ಬೆಂಗಳೂರಿನಲ್ಲಿ ಕೊವಿಡ್​ನಿಂದ ಆಸ್ಪತ್ರೆಗೆ ಸೇರುವವರ ಸಂಖ್ಯೆಯಲ್ಲಿ ಹೆಚ್ಚಳ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ತಾಂತ್ರಿಕ ಸಲಹಾ ಸಮಿತಿ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಜೂನ್ 17ರಿಂದ 27ರ ಅವಧಿಯಲ್ಲಿ ಆಸ್ಪತ್ರೆಗೆ ಸೇರಿರುವ ಸೋಂಕಿತರ ಸಂಖ್ಯೆ 72ಕ್ಕೆ ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಕೊವಿಡ್​ನಿಂದ ಆಸ್ಪತ್ರೆಗೆ ಸೇರುವವರ ಸಂಖ್ಯೆಯಲ್ಲಿ ಹೆಚ್ಚಳ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ತಾಂತ್ರಿಕ ಸಲಹಾ ಸಮಿತಿ
ಸಾಂಕೇತಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 29, 2022 | 10:04 AM

ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊವಿಡ್ ಸೋಂಕು (Coronavirus Infection) ಮತ್ತೆ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಕಳೆದ 10 ದಿನಗಳಲ್ಲಿ ಕೊರೊನಾ ಸೋಂಕಿತರ (Covid-19) ಸಂಖ್ಯೆ ದುಪ್ಪಟ್ಟಾಗಿದೆ. ನಗರ ವ್ಯಾಪ್ತಿಯಲ್ಲಿ ಜೂನ್ 1ರಿಂದ 16ರವರೆಗೆ ಒಟ್ಟು 31 ಮಂದಿ ಸೋಂಕಿನಿಂದ ಆಸ್ಪತ್ರೆಗಳಿಗೆ ದಾಖಲಾಗಿದ್ದರು. ಜೂನ್ 17ರಿಂದ 27ರ ಅವಧಿಯಲ್ಲಿ ಆಸ್ಪತ್ರೆಗೆ ಸೇರಿರುವ ಸೋಂಕಿತರ ಸಂಖ್ಯೆ 72ಕ್ಕೆ ಹೆಚ್ಚಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (Bruhat Bengaluru Mahanagara Palike – BBMP) ಬಿಡುಗಡೆ ಮಾಡಿರುವ ಬುಲೆಟಿನ್​ನಲ್ಲಿ ಈ ಮಾಹಿತಿ ನಮೂದಾಗಿದೆ.

ನಗರದಲ್ಲಿ ಪ್ರತಿದಿನ ಸರಾಸರಿ 600ರಿಂದ 700ರಷ್ಟು ಪ್ರಕರಣಗಳು ವರದಿಯಾಗುತ್ತಿವೆ. ಬಹುತೇಕ ಸೋಂಕಿತರಲ್ಲಿ ಸೋಂಕಿನ ಲಕ್ಷಣಗಳು ಕಂಡು ಬರುತ್ತಿಲ್ಲ (Asymptomatic). ಸುಮಾರು 60 ಮಂದಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಆದರೆ ಬಹುತೇಕರು ತಾವೇ ಸ್ವಯಂಪ್ರೇರಣೆಯಿಂದ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗಳಿಗೆ ಬಂದಿದ್ದಾರೆ. ಈ ಪೈಕಿ ಬಹುತೇಕರು ಖಾಸಗಿ ಆಸ್ಪತ್ರೆಗಳಿಗೆ ಸೇರಿದ್ದಾರೆ ಎಂಬ ಬಿಬಿಎಂಪಿ ವಿಶೇಷ ಆಯುಕ್ತರಾದ ಡಾ.ತ್ರಿಲೋಕ್ ಚಂದ್ರ ಹೇಳಿಕೆಯನ್ನು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ನಗರ ವ್ಯಾಪ್ತಿಯಲ್ಲಿ ಮಂಗಳವಾರ (ಜೂನ್ 28) ಕೊವಿಡ್​ನಿಂದ 72 ಮಂದಿ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಈ ಪೈಕಿ 10 ಮಂದಿ ಐಸಿಯುಗೆ, ಮೂವರು ಹೈ ಡಿಪೆಂಡೆನ್ಸಿ ಯೂನಿಟ್​ಗೆ ಮತ್ತು 59 ಮಂದಿ ಸಾಮಾನ್ಯ ವಾರ್ಡ್​ಗಳಿಗೆ ದಾಖಲಾಗಿದ್ದಾರೆ.

ಕೊರೊನಾ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದು ನಗರದಲ್ಲಿ ಸೋಂಕಿನ ಹರಡುವಿಕೆ ಪ್ರಮಾಣ ಮತ್ತು ತೀವ್ರತೆಯನ್ನೂ ತೋರಿಸುತ್ತದೆ. ಸೋಂಕಿನ ಸಂಭಾವ್ಯತೆ ಇರುವ ಕಾರಣ ಸಾಮಾನ್ಯ ವಾರ್ಡ್​ಗಳಿಗೆ ದಾಖಲಾಗುತ್ತಿರುವವ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಪರಿಸ್ಥಿತಿ ಆತಂಕಕಾರಿಯಾಗಿಲ್ಲ, ನಿಯಂತ್ರಣದಲ್ಲಿದೆ ಎನ್ನುತ್ತಾರೆ ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ (Karnataka’s Covid Technical Advisory Committee – TAC) ಅಧ್ಯಕ್ಷರಾದ ಡಾ.ಎಂ.ಕೆ.ಸುದರ್ಶನ್.

ಕೊವಿಡ್ ಸೋಂಕಿನ ಸಂಖ್ಯೆ ಹೆಚ್ಚಾಗಿದೆಯಾದರೂ ಸಾವಿನ ಸಂಖ್ಯೆ ಕಡಿಮೆಯಿದೆ. ಆದರೂ ಐಸಿಯುಗೆ ದಾಖಲಾಗಿರುವ ರೋಗಿಗಳನ್ನು ನಾವು ಗಮನಿಸುತ್ತಿರಬೇಕು. ಪ್ರಸ್ತುತ ಐಸಿಯು ದಾಖಲಾತಿಗಳು ಕಡಿಮೆಯಿವೆ. ಹೆಚ್ಚು ಯೋಚಿಸುವ ಅಗತ್ಯವಿಲ್ಲ ಎಂದು ಅವರು ಹೇಳುತ್ತಾರೆ. ಆಸ್ಪತ್ರೆಗೆ ದಾಖಲಾಗುವವರು ಬೇಗನೇ ಡಿಸ್​ಚಾರ್ಜ್ ಆಗುತ್ತಿದ್ದಾರೆ. ಸೋಂಕಿನಿಂದ ಚೇತರಿಸಿಕೊಳ್ಳುವವರ ಸಂಖ್ಯೆಯೂ ಹೆಚ್ಚಾಗಿದೆ. ಕೇವಲ ಮೂರು ದಿನಗಳಲ್ಲಿ ಸೋಂಕು ಗುಣವಾಗಿರುವ ಉದಾಹರಣೆಗಳು ಸಾಕಷ್ಟಿವೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹೊಸ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ.

Published On - 10:03 am, Wed, 29 June 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ