ಕರುಳಿನಲ್ಲಿ ಕೊಕೇನ್ ಬಚ್ಚಿಟ್ಟು ಸಾಗಿಸುತ್ತಿದ್ದ ಆಫ್ರಿಕನ್ ಮಹಿಳೆ ಬೆಂಗಳೂರು ಏರ್ಪೋರ್ಟ್​ನಲ್ಲಿ ಅರೆಸ್ಟ್

ಮಹಿಳೆ ಕ್ಯಾಪ್ಸೂಲ್‌ಗಳನ್ನು ನುಂಗಿದ ನಂತರ ವೆಸ್ಟ್ ಆಫ್ರಿಕಾದ ಗಿನಿಯಾದಲ್ಲಿ ವಿಮಾನವನ್ನು ಹತ್ತಿದ್ದರು. ಮತ್ತು ಜನವರಿ 14 ರಂದು ಎಮಿರೇಟ್ಸ್ ವಿಮಾನದಲ್ಲಿ ದುಬೈ ಮೂಲಕ ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕರುಳಿನಲ್ಲಿ ಕೊಕೇನ್ ಬಚ್ಚಿಟ್ಟು ಸಾಗಿಸುತ್ತಿದ್ದ ಆಫ್ರಿಕನ್ ಮಹಿಳೆ ಬೆಂಗಳೂರು ಏರ್ಪೋರ್ಟ್​ನಲ್ಲಿ ಅರೆಸ್ಟ್
ಕೊಕೇನ್
Follow us
TV9 Web
| Updated By: ಆಯೇಷಾ ಬಾನು

Updated on:Jan 31, 2023 | 11:46 AM

ಬೆಂಗಳೂರು: ಸುಮಾರು 7 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಹೊಂದಿರುವ 58 ಕ್ಯಾಪ್ಸುಲ್‌ಗಳನ್ನು ತನ್ನ ಕರುಳಿನಲ್ಲಿ ಬಚ್ಚಿಟ್ಟು ಸಾಗಿಸಲು ಯತ್ನಿಸಿದ್ದ ಮಹಿಳೆಯೊಬ್ಬರು ಬೆಂಗಳೂರು ಏರ್ಪೋರ್ಟ್​ನಲ್ಲಿ ಸಿಕ್ಕಿಬಿದ್ದಿದ್ದಾರೆ. ಸಿಯೆರಾ ಲಿಯೋನ್‌ ಎಂಬ 40 ವರ್ಷದ ಮಹಿಳೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಮಹಿಳೆ ಪಶ್ಚಿಮ ಆಫ್ರಿಕಾದ ಸಿಯೆರಾ ಲಿಯೋನ್ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆ ಕ್ಯಾಪ್ಸೂಲ್‌ಗಳನ್ನು ನುಂಗಿದ ನಂತರ ವೆಸ್ಟ್ ಆಫ್ರಿಕಾದ ಗಿನಿಯಾದಲ್ಲಿ ವಿಮಾನವನ್ನು ಹತ್ತಿದ್ದರು. ಮತ್ತು ಜನವರಿ 14 ರಂದು ಎಮಿರೇಟ್ಸ್ ವಿಮಾನದಲ್ಲಿ ದುಬೈ ಮೂಲಕ ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮೂಲಗಳ ಪ್ರಕಾರ, ಅಧಿಕಾರಿಗಳು ಮಹಿಳೆಯ ಕೆಲವು ಅಸಾಮಾನ್ಯ ವರ್ತನೆಯನ್ನು ಗಮನಿಸಿದ್ದು ಅನುಮಾನ ಬಂದಿದೆ. ಹೀಗಾಗಿ ಮಹಿಳಾ ಅಧಿಕಾರಿಗಳ ಸಹಾಯದಿಂದ ಮಹಿಳೆಯನ್ನು ಸ್ಕ್ಯಾನ್ ಮತ್ತು ರೇಡಿಯಾಲಜಿ ಕಾರ್ಯವಿಧಾನಗಳಿಗೆ ಒಳಪಡಿಸಲಾಗಿದೆ. ಈ ವೇಳೆ ಮಹಿಳೆಯು ತನ್ನ ಕರುಳಿನಲ್ಲಿ ಕ್ಯಾಪ್ಸುಲ್​ಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ನಂತರ ಆಕೆಯನ್ನು ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.

ಇದನ್ನೂ ಓದಿ: Assembly Polls: ಎಲ್ಲ ಪಕ್ಷಗಳ ಯಾತ್ರೆಯಂತೆ ಗಾಲಿ ಜನಾರ್ಧನ ರೆಡ್ಡಿಯವರ ಕಲ್ಯಾಣ ಯಾತ್ರೆ ಆರಂಭ

ನಂತರ ಆಕೆಯ ಕಿಬ್ಬೊಟ್ಟೆಯಲ್ಲಿ ಕೊಕೇನ್ ಇರುವ 58 ಕ್ಯಾಪ್ಸುಲ್‌ಗಳು ಇರುವುದು ಸಾಬೀತಾಗಿದ್ದು ವಿಚಾರಣೆಯ ವೇಳೆ, ಮಹಿಳೆ ಜನವರಿ 13 ರಂದು ಗಿನಿಯಾದ ಕೊನಾಕ್ರಿ ಗ್ಬೆಸ್ಸಿಯಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನದಲ್ಲಿ 686 ಗ್ರಾಂ ಕೊಕೇನ್ ಅನ್ನು ಸಾಗಿಸಿದ್ದಾಗಿ ಒಪ್ಪಿಕೊಂಡಿದ್ದಾಳೆ. ನಂತರ ಪೊಲೀಸರು ವೈದ್ಯಕೀಯ ಸಹಾಯದಿಂದ ಆಕೆಯ ದೇಹದಿಂದ ಎಲ್ಲಾ ಕ್ಯಾಪ್ಸುಲ್‌ಗಳನ್ನು ಹೊರತೆಗೆದಿದ್ದಾರೆ. ಆದರೆ, ಕಸ್ಟಮ್ಸ್ ಅಧಿಕಾರಿಗಳು ಮಹಿಳೆಯ ದೇಹದಿಂದ ತೆಗೆದ ಡ್ರಗ್ಸ್ ಅನ್ನು ಯಾರಿಗೆ ಹಸ್ತಾಂತರಿಸಿದ್ದಾರೆ. ಹಾಗೂ ಆ ಮಹಿಳೆಯನ್ನು ಯಾರು ವಶಕ್ಕೆ ಪಡೆದಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:46 am, Tue, 31 January 23

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ