AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಚಕರೇ ಈತನ ಟಾರ್ಗೆಟ್! ಉದ್ಯಮಿ ಸೋಗಿನಲ್ಲಿ ಬಂದು ಮುತ್ತೈದೆಯರ ಒಡವೆ ಎಗರಿಸುತ್ತಿದ್ದ ಖತರ್ನಾಕ್ ಕಳ್ಳ ಅರೆಸ್ಟ್

ದೇವಸ್ಥಾನದ ಅರ್ಚಕರೊಂದಿಗೆ ಸ್ನೇಹ ಬೆಳೆಸಿ, ಅವರ ಮನೆಯವರನ್ನೇ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಪ್ರವೀಣ್ ಭಟ್ ಎಂಬ ಖತರ್ನಾಕ್ ಕಳ್ಳ ಈಗ ರಾಜಾಜಿನಗರ ಪೊಲೀಸರ ವಶವಾಗಿದ್ದಾನೆ. ಉದ್ಯಮಿಯ ಸೋಗಿನಲ್ಲಿ ಪರಿಚಯಿಸಿಕೊಂಡು, ಹೊಸ ಅಂಗಡಿ ಪೂಜೆಗೆ ಮುತ್ತೈದೆಯರು ಬೇಕು ಎಂದು ನಂಬಿಸಿ ಚಿನ್ನಾಭರಣದೊಂದಿಗೆ ಪರಾರಿಯಾಗುತ್ತಿದ್ದ ಖದೀಮನ ಅಸಲಿಯತ್ತನ್ನು ಇದೀಗ ಪೊಲೀಸರು ಬಯಲಿಗೆಳೆದಿದ್ದಾರೆ.

ಅರ್ಚಕರೇ ಈತನ ಟಾರ್ಗೆಟ್! ಉದ್ಯಮಿ ಸೋಗಿನಲ್ಲಿ ಬಂದು ಮುತ್ತೈದೆಯರ ಒಡವೆ ಎಗರಿಸುತ್ತಿದ್ದ ಖತರ್ನಾಕ್ ಕಳ್ಳ ಅರೆಸ್ಟ್
ಆರೋಪಿ ಪ್ರವೀಣ್ ಭಟ್Image Credit source: tv9
ಗಣಪತಿ ಶರ್ಮಾ
|

Updated on: Mar 20, 2026 | 9:20 AM

Share

ಬೆಂಗಳೂರು, ಮಾರ್ಚ್ 20: ದೇವಸ್ಥಾನದ ಅರ್ಚಕರನ್ನೇ ಟಾರ್ಗೆಟ್ ಮಾಡುತ್ತಿದ್ದ ಖತರ್ನಾಕ್ ವಂಚಕ ಕಳ್ಳನನ್ನು ಬೆಂಗಳೂರಿನ (Bangalore) ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರವೀಣ್ ಭಟ್ ಎಂದು ಗುರುತಿಸಲಾಗಿದ್ದು, ಅವನಿಂದ ಸುಮಾರು 15 ಲಕ್ಷ ರೂ. ಮೌಲ್ಯದ 116 ಗ್ರಾಂ ಚಿನ್ನ ಹಾಗೂ 409 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಈತ ಶ್ರೀಮಂತ ಉದ್ಯಮಿಯ ಸೋಗಿನಲ್ಲಿ ದೇಗುಲಗಳ ಅರ್ಚಕರ ಜತೆ ಪರಿಚಯ ಮಾಡಿಕೊಂಡು ಮುತ್ತೈದೆಯರು ಬೇಕೆಂದು ಅವರ ಚಿನ್ನಾಭರಣ ಕದಿಯುತ್ತಿದ್ದ.

ಪ್ರವೀಣ್ ಭಟ್ ತನ್ನನ್ನು ಶ್ರೀಮಂತ ಉದ್ಯಮಿ ಎಂದು ಪರಿಚಯಿಸಿಕೊಂಡು, ಮೊದಲಿಗೆ ವಿವಿಧ ಪ್ರದೇಶಗಳ ಪ್ರಸಿದ್ಧ ದೇವಸ್ಥಾನಗಳಿಗೆ ತೆರಳಿ ಅರ್ಚಕರೊಂದಿಗೆ ಸ್ನೇಹ ಬೆಳೆಸುತ್ತಿದ್ದ. ಆಗಾಗ ಪೂಜೆ ಮಾಡಿಸಿ, ದೇವಸ್ಥಾನಕ್ಕೆ ಸಾವಿರಾರು ರೂಪಾಯಿ ದೇಣಿಗೆ ನೀಡುವ ಮೂಲಕ ವಿಶ್ವಾಸ ಗಳಿಸುತ್ತಿದ್ದ. ಬಳಿಕ ತನ್ನ ಹೊಸ ಅಂಗಡಿ ಉದ್ಘಾಟನೆಗಾಗಿ ವಿಶೇಷ ಪೂಜೆ ಮಾಡಬೇಕೆಂದು ಹೇಳಿ, ‘ಮುತ್ತೈದೆಯರು ಬೇಕು’ ಎಂಬ ನೆಪದಲ್ಲಿ ಅರ್ಚಕರ ಮನೆಯವರನ್ನು ಕಳುಹಿಸುವಂತೆ ಕೇಳುತ್ತಿದ್ದ.

ಇದಕ್ಕೆ ಮರುಳಾದ ಕೆಲ ಅರ್ಚಕರು ತಮ್ಮ ಪತ್ನಿಯನ್ನು ಕಳುಹಿಸುತ್ತಿದ್ದರು. ಪೂಜೆಗೆ ಕರೆದುಕೊಂಡು ಹೋಗುವ ನೆಪದಲ್ಲಿ ಮಹಿಳೆಯರನ್ನು ಆಟೋದಲ್ಲಿ ಕರೆದೊಯ್ಯುತ್ತಿದ್ದ ಆರೋಪಿ, ‘ನೀವು ಹೋಗುವ ಜಾಗದಲ್ಲಿ ಒಡವೆಗಳನ್ನು ಹಾಕಿಕೊಳ್ಳಬೇಡಿ, ನನ್ನ ಬಳಿ ಇಡಿ, ನಂತರ ಕೊಡುತ್ತೇನೆ’ ಎಂದು ಹೇಳಿ ಆಭರಣಗಳನ್ನು ಪಡೆದುಕೊಳ್ಳುತ್ತಿದ್ದ. ಬಳಿಕ ಮಧ್ಯದಲ್ಲೇ ಮಹಿಳೆಯರನ್ನು ಬಿಟ್ಟು ಪರಾರಿಯಾಗುತ್ತಿದ್ದ.

ಈ ರೀತಿಯಾಗಿ ಐದುಕ್ಕೂ ಹೆಚ್ಚು ಪ್ರಕರಣಗಳಲ್ಲಿ ಇದೇ ರೀತಿಯಲ್ಲಿ ವಂಚನೆ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹೆಬ್ಬಾಳ, ರಾಮಮೂರ್ತಿನಗರ, ಸಿಟಿ ಮಾರ್ಕೆಟ್, ರಾಜಾಜಿನಗರ ಹಾಗೂ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಗಳಲ್ಲಿ ಪ್ರವೀಣ್ ವಿರುದ್ಧ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಕೆಲಸ ಮಾಡ್ತಿದ್ದ ಅಂಗಡಿಗೇ ಕನ್ನ: ಕದ್ದ ಆಭರಣ ಮಾರಿ ಮಹಾಕಾಳೇಶ್ವರನಿಗೆ ಪೂಜೆ ಸಲ್ಲಿಸಿದ್ದವರು ಲಾಕ್!

ಅರ್ಚಕರ ಕುಟುಂಬದವರಿಂದ ಬಂದ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ರಾಜಾಜಿನಗರ ಪೊಲೀಸರು ಆರೋಪಿಯನ್ನು ಬಂಧಿಸಿ, ಚಿನ್ನ-ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಮುಂದಿನ ತನಿಖೆ ಮುಂದುವರಿದಿದೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ