AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ 2026: ಬೆಂಗಳೂರಿನಲ್ಲಿ ಪಟಾಕಿ ಅವಾಂತರ; 100ಕ್ಕೂ ಹೆಚ್ಚು ಮಂದಿಗೆ ಕಣ್ಣಿನ ಗಾಯ!

ಬೆಂಗಳೂರಿನಲ್ಲಿ ಪಟಾಕಿ ಅವಘಡಗಳು ಆತಂಕ ಮೂಡಿಸಿದ್ದು, 100ಕ್ಕೂ ಹೆಚ್ಚು ಮಂದಿ ಕಣ್ಣಿನ ಗಾಯಗಳಿಂದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ನಾರಾಯಣ ನೇತ್ರಾಲಯ, ಮಿಂಟೋ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೂರು ತಿಂಗಳ ಹಸುಗೂಸಿನಿಂದ 46 ವರ್ಷದ ವಯಸ್ಕರವರೆಗೆ ಪಟಾಕಿ ಅವಘಡಕ್ಕೆ ತುತ್ತಾಗಿದ್ದಾರೆ. ಗಾಯಾಳುಗಳ ಸಂಖ್ಯೆ, ಆಸ್ಪತ್ರೆಗಳ ಮಾಹಿತಿ ಮತ್ತು ವೈದ್ಯರ ಎಚ್ಚರಿಕೆಗಳ ಸಂಪೂರ್ಣ ವರದಿ ಇಲ್ಲಿದೆ.

ದೀಪಾವಳಿ 2026: ಬೆಂಗಳೂರಿನಲ್ಲಿ ಪಟಾಕಿ ಅವಾಂತರ; 100ಕ್ಕೂ ಹೆಚ್ಚು ಮಂದಿಗೆ ಕಣ್ಣಿನ ಗಾಯ!
ಸಾಂದರ್ಭಿಕ ಚಿತ್ರ
ಭಾವನಾ ಹೆಗಡೆ
|

Updated on: Nov 10, 2026 | 9:24 AM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಪಟಾಕಿ ಅವಘಡ, 100ಕ್ಕೂ ಹೆಚ್ಚು ಮಂದಿಗೆ ಕಣ್ಣಿನ ಗಾಯ.
  • ನಾರಾಯಣ ನೇತ್ರಾಲಯ, ಮಿಂಟೋ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿಕೆ.
  • ಮೂರು ತಿಂಗಳ ಹಸುಗೂಸಿನಿಂದ ವಯಸ್ಕರವರೆಗೆ ಪಟಾಕಿ ಅವಘಡಕ್ಕೆ ತುತ್ತು.

ಬೆಂಗಳೂರು, ನವೆಂಬರ್ 10: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಪಟಾಕಿ ಸಿಡಿಸುವ ವೇಳೆ ಸಂಭವಿಸಿದ ಅವಘಡಗಳು ಬೆಂಗಳೂರಿನಲ್ಲಿ ಆತಂಕ ಮೂಡಿಸಿವೆ. ಪಟಾಕಿಗಳಿಂದ ಕಣ್ಣಿಗೆ ಗಾಯ ಮಾಡಿಕೊಂಡ 100ಕ್ಕೂ ಹೆಚ್ಚು ಮಂದಿ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಗಾಯಾಳುಗಳಲ್ಲಿ ಮಕ್ಕಳು ಮತ್ತು ಪುಟ್ಟ ಕಂದಮ್ಮಗಳೂ ಇರುವುದು ಆತಂಕಕಾರಿ ಸಂಗತಿಯಾಗಿದೆ. ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಶಸ್ತ್ರಚಿಕಿತ್ಸೆಯ ಅಗತ್ಯವೂ ಎದುರಾಗಿದೆ. ಪಟಾಕಿ ಸಿಡಿಸುವವರಷ್ಟೇ ಅಲ್ಲದೆ, ಅಕ್ಕಪಕ್ಕದಲ್ಲಿ ನಿಂತು ನೋಡುತ್ತಿದ್ದವರೂ ಗಾಯಗೊಂಡಿರುವುದು ಸಾರ್ವಜನಿಕರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ನಾರಾಯಣ ನೇತ್ರಾಲಯದಲ್ಲಿ 70 ಪ್ರಕರಣ ದಾಖಲು

ನಗರದ ರಾಜಾಜಿನಗರದಲ್ಲಿರುವ ನಾರಾಯಣ ನೇತ್ರಾಲಯದ ಕೇಂದ್ರವೊಂದರಲ್ಲೇ 41 ಕಣ್ಣಿನ ಗಾಯದ ಪ್ರಕರಣಗಳು ವರದಿಯಾಗಿವೆ. ಬೊಮ್ಮಸಂದ್ರ, ಬನ್ನೇರುಘಟ್ಟ ರಸ್ತೆ ಮತ್ತು ವೈಟ್‌ಫೀಲ್ಡ್ ಕೇಂದ್ರಗಳಲ್ಲಿ ಒಟ್ಟು 29 ಪ್ರಕರಣಗಳು ದಾಖಲಾಗಿವೆ. ರಾಜಾಜಿನಗರ ಕೇಂದ್ರದಲ್ಲಿ ಗಾಯಗೊಂಡ 41 ಮಂದಿಯಲ್ಲಿ 24 ಮಂದಿ 18 ವರ್ಷದೊಳಗಿನ ಮಕ್ಕಳು. 29 ಮಂದಿ ತಾವೇ ಪಟಾಕಿ ಸಿಡಿಸುವಾಗ ಗಾಯಗೊಂಡಿದ್ದರೆ, 12 ಮಂದಿ ಪಕ್ಕದಲ್ಲಿ ನಿಂತಿದ್ದಾಗ ಗಾಯಗೊಂಡಿದ್ದಾರೆ. 40 ಮಂದಿಗೆ ಔಷಧೋಪಚಾರ ನೀಡಲಾಗಿದ್ದು, ಒಬ್ಬರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಮಿಂಟೋ ಆಸ್ಪತ್ರೆಯಲ್ಲಿ ಗಂಭೀರ ಗಾಯಾಳುಗಳು

ಮಿಂಟೋ ನೇತ್ರ ಆಸ್ಪತ್ರೆಯಲ್ಲಿ 14 ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 10 ಮಂದಿಗೆ ಗಂಭೀರ ಗಾಯಗಳಾಗಿವೆ. ನಾಲ್ಕು ಮಂದಿಗೆ ಸಾಮಾನ್ಯ ಗಾಯಗಳಾಗಿವೆ. ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರಿಗೆ ಶಸ್ತ್ರಚಿಕಿತ್ಸೆ ಅಗತ್ಯವಾಗಿದೆ. ಇನ್ನು ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 26 ಪ್ರಕರಣಗಳು ದಾಖಲಾಗಿವೆ. ಗಾಯಾಳುಗಳಲ್ಲಿ ಕೇವಲ ಮೂರು ತಿಂಗಳ ಹಸುಗೂಸಿನಿಂದ 46 ವರ್ಷದ ವಯಸ್ಕರವರೆಗೂ ಇದ್ದಾರೆ. ಐದು ತಿಂಗಳ ಮಗುವಿಗೆ ಪಟಾಕಿಯಿಂದ ಸ್ವಯಂ ಗಾಯವಾಗಿರುವ ಪ್ರಕರಣವೂ ವರದಿಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More