ಶ್ರಾವಣ ಮಾಸದ ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಬೆಂಗಳೂರಿನ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಶ್ರಾವಣ ಮಾಸದಲ್ಲಿ ದೇಗುಲಗಳಲ್ಲಿ ಜನಸಂದಣಿ ಉಂಟಾಗುವುದರಿಂದ ಕೊವಿಡ್ ಸೋಂಕು ಹೆಚ್ಚುವ ಕಾರಣ ಈ ಆದೇಶ ಜಾರಿಗೊಳಿಸಲು ನಿರ್ಧರಿಸಲಾಗಿದೆ.

ಶ್ರಾವಣ ಮಾಸದ ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಬೆಂಗಳೂರಿನ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ
ಸಾಂದರ್ಭಿಕ ಚಿತ್ರ
Follow us
TV9 Web
| Updated By: guruganesh bhat

Updated on:Aug 11, 2021 | 4:55 PM

ಬೆಂಗಳೂರು: ಶ್ರಾವಣ ಮಾಸದ ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಬೆಂಗಳೂರಿನ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದು, ಶ್ರಾವಣ ಮಾಸದಲ್ಲಿ ದೇಗುಲಗಳಲ್ಲಿ ಜನಸಂದಣಿ ಉಂಟಾಗುವುದರಿಂದ ಕೊವಿಡ್ ಸೋಂಕು ಹೆಚ್ಚುವ ಕಾರಣ ಈ ಆದೇಶ ಜಾರಿಗೊಳಿಸಲು ನಿರ್ಧರಿಸಲಾಗಿದೆ.

Bengaluru Coronavirus: ಬೆಂಗಳೂರಿನಲ್ಲಿ ಐದೇ ದಿನದಲ್ಲಿ 242 ಮಕ್ಕಳಿಗೆ ಕೊರೊನಾ; ಹೆಚ್ಚಾಯ್ತು 3ನೇ ಅಲೆಯ ಭೀತಿ ಕರ್ನಾಟಕದ ಕೊರೊನಾ ಕೇಸುಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಮತ್ತೆ ಆತಂಕ ಎದುರಾಗಿದೆ. ಕೊವಿಡ್ 3ನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂದು ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಕಳೆದ 5 ದಿನಗಳಲ್ಲಿ ಬರೋಬ್ಬರಿ 242 ಮಕ್ಕಳಿಗೆ ಕೊವಿಡ್ ಪಾಸಿಟಿವ್ (COVID Positive) ಬಂದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ನಿನ್ನೆ 1338 ಹೊಸ ಕೊರೊನಾ ಪ್ರಕರಣಗಳು (Coronavirus Cases) ಪತ್ತೆಯಾಗಿದ್ದು, 31 ಜನರು ಸಾವನ್ನಪ್ಪಿದ್ದಾರೆ. ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ಐದೇ ದಿನದಲ್ಲಿ 19 ವರ್ಷದೊಳಗಿನ 242 ಜನರು ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಈಗಾಗಲೇ ಕೊರೊನಾ 3ನೇ ಅಲೆ ಶುರುವಾಗಿದೆ ಎಂದು ತಜ್ಞರು ಹೇಳಿಕೆ ನೀಡಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತ ಮಕ್ಕಳ ಸಂಖ್ಯೆ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 5 ದಿನದಲ್ಲಿ 9 ವರ್ಷದೊಳಗಿನ 106 ಮತ್ತು 9ರಿಂದ 19 ವರ್ಷದೊಳಗಿನ 136 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಮುಂದಿನ ದಿನಗಳಲ್ಲಿ ಮಕ್ಕಳಲ್ಲಿ ಕೊರೊನಾ ಕೇಸುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಮಕ್ಕಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಮುಂದಿನ ಕೆಲವು ದಿನಗಳಲ್ಲಿ ಇದಕ್ಕಿಂತಲೂ ಮೂರು ಪಟ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇದು ಬಹಳ ಅಪಾಯಕಾರಿ ಬೆಳವಣಿಗೆ. ಮಕ್ಕಳನ್ನು ಆದಷ್ಟು ಮನೆಯಿಂದ ಹೊರಗೆ ಹೋಗಲು ಬಿಡದೆ ಎಚ್ಚರಿಕೆಯಿಂದ ನೋಡಿಕೊಳ್ಳುವುದೇ ಕೊರೊನಾದಿಂದ ಪಾರಾಗಲು ಇರುವ ಏಕೈಕ ಮಾರ್ಗ ಎಂದು ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ಕರ್ನಾಟಕದಲ್ಲಿ ನಿನ್ನೆ ಹೊಸದಾಗಿ 1,338 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,21,049 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,61,499 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ನಿನ್ನೆ ಕೊರೊನಾ ಸೋಂಕಿನಿಂದ 31 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,848 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 315 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,31,097 ಕ್ಕೆ ಏರಿಕೆಯಾಗಿದೆ. 12,31,097 ಸೋಂಕಿತರ ಪೈಕಿ 12,06,980 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಮಂಗಳವಾರ ಕೊರೊನಾ ಸೋಂಕಿಗೆ 3 ಮಂದಿ ಬಲಿಯಾಗಿದ್ದಾರೆ.

ಇದನ್ನೂ ಓದಿ: 

ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರು ಅಭಿವೃದ್ಧಿಗಾಗಿ ಕೈಗೊಂಡ ಯೋಜನೆ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ

‘ಕೊವಿಡ್​ 19 ಹೊಸ ರೂಪಾಂತರಿ ವೈರಾಣುಗಳು ಯಾವಾಗ ಬೇಕಾದರೂ ಉದ್ಭವಿಸಬಹುದು‘

(Bengaluru Covid 19 Guidelines Restriction of public access to temples on the weekends and holidays of Shravana Masa)

Published On - 4:30 pm, Wed, 11 August 21

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ