Bengaluru Covid Cases: ಮುಂಬೈ ಬಳಿಕ ಭಾರತದ ಕೊವಿಡ್ ಹಾಟ್​ಸ್ಪಾಟ್​ ಆಗುತ್ತಿದೆಯಾ ಬೆಂಗಳೂರು?

ಕೊವಿಡ್ 3 ಅಲೆಗಳನ್ನು ಗಮನಿಸಿದರೆ ಮುಂಬೈ ಮತ್ತು ದೆಹಲಿಯಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿತ್ತು. ಆದರೆ, ಈ ಬಾರಿ ಕರ್ನಾಟಕದ ಬೆಂಗಳೂರು ಹೊಸ ಕೋವಿಡ್ -19 ಹಾಟ್‌ಸ್ಪಾಟ್ ಆಗಿ ಹೊರಹೊಮ್ಮುವ ಸಾಧ್ಯತೆಯಿದೆ.

Bengaluru Covid Cases: ಮುಂಬೈ ಬಳಿಕ ಭಾರತದ ಕೊವಿಡ್ ಹಾಟ್​ಸ್ಪಾಟ್​ ಆಗುತ್ತಿದೆಯಾ ಬೆಂಗಳೂರು?
ಸಾಂಕೇತಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 16, 2022 | 8:35 PM

ಬೆಂಗಳೂರು: ಭಾರತದಲ್ಲಿ ಕೊವಿಡ್-19 ಪ್ರಕರಣಗಳ (Covid-19 Cases) ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇತ್ತೀಚೆಗೆ ಕಡಿಮೆಯಾಗಿದ್ದ ಕೊರೊನಾವೈರಸ್​ (Coronavirus) ಕೇಸುಗಳ ಸಂಖ್ಯೆ ಇದೀಗ ಮತ್ತೆ ಹೆಚ್ಚಳವಾಗಿದೆ. ಕಳೆದ ವಾರದಿಂದ ಹಲವಾರು ಮೆಟ್ರೋಪಾಲಿಟನ್ ನಗರಗಳಲ್ಲಿ ಕೊರೊನಾ ಸೋಂಕುಗಳ ಉಲ್ಬಣ ವರದಿಯಾಗಿದೆ. ಕೋವಿಡ್ -19 ಸಾಂಕ್ರಾಮಿಕದ ನಾಲ್ಕನೇ ಅಲೆಯ (Covid 4th Wave) ಭೀತಿಯ ನಡುವೆ ಕೊವಿಡ್ ಕೇಸುಗಳು ಹೆಚ್ಚಾಗುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಕೊವಿಡ್ ಮೂರು ಅಲೆಗಳನ್ನು ಗಮನಿಸಿದರೆ ಮಹಾರಾಷ್ಟ್ರದ ಮುಂಬೈ ಮತ್ತು ದೆಹಲಿಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ದಾಖಲಾಗಿತ್ತು. ಆದರೆ, ಈ ಬಾರಿ ಕರ್ನಾಟಕದ ಬೆಂಗಳೂರು ಭಾರತದಲ್ಲಿ ಹೊಸ ಕೋವಿಡ್ -19 ಹಾಟ್‌ಸ್ಪಾಟ್ ಆಗಿ ಹೊರಹೊಮ್ಮುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದ್ದು, ರಾಜ್ಯದಲ್ಲಿ ಸದ್ಯಕ್ಕೆ 600ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿವೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಹೆಚ್ಚುತ್ತಿರುವ ವೈರಸ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವೂ ಸಲಹೆಯನ್ನು ನೀಡಿದೆ.

ಇದನ್ನೂ ಓದಿ: ಕೊವಿಡ್ 19 ಆತಂಕ: ವಿಮಾನದಲ್ಲಿ, ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ

ಇದನ್ನೂ ಓದಿ
Image
ಜೂನ್ 3ನೇ ವಾರದಿಂದ ಅಕ್ಟೋಬರ್‌ವರೆಗೂ ಕೊರೊನಾ ಕೇಸ್ ಹೆಚ್ಚಳ; ಕಾನ್ಪುರದ ಐಐಟಿ ವರದಿ ನಿರ್ಲಕ್ಷ್ಯವಹಿಸುವಂತಿಲ್ಲ ಎಂದ ಸಚಿವ ಸುಧಾಕರ್
Image
Covid-19 Updates: ಭಾರತದಲ್ಲಿ 24 ಗಂಟೆಯಲ್ಲಿ 8,822 ಕೊವಿಡ್ ಕೇಸ್ ದಾಖಲು; ಮಹಾರಾಷ್ಟ್ರದಲ್ಲಿ ಬಿಎ.5 ರೂಪಾಂತರಿ ಪತ್ತೆ
Image
Covid 4th Wave: ಕೊರೊನಾವೈರಸ್ 4ನೇ ಅಲೆ ಭೀತಿ; ಭಾರತದಲ್ಲಿ ಹೊಸ ಕ್ವಾರಂಟೈನ್ ನಿಯಮ, ಚಿಕಿತ್ಸೆಯ ವಿಧಾನ ಹೇಗಿದೆ?

ಇದಲ್ಲದೆ, ಬೆಂಗಳೂರಿನ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ -19 ಪ್ರಕರಣಗಳು ಪತ್ತೆಯಾದ ಅನೇಕ ನಿದರ್ಶನಗಳನ್ನು ಸಹ ಗಮನಿಸಲಾಗಿದೆ. ತೀರಾ ಇತ್ತೀಚೆಗೆ ಒಂದು ಶಾಲೆಯಲ್ಲಿ 31 ವಿದ್ಯಾರ್ಥಿಗಳಿಗೆ ಕೊರೋನಾವೈರಸ್‌ ಪಾಸಿಟಿವ್ ದೃಢಪಟ್ಟಿತ್ತು. ಬೆಂಗಳೂರಿನಲ್ಲಿ ಕೊವಿಡ್ ಪಾಸಿಟಿವಿಟಿ ದರವು ಶೇ. 2.69ರಿಂದ ಶೇ. 2.83ಕ್ಕೆ ಏರಿಕೆಯಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶಿಕ್ಷಣ ಸಂಸ್ಥೆಗಳಿಗೆ ನಗರವು ಹೆಚ್ಚಿನ ಸೋಂಕುಗಳಿಗೆ ಹಾಟ್‌ಸ್ಪಾಟ್ ಆಗದಂತೆ ನೋಡಿಕೊಳ್ಳಲು ಮಾರ್ಗಸೂಚಿಗಳನ್ನು ಸಹ ಬಿಡುಗಡೆ ಮಾಡಿದೆ. ಎಲ್ಲಾ ಶಾಲೆಗಳು ಮತ್ತು ಸಂಸ್ಥೆಗಳು ಸಲಹೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಬಿಬಿಎಂಪಿ ಹೇಳಿದೆ. ಮಾರ್ಗಸೂಚಿಗಳ ಪ್ರಕಾರ, ಶಾಲಾ ಆವರಣಕ್ಕೆ ಪ್ರವೇಶಿಸುವ ಎಲ್ಲಾ ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಎಲ್ಲಾ ಸಮಯದಲ್ಲೂ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಎಲ್ಲಾ ಶಾಲೆಗಳು ತಮ್ಮ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕೇಳಲಾಗಿದೆ ಮತ್ತು ಸ್ಯಾನಿಟೈಜರ್‌ಗಳ ಬಳಕೆಯನ್ನು ಉತ್ತೇಜಿಸಬೇಕು ಎಂದು ಸೂಚಿಸಲಾಗಿದೆ.

ಭಾರತದಲ್ಲಿ ದಾಖಲಾದ ಮೂರು ಕೊವಿಡ್ -19 ಅಲೆಗಳಲ್ಲಿ ಮುಂಬೈ, ದೆಹಲಿ, ಚೆನ್ನೈ ಮತ್ತು ಬೆಂಗಳೂರಿನಂತಹ ಹಲವಾರು ಮೆಟ್ರೋ ನಗರಗಳಲ್ಲಿ ಹೆಚ್ಚಿನ ಸಂಖ್ಯೆಯ ಕೊರೊನಾವೈರಸ್ ಪ್ರಕರಣಗಳು ದಾಖಲಾಗಿವೆ.

ಇನ್ನಷ್ಟು ಬೆಂಗಳೂರಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:33 pm, Thu, 16 June 22

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ