Bengaluru Covid Updates: ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ ಕೊರತೆ, ಖಾಸಗಿ ಆಸ್ಪತ್ರೆಗಳತ್ತ ಜನರ ದೌಡು

| Updated By: ನಯನಾ ರಾಜೀವ್

Updated on: Dec 29, 2022 | 11:24 AM

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ(Corona Vaccine) ಕೊರತೆ ಇರುವ ಕಾರಣ ಜನರು ಖಾಸಗಿ ಆಸ್ಪತ್ರೆಗಳತ್ತ ಮುಖಮಾಡುತ್ತಿದ್ದಾರೆ

Bengaluru Covid Updates: ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ ಕೊರತೆ, ಖಾಸಗಿ ಆಸ್ಪತ್ರೆಗಳತ್ತ ಜನರ ದೌಡು
Corona Vaccine
Follow us on

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ(Corona Vaccine) ಕೊರತೆ ಇರುವ ಕಾರಣ ಜನರು ಖಾಸಗಿ ಆಸ್ಪತ್ರೆಗಳತ್ತ ಮುಖಮಾಡುತ್ತಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಯಗೊಂಡಿರುವ ಜನತೆ ಬೂಸ್ಟರ್ ಲಸಿಕೆ ಪಡೆಯಲು ಮುಂದಾಗಿದ್ದಾರೆ. ಹೇಗೂ ಕೊರೊನಾ ಕಡಿಮೆಯಾಗಿದೆ ಎಂದು ಬೂಸ್ಟರ್ ಲಸಿಕೆ ಪಡೆಯಲು ಜನರು ಹಿಂದೇಟು ಹಾಕಿದ್ದರು. ಒಂದು ಖಾಸಗಿ ಆಸ್ಪತ್ರೆಯಲ್ಲಿ ದಿನಕ್ಕೆ 50-100 ಜನರು ಲಸಿಕೆ ಪಡೆಯುತ್ತಿದ್ದಾರೆ, ಈಗಾಗಲೇ ಖಾಸಗಿ ಆಸ್ಪತ್ರೆಗಳಲ್ಲಿ 10 ಸಾವಿರ ಲಸಿಕೆಗಳ ದಾಸ್ತಾನು ಇದೆ.

ಈಗಾಗಲೇ ಜನರು ಎರಡು ಡೋಸ್‌ಗಳನ್ನು ಪಡೆದಿದ್ದು, ಇದೀಗ ಬೂಸ್ಟರ್ ಲಸಿಕೆ ಪಡೆಯಲು ಮುಂದಾಗಿದ್ದಾರೆ. ರೂಪಾಂತರಿ BF.7 ಆತಂಕ ಹಿನ್ನೆಲೆ
ಮತ್ತೆ ಬೂಸ್ಟರ್ ಡೋಸ್‌ ಪಡೆಯಲು ಜನರು ಮುಂದಾಗಿದ್ದಾರೆ. ಇಷ್ಟು ದಿನ ಕೇವಲ ಶೇ. 21ರಷ್ಟು ಮಂದಿ ಮಾತ್ರ ಬೂಸ್ಟರ್ ಡೋಸ್​ ಪಡೆದಿದ್ದರು. ಇದರಲ್ಲಿ ಅತಿ ಹೆಚ್ಚು ಕೋವಿಶೀಲ್ಡ್ ಲಸಿಕೆ ಪಡೆದಿದ್ದಾರೆ.

ಹೀಗಾಗಿ ಬೂಸ್ಟರ್ ಡೋಸ್‌ನಲ್ಲೂ ಕೋವಿಶೀಲ್ಡ್ ಬೇಕು ಎಂದು ಜನರು ಹೇಳುತ್ತಿದ್ದಾರೆ. ಇದೀಗ ಬೂಸ್ಟರ್ ಲಸಿಕೆ ಹಾಕಿಸಿಕೊಳ್ಳಬೇಕು ರಾಜ್ಯ ಸರ್ಕಾರ ಹೇಳಿದೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲೇ ಕೋವಿಶಿಲ್ಡ್ ಹಾಗೂ ಕೋರ್ಬಿವ್ಯಾಕ್ಸ್ ಲಸಿಕೆ ಲಭ್ಯವಿಲ್ಲ. ದೇಶಕ್ಕೆ ಮತ್ತೆ ಕೊರೊನಾ(Corona) ಭೀತಿ ಎದುರಾಗಿದೆ, ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ 2 ಕೋಟಿ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲು ಸಿದ್ಧ ಎಂದು ಸೀರಮ್ ಇನ್​ಸ್ಟಿಟ್ಯೂಟ್ ಹೇಳಿದೆ.

ಮತ್ತಷ್ಟು ಓದಿ: Covishield Corona Vaccine: ಭಾರತಕ್ಕೆ ಮತ್ತೆ ಕೊರೊನಾ ಭೀತಿ: ಕೇಂದ್ರ ಸರ್ಕಾರಕ್ಕೆ 2 ಕೋಟಿ ಕೋವಿಶೀಲ್ಡ್ ಲಸಿಕೆ ಉಚಿತವಾಗಿ ನೀಡಲು ಸೀರಮ್ ಸಿದ್ಧ

ಸೀರಮ್ ಇನ್‌ಸ್ಟಿಟ್ಯೂಟ್‌ನ ಸರ್ಕಾರ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು 410 ಕೋಟಿ ರೂಪಾಯಿಗಳ ಉಚಿತ ಡೋಸ್ ನೀಡುವುದಾಗಿ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಅದನ್ನು ಹೇಗೆ ತಲುಪಿಸಬಹುದು ಎಂಬುದನ್ನು ಸಚಿವಾಲಯದಿಂದ ತಿಳಿದುಕೊಳ್ಳಲು ಸಿಂಗ್ ಬಯಸಿದ್ದಾರೆ.

ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಕೇಂದ್ರ ಸರ್ಕಾರಕ್ಕೆ ಎರಡು ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಉಚಿತವಾಗಿ ನೀಡಿದೆ. ಅಧಿಕೃತ ಮೂಲಗಳು ಬುಧವಾರ ಈ ವಿಷಯವನ್ನು ತಿಳಿಸಿವೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ