟಿಸುವುದಾಗಿ ಅಪರಿಚಿತರು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ಮತ್ತು ಭದ್ರತಾ ಪಡೆಗಳು ಇಡೀ ಕೋರ್ಟ್ ಆವರಣವನ್ನು ಜಾಲಾಡಿದ್ದು, ಅಂತಿಮವಾಗಿ ಇದೊಂದು ‘ಹುಸಿ ಬಾಂಬ್ ಬೆದರಿಕೆ’ (Hoax Call) ಎಂದು ದೃಢಪಟ್ಟಿದೆ. ಇಂದು (ಮಾರ್ಚ್ 3, 2026) ಬೆಳಿಗ್ಗೆ ಕೋರ್ಟ್‌ನ ಅಧಿಕೃತ ಇ-ಮೇಲ್ ವಿಳಾಸಕ್ಕೆ ಸಂದೇಶ ಬಂದಿತ್ತು. ಇನ್ನು ಈ ಬೆದರಿಕೆ ಇ-ಮೇಲ್ ತಮಿಳು ಭಾಷೆಯಲ್ಲಿದೆ.

ಸುದ್ದಿ ತಿಳಿಯುತ್ತಿದ್ದಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಬಾಂಬ್ ನಿಷ್ಕ್ರಿಯ ದಳ (BDS) ಮತ್ತು ಶ್ವಾನದಳದೊಂದಿಗೆ ಕೋರ್ಟ್‌ನ ಪ್ರತಿ ಕೊಠಡಿ, ಕಾರಿಡಾರ್ ಮತ್ತು ಪಾರ್ಕಿಂಗ್ ಪ್ರದೇಶಗಳಲ್ಲಿ ತೀವ್ರ ಶೋಧ ನಡೆಸಲಾಯಿತು.

ಇದನ್ನೂ ಓದಿ: ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಓಡಿದ ವಕೀಲರು

ಸುದೀರ್ಘ ಪರಿಶೀಲನೆಯ ನಂತರ ಯಾವುದೇ ಅನುಮಾನಾಸ್ಪದ ವಸ್ತುಗಳು ಅಥವಾ ಸ್ಫೋಟಕಗಳು ಪತ್ತೆಯಾಗಿಲ್ಲ. ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಲು ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇ-ಮೇಲ್ ಕಳುಹಿಸಿದ ಕಿಡಿಗೇಡಿಗಳ ಪತ್ತೆಗಾಗಿ ಸೈಬರ್ ಕ್ರೈಂ ವಿಭಾಗದ ನೆರವು ಪಡೆಯಲಾಗುತ್ತಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ