ಬೆಂಗಳೂರಿನಲ್ಲಿ ಜೋರಾದ ಕ್ರಿಕೆಟ್ ಬೆಟ್ಟಿಂಗ್: 11 ಅಡ್ಡೆಗಳ ಮೇಲೆ ದಾಳಿ, 13 ಜನರ ಬಂಧನ
ದೇಶದಲ್ಲಿ ಕ್ರಿಕೆಟ್ ವರ್ಲ್ಡ್ ಕಪ್ ಮೇನಿಯಾ ಜೋರಾಗಿದೆ. ಎಲ್ಲಿನೋಡಿದರೂ ಅಲ್ಲಿ ವರ್ಲ್ಡ್ ಕಪ್ನದ್ದೇ ಸುದ್ದಿ. ಹಾಗೇ ಕ್ರಿಕೆಟ್ ಬೆಟ್ಟಿಂಗ್ ಕೂಡ ತಲೆನೋವಾಗಿ ಪರಿಣಮಿಸಿದೆ. ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ ನಡೆಸುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ 13 ಜನರನ್ನು ಬಂಧಿಸಿದ್ದಾರೆ.
ಬೆಂಗಳೂರು ನ.07: ಕ್ರಿಕೆಟ್ ಬೆಟ್ಟಿಂಗ್ (Cricket Betting) ಅಡ್ಡಗಳ ಮೇಲೆ ಸಿಸಿಬಿ ಪೊಲೀಸರು ಕಣ್ಣಿಟ್ಟಿದ್ದಾರೆ. 11 ಸ್ಥಳಗಳು ಪತ್ತೆಯಾಗಿವೆ. ಬೆಟ್ಟಿಂಗ್ನಲ್ಲಿ ತೊಡಗಿದ್ದ 13 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 10 ಲಕ್ಷದಷ್ಟು ಹಣ ವಶಕ್ಕೆ ಪಡೆದಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ (Police Commissioner Dayanand) ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಗರದಲ್ಲಿ ಲ್ಯಾಪ್ಟಾಪ್ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಅನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 75 ಲಕ್ಷ ಮೌಲ್ಯದ ಲ್ಯಾಪ್ಟಾಪ್ಗಳನ್ನು ವಶಕ್ಕೆ ಪಡೆದಿದ್ದೇವೆ ಎಂದು ತಿಳಿಸಿದರು.
ಆರೋಪಿಗಳು ಮೂಲತಃ ಹೈದ್ರಾಮಾದ್ನವರು. ಆರೋಪಿ ಪ್ರತಿಷ್ಠಿತ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದನು. ಈ ಹಿಂದೆ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದರಿಂದ ಕಂಪನಿಯಿಂದ ಹೊರ ಹಾಕಿದ್ದರು. ಅದಾದ ಬಳಿಕ ಸಹ ಕಳ್ಳತನ ಕೃತ್ಯ ಮುಂದುವರೆಸಿದ್ದನು. ಈತ ತಂದ ವಸ್ತುಗಳನ್ನು ಪಡೆದು ಮಾರಾಟ ಮಾಡುತಿದ್ದ ಆರೋಪಗಳನ್ನು ಸಹ ಬಂಧಿಸಲಾಗಿದೆ ಎಂದರು.
ಇದನ್ನೂ ಓದಿ: ಬಯೋಮೆಟ್ರಿಕ್ ಸ್ಲ್ಯಾನ್ ಬಳಸಿ ವಂಚಿಸುತ್ತಿದ್ದ ಬೃಹತ್ ಜಾಲ ಪತ್ತೆ, ಪೊಲೀಸ್ ಕಮಿಷನರ್ ದಯಾನಂದ್ ಹೇಳಿದ್ದೇನು?
ನಗರದಲ್ಲಿ ಪೊಲೀಸ್ ಗಸ್ತು ವ್ಯವಸ್ಥೆ ಪರಿಣಾಮಕಾರಿಯಾಗಿ ನಡೆಯುತ್ತಿವೆ. ನಗರದಾದ್ಯಂತ ಚೀತಾ, ಹೊಯ್ಸಳ ನಿರಂತರ ಬೀಟ್ ಮಾಡುತ್ತಿವೆ. ನೈಟ್ ಬೀಟ್ ಸಹ ವ್ಯವಸ್ಥಿತವಾಗಿ ನಡೆಯುತ್ತಿದೆ. ಸ್ಪಾರ್ಟ್ ಇ ಬೀಟ್ ಸಹ ಬಳಸಿಕೊಂಡು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ಮುಂಜಾನೆ ಸಹ ಗುಡ್ ಮಾರ್ನಿಂಗ್ ಬೀಟ್ ಆಗಿ ಸಹ ಕಾರ್ಯಾಚರಣೆ ಮಾಡಲಾಗುತ್ತಿದೆ. ಅನುಮಾನಸ್ಪದ ವ್ಯಕ್ತಿಗಳ ಪರಿಶೀಲಿಸಲಾಗುತ್ತಿದೆ. ಫಿಂಗರ್ ಪ್ರಿಂಟ್ ಸ್ಕ್ಯಾನ್ ಮೂಲಕ ಹಿನ್ನಲೆಯನ್ನು ಪತ್ತೆ ಹಚ್ಚಲಾಗುತ್ತಿದೆ. ಸಿಬ್ಬಂದಿಗಳ ಕೊರತೆ ಇದ್ದರೂ ಸಹ ವ್ಯವಸ್ಥಿತವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣದ ವಿಚಾರವಾಗಿ ಮಾತನಾಡಿದ ಅವರು ಆರೋಪಿ ಬಂಧಿಸಿ ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಸಲಾಗುತ್ತಿದೆ. ಅವರ ಬಳಿಯೇ ಕಿರಣ ಕೆಲಸ ಮಾಡುತಿದ್ದನು. ಈ ಕೊಲೆ ಪ್ರಕರಣದಲ್ಲಿ ಹಂತ ಹಂತವಾಗಿ ಏನಾಗಿದೆ ಎಂದು ವಿಚಾರಣೆ ಮಾಡಲಾಗುತ್ತಿದೆ. ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡಲಾಗುತ್ತಿದೆ. ತನಿಖೆಯಲ್ಲಿ ಪತ್ತೆಯಾದ ಸಾಕ್ಷಿಗಳ ಆಧಾರದ ಮೇಲೆ ತನಿಖೆ ನಡೆಸಲಾಗುವುದು. ನಿಷ್ಪಕ್ಷಪಾತವಾಗಿ ಪ್ರಕರಣದ ತನಿಕೆ ನಡೆಸಲಾಗುವುದು ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ