AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಬೆಂಗಳೂರಿನಲ್ಲಿ ಪ್ರೇಯಸಿಗೆ ಸುತ್ತಿಗೆಯಿಂದ ಹೊಡೆದು ಕೊಂದ; ಆಲ್ಕೋಹಾಲ್ ಕುಡಿದಿದ್ದಕ್ಕೇ ಸತ್ತಿದ್ದೆಂದು ಕತೆ ಕಟ್ಟಿದ

Murder in Bangalore: ಆರೋಪಿಯು ಜ. 6ರಂದು ತಡರಾತ್ರಿ ಮಹಿಳೆಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದರು. ಅದರಿಂದ ಆಕೆ ಪ್ರಜ್ಞಾಹೀನಳಾಗಿ ಬಿದ್ದಿದ್ದರು. ಅವಳು ಮದ್ಯ ಸೇವಿಸಿ ಪ್ರಜ್ಞಾಹೀನಳಾಗಿ ಬಿದ್ದಿದ್ದಾಳೆ ಎಂದು ಜ. 7ರಂದು ಬೆಳಗ್ಗೆ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದರು. ಅಲ್ಲಿ ಆಕೆ ಸತ್ತಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

Bengaluru Crime: ಬೆಂಗಳೂರಿನಲ್ಲಿ ಪ್ರೇಯಸಿಗೆ ಸುತ್ತಿಗೆಯಿಂದ ಹೊಡೆದು ಕೊಂದ; ಆಲ್ಕೋಹಾಲ್ ಕುಡಿದಿದ್ದಕ್ಕೇ ಸತ್ತಿದ್ದೆಂದು ಕತೆ ಕಟ್ಟಿದ
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Jan 15, 2022 | 1:09 PM

Share

ಬೆಂಗಳೂರು: ತನ್ನ ಜೊತೆಗೆ ಲಿವ್-ಇನ್ ರಿಲೇಷನ್​ಶಿಪ್​ನಲ್ಲಿದ್ದ (Live-In-Relationship) ಮಹಿಳೆಯನ್ನು ಬೆಂಗಳೂರಿನ 42 ವರ್ಷದ ವ್ಯಕ್ತಿಯೊಬ್ಬರು ಸುತ್ತಿಗೆಯಿಂದ ಹೊಡೆದು ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಳೆದ ವಾರ ಚುಂಚಘಟ್ಟ ಮುಖ್ಯರಸ್ತೆಯ ಬೀರೇಶ್ವರನಗರದಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ಮಂಜುನಾಥ್ ಎಂಬ ವ್ಯಕ್ತಿ 35 ವರ್ಷದ ಮಹಿಳೆಯನ್ನು ಕೊಲೆ ಮಾಡಿದ್ದಾರೆ. ಕಂಠಪೂರ್ತಿ ಕುಡಿದಿದ್ದ ಅವರು ತನ್ನ ಜೊತೆ ಲಿವ್ ಇನ್ ರಿಲೇಷನ್​ಶಿಪ್​ನಲ್ಲಿದ್ದ ಮಹಿಳೆಗೆ ಹೊಡೆದು, ಹತ್ಯೆ (Murder) ಮಾಡಿದ್ದಾರೆ ಎನ್ನಲಾಗಿದೆ. 35 ವರ್ಷದ ಮೃತ ಮಹಿಳೆ ಮಂಜುಳಾ ಎರಡು ಮಕ್ಕಳ ತಾಯಿಯಾಗಿದ್ದು, ಖಾಸಗಿ ವಿಮಾ ಕಂಪನಿಯಲ್ಲಿ ಹೌಸ್ ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಆರೋಪಿ ಮಂಜುನಾಥ್ ಬಾರ್ ಬೆಂಡರ್ ಆಗಿ ಕೆಲಸ ಮಾಡುತ್ತಿದ್ದರು.

ಈ ಪ್ರಕರಣದ ಕುರಿತು ಮಾಹಿತಿಯನ್ನು ನೀಡಿರುವ ಪೊಲೀಸರು, ಆರೋಪಿಯು ಜನವರಿ 6ರಂದು ತಡರಾತ್ರಿ ಮಹಿಳೆಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದರು. ಅದರಿಂದ ಆಕೆ ಪ್ರಜ್ಞಾಹೀನಳಾಗಿ ಬಿದ್ದಿದ್ದರು. ಅವಳು ಮದ್ಯ ಸೇವಿಸಿ ಪ್ರಜ್ಞಾಹೀನಳಾಗಿ ಬಿದ್ದಿದ್ದಾಳೆ ಎಂದು ಹೇಳಿ ಜ. 7ರಂದು ಬೆಳಗ್ಗೆ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದರು. ಅಲ್ಲಿ ಆಕೆ ಸತ್ತಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಆ ಮಹಿಳೆ ಕೆಲವು ಗಂಟೆಗಳ ಹಿಂದೆಯೇ ಸಾವನ್ನಪ್ಪಿರಬಹುದು ಎಂದು ವೈದ್ಯರು ಅನುಮಾನ ವ್ಯಕ್ತಪಡಿಸಿದ ನಂತರ ಆರೋಪಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.

ಹೆಚ್ಚಿನ ವರದಿಗಳ ಪ್ರಕಾರ, ಮಂಜುಳಾ ಕಳೆದ 2 ವರ್ಷಗಳಿಂದ ಮಂಜುನಾಥ್ ಅವರೊಂದಿಗೆ ವಾಸಿಸುತ್ತಿದ್ದರು. ಅವರ ಪತಿ ಎಂಟು ವರ್ಷಗಳ ಹಿಂದೆ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು. ಇದರ ಹಿಂದೆ ಮಂಜುಳಾ ಕೈವಾಡವಿರಬಹುದು ಎಂದು ಮಂಜುನಾಥನಿಗೆ ಅನುಮಾನವಿತ್ತು. ಈ ವಿಷಯದ ಬಗ್ಗೆ ಇಬ್ಬರೂ ಆಗಾಗ್ಗೆ ಜಗಳವಾಡುತ್ತಿದ್ದರು.

ಜನವರಿ 6ರಂದು ಮದ್ಯದ ಅಮಲಿನಲ್ಲಿ ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿತ್ತು. ಈ ನಡುವೆ ಮಂಜುಳಾ ಮೇಲೆ ಸುತ್ತಿಗೆಯಿಂದ ಹಲ್ಲೆ ಮಾಡಿದ ಮಂಜುನಾಥ್ ಆಕೆಯ ಕಾಲು ಮತ್ತು ಪಕ್ಕೆಲುಬುಗಳನ್ನು ಮುರಿದುಕೊಂಡಿದ್ದರಿಂದ ಆಕೆ ಸಾವನ್ನಪ್ಪಿದ್ದಾರೆ. ಇದಾದ ನಂತರ, ಆರೋಪಿಯು ತನ್ನ ಮನೆ ಮಾಲೀಕರನ್ನು ಸಂಪರ್ಕಿಸಿದ್ದರು. ಹಾಗೇ, ತನ್ನ ಹೆಂಡತಿ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ ಆಕೆಯನ್ನು ಆಸ್ಪತ್ರೆಗೆ ದಾಖಲಿಸಬೇಕು ಎಂದು ಆಟೋದಲ್ಲಿ ಕರೆದುಕೊಂಡು ಹೋಗಿದ್ದರು.

ಶವಪರೀಕ್ಷೆ ವರದಿಯ ನಂತರ ಆಕೆಯನ್ನು ಕೊಲೆ ಮಾಡಿರುವುದು ಸ್ಪಷ್ಟವಾಗಿದ್ದರಿಂದ ಈ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ತನ್ನ ಸಂಗಾತಿಯನ್ನು ಕೊಂದ ನಂತರ ಸಾಕ್ಷ್ಯ ನಾಶಪಡಿಸಿದ ಆರೋಪವನ್ನೂ ಹೊರಿಸಲಾಗಿದೆ.

ಇದನ್ನೂ ಓದಿ: Murder: ಮಲಗಿದ್ದ ಮೂವರ ತಲೆಗೆ ಸುತ್ತಿಗೆಯಿಂದ ಹೊಡೆದು ಕಗ್ಗೊಲೆ; 19 ವರ್ಷದ ಯುವಕನ ಬಂಧನ

Murder: ಲವರ್ ಜೊತೆ ಮಾತಾಡಿದ್ದಕ್ಕೆ ಯುವಕನ ಕಗ್ಗೊಲೆ; ಹಂತಕನನ್ನು ಪತ್ತೆಹಚ್ಚಿದ್ದೇ ಒಂದು ರೋಚಕ ಕತೆ

Published On - 1:09 pm, Sat, 15 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ