ಕೆಜಿಎಫ್ 2 ಸಾಂಗ್ ಬಳಕೆ: ಕಾಂಗ್ರೆಸ್ ಟ್ವಿಟರ್ ಖಾತೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಕೋರ್ಟ್ ಆದೇಶ
ಕೆಜಿಎಫ್-2 ಚಿತ್ರದ ಹಾಡನ್ನು ಅಕ್ರಮವಾಗಿ ಬಳಸಿಕೊಂಡ ಆರೋಪದಡಿ ಕಾಂಗ್ರೆಸ್ ಪಕ್ಷದ ಟ್ವಿಟರ್ ಖಾತೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಬೆಂಗಳೂರಿನ ನ್ಯಾಯಾಲಯ ಆದೇಶ ಹೊರಡಿಸಿದೆ.
ಬೆಂಗಳೂರು: ಕೆಜಿಎಫ್-2 (KGF-2) ಚಿತ್ರದ ಹಾಡನ್ನು ಅಕ್ರಮವಾಗಿ ಬಳಸಿಕೊಂಡು ಎಂಆರ್‌ಟಿ ಮ್ಯೂಸಿಕ್ ಕಂಪನಿಯ ಹಕ್ಕುಸ್ವಾಮ್ಯವನ್ನು ಉಲ್ಲಂಘಿಸಿದ ಆರೋಪದ ಮೇಲೆ ಕಾಂಗ್ರೆಸ್ (Congress) ಪಕ್ಷದ ಮತ್ತು ಭಾರತ್ ಜೋಡೋ ಯಾತ್ರೆಯ (Bharat jodo yatra) ಟ್ವಿಟರ್ (Twitter) ಖಾತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಬೆಂಗಳೂರಿನ ನ್ಯಾಯಾಲಯವು ಟ್ವಿಟರ್‌ಗೆ ಸೂಚಿಸಿದೆ.
ಇತ್ತೀಚೆಗೆ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಗಾಗಿ ಕರ್ನಾಟಕಕ್ಕೆ ಬಂದಿದ್ದರು. ಅವರು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಾಲ್ನಡಿಗೆಯಲ್ಲಿ ಸಾಗಿದ್ದರು. ಈ ವೇಳೆ ರಾಹುಲ್ ಗಾಂಧಿ ಅವರ ಕಾಲ್ನಡಿಗೆಯ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಲಾಗಿತ್ತು. ಈ ವಿಡಿಯೋಗೆ ‘ಕೆಜಿಎಫ್ 2’ ಚಿತ್ರದ ಹಿಂದಿ ಗೀತೆ ‘ಸುಲ್ತಾನ್..’ ಹಾಡನ್ನು ಬಳಕೆ ಮಾಡಲಾಗಿತ್ತು. ಈ ಕಾರಣಕ್ಕೆ ರಾಹುಲ್ ಗಾಂಧಿ ವಿರುದ್ಧ ಈ ಹಾಡಿನ ಹಿಂದಿ ಹಕ್ಕನ್ನು ಹೊಂದಿರುವ ಎಂಆರ್‌ಟಿ ಮ್ಯೂಸಿಕ್ನವರು ಫೋರ್ಜರಿ ಪ್ರಕರಣ ದಾಖಲು ಮಾಡಿದ್ದರು. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ರಾಹುಲ್ ಗಾಂಧಿ ಮಾತ್ರವಲ್ಲದೆ, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು.
ಈ ಪ್ರಕರಣವನ್ನು ಬೆಂಗಳೂರಿನ ವಾಣಿಜ್ಯ ಕೋರ್ಟ್ನಲ್ಲಿ ವಿಚಾರಣೆ ಮಾಡಲಾಗಿದೆ. ಈ ವೇಳೆ ದೂರುದಾರರು ನೀಡಿದ ದಾಖಲೆಗಳನ್ನು ಕೋರ್ಟ್ ಪರಿಗಣಿಸಿದೆ. ಹೀಗಾಗಿ, ನವೆಂಬರ್ 21ರವರೆಗೆ ಕಾಂಗ್ರೆಸ್ ಟ್ವಿಟರ್ ಖಾತೆಯನ್ನು ನಿರ್ಬಂಧಿಸುವಂತೆ ಕೋರ್ಟ್ ಸೂಚಿಸಿದೆ.
‘ಕೆಜಿಎಫ್ 2’ ಚಿತ್ರ ಸೂಪರ್ ಹಿಟ್ ಆಗಿದೆ. ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸಾವಿರಾರು ಕೋಟಿರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾದ ಹಾಡುಗಳು ಕೂಡ ಸೂಪರ್ ಹಿಟ್ ಆಗಿದ್ದವು. ಈ ಚಿತ್ರದ ‘ಸುಲ್ತಾನ್..’ ಹಾಡು ಸಾಕಷ್ಟು ರೀಲ್ಸ್ಗಳಲ್ಲಿ ಬಳಕೆ ಆಗಿದೆ. ಈಗ ಇದೇ ಹಾಡನ್ನು ಬಳಕೆ ಮಾಡಿಕೊಂಡು ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕಿದೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪ್ರತಿಕ್ರಿಯೆ
ಕಾಂಗ್ರೆಸ್ ಪಕ್ಷದ ಮತ್ತು ಭಾರತ್ ಜೋಡೋ ಯಾತ್ರೆಯ ಟ್ವಿಟರ್ ಖಾತೆ ನಿರ್ಭಂದಿಸುವಂತೆ ಬೆಂಗಳೂರು ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಬಗ್ಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ‘ ಟ್ವಿಟರ್ ಖಾತೆಗಳನ್ನು ನಿರ್ಭಂದಿಸುವಂತೆ ಬೆಂಗಳೂರು ನ್ಯಾಯಾಲಯ ಆದೇಶ ಹೊರಡಿಸಿದ್ದನ್ನು ನಾವು ಸಾಮಾಜಿಕ ಜಾಲತಾಣದಲ್ಲಿ ನೋಡಿದೇವು. ನಾವು ಯಾವುದೇ ವಿಚಾರಣೆಗೆ ಹಾಜರಾಗಲಿಲ್ಲ. ಮತ್ತು ಆದೇಶದ ಪ್ರತಿ ನಮಗೆ ಲಭ್ಯವಾಗಿಲ್ಲ. ಈ ಕುರಿತು ನಾವು ಕಾನೂನಾತ್ಮಕವಾಗಿ ಏನು ಪರಿಹಾರ ಕಂಡುಕೊಳ್ಳಬಹುದೆಂದು ಯೋಚಿಸುವತ್ತೇವೆ’ ಎಂದು ಟ್ವೀಟ್ ಮಾಡಿದೆ.
We have read on social media about an adverse order from a Bengaluru court against INC & BJY SM handles.
We were neither made aware of nor present at court proceedings. No copy of the order has been received.
We are pursuing all the legal remedies at our disposal.
— Congress (@INCIndia) November 7, 2022
ಬಿಜೆಪಿ ವಿರುದ್ಧ ಹರಿಹಾಯ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ
ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆಯಲ್ಲಿ ಕಾರ್ಯಕರ್ತರ ಜೊತೆ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಡ್ಯಾನ್ಸ್ ಮಾಡಿದ್ದರು. ಅದಕ್ಕೆ ಹಾಡು ಸೇರಿಸಿ ಟ್ವಿಟರ್ನಲ್ಲಿ ಹಾಕಿದ್ದರು. ಇದನ್ನೇ ನೆಪ ಇಟ್ಟುಕೊಂಡ ಬಿಜೆಪಿ ನಾಯಕರು ಟ್ವಿಟರ್ ಖಾತೆಯನ್ನ ಸೀಜ್ ಮಾಡಿಸಿದ್ದಾರೆ. ನಮ್ಮ ಟ್ವಿಟರ್ ಆದರೂ ಬಂಧಿಸಿ ಅಥವಾ ನಮ್ಮ ನಾಯಕರನ್ನು ಜೈಲಿಗೆ ಹಾಕಿ. ಆದರೆ ಜನರ ಹೃದಯದಿಂದ ಜೈಲಿಗೆ ಹಾಕಲು ಆಗುವುದಿಲ್ಲ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪ್ರಧಾನಮಂತ್ರಿ ಸ್ಥಾನವನ್ನು ತ್ಯಾಗ ಮಾಡಿದವರು. ತ್ಯಾಗ ಮಾಡಿದ ಪಕ್ಷದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಭ್ರಷ್ಟ ಸರ್ಕಾರವನ್ನು ತೆಗೆಯಲು ನೀವೆಲ್ಲಾ ಮುಂದಾಗಬೇಕು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:25 pm, Mon, 7 November 22