ಐಷಾರಾಮಿ ಕಾರು-ಬೈಕುಗಳ ಕಳ್ಳತನ: ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡ್ತಿದ್ದ ಆರೋಪಿಗಳು ಬೆಂಗಳೂರಿನಲ್ಲಿ ಅರೆಸ್ಟ್

ಬೆಂಗಳೂರಿನಲ್ಲಿ ಬೈಕ್‌ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಉದಯ್ ಕುಮಾರ್(19), ಅಸ್ಲಂ ಸೊಲೇಜಾ(37) ಬಂಧಿತರು. ಆರೋಪಿಗಳಿಂದ 30.45 ಲಕ್ಷ ರೂಪಾಯಿ ಮೌಲ್ಯದ 40 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

ಐಷಾರಾಮಿ ಕಾರು-ಬೈಕುಗಳ ಕಳ್ಳತನ: ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡ್ತಿದ್ದ ಆರೋಪಿಗಳು ಬೆಂಗಳೂರಿನಲ್ಲಿ ಅರೆಸ್ಟ್
ಐಷಾರಾಮಿ ಕಾರು-ಬೈಕುಗಳ ಕಳ್ಳತನ: ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡ್ತಿದ್ದ ಆರೋಪಿಗಳು ಬೆಂಗಳೂರಿನಲ್ಲಿ ಅರೆಸ್ಟ್
Follow us
TV9 Web
| Updated By: ಆಯೇಷಾ ಬಾನು

Updated on: Mar 07, 2022 | 4:49 PM

ಬೆಂಗಳೂರು: ಐಷಾರಾಮಿ ಕಾರುಗಳನ್ನು ಕದ್ದು ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಗೂ ಬಂಧಿತರಿಂದ 1 ಕೋಟಿ 55 ಲಕ್ಷ ರೂ. ಮೌಲ್ಯದ 6 ಇನೋವಾ ಕಾರು, 1 ಟೊಯೋಟಾ ಇಟಿಯೋಸ್ ಕಾರು ಜಪ್ತಿ ಮಾಡಲಾಗಿದೆ. ಆರೋಪಿಗಳು ಆಕ್ಸಿಡೆಂಟ್ ಆದ ವಾಹನಗಳ ಚಾರ್ಸಿ ನಂಬರ್, ವಾಹನದ ನಂಬರ್ ಕದ್ದ ಕಾರಿಗೆ ಬದಲಿಸಿ ಮಾರಾಟ ಮಾಡುತ್ತಿದ್ದರು. ತಮಿಳುನಾಡು ಮತ್ತು ಬೇರೆ ಬೇರೆ ರಾಜ್ಯದ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು. ಸದ್ಯ ಬೇಗೂರು ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಬೈಕ್ ಕಳ್ಳರು ಅರೆಸ್ಟ್ ಇನ್ನು ಮತ್ತೊಂದೆಡೆ ಬೆಂಗಳೂರಿನಲ್ಲಿ ಬೈಕ್‌ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಉದಯ್ ಕುಮಾರ್(19), ಅಸ್ಲಂ ಸೊಲೇಜಾ(37) ಬಂಧಿತರು. ಆರೋಪಿಗಳಿಂದ 30.45 ಲಕ್ಷ ರೂಪಾಯಿ ಮೌಲ್ಯದ 40 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಬೆಂಗಳೂರು, ಕೋಲಾರ ಸೇರಿದಂತೆ ಹೊರವಲಯದ ವ್ಯಾಪ್ತಿಯಲ್ಲಿ ಕಳ್ಳತನ ಮಾಡ್ತಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಬೇಡಿಕೆ ಇರುವ ಡಿಯೋ ಬೈಕ್ಗಳನ್ನೇ ಕದ್ದು ಆರೋಪಿಗಳು ಮಾರಾಟ ಮಾಡುತ್ತಿದ್ದರು.

8 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಬೆಂಗಳೂರಿನಲ್ಲಿ 8 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಲಾಗಿದೆ. ಹುಳಿಮಾವು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳ ಸೆರೆ ಹಿಡಿದಿದ್ದಾರೆ. ಬಂಧಿತರಿಂದ 12 ಕೆಜಿ 940 ಗ್ರಾಂ ಹ್ಯಾಶಿಸ್ ಆಯಿಲ್, 26 ಕೆಜಿ 250 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ವಿಕ್ರಂ ಅಲಿಯಾಸ್ ವಿಕ್ಕಿ(23), ಸಿಗಿಲ್ ವರ್ಗಿಸ್(23), ವಿಷ್ಣುಪ್ರಿಯಾ(22)ಳನ್ನು ಬಂಧಿತ ಆರೋಪಿಗಳು. ಕೇರಳದ ವರ್ಗಿಸ್, ತಮಿಳುನಾಡು ಮೂಲದ ವಿಷ್ಣುಪ್ರಿಯಾ ಎಂಬ ಆರೋಪಿಗಳು ವಿಕ್ರಂ ಮೂಲಕ ಮಾದಕ ವಸ್ತು ಮಾರಾಟ ಮಾಡಿಸುತ್ತಿದ್ದರು. ಸಿಗಿಲ್ ವರ್ಗಿಸ್ ಮತ್ತು ವಿಷ್ಣುಪ್ರಿಯಾ ಪ್ರೇಮಿಗಳು. ಇವರು ಕೊತ್ತನೂರಲ್ಲಿ ಮನೆ ಮಾಡಿಕೊಂಡು ವಾಸವಿದ್ದು ಈಗ ಅದೇ ಮನೆಯಲ್ಲಿಯೇ ಕೋಟಿ ಕೋಟಿ ಮೌಲ್ಯದ ಮಾದಕ ವಸ್ತು ಪತ್ತೆಯಾಗಿದೆ.

ಇದನ್ನೂ ಓದಿ: ಕೀವ್​​ ಗಡಿಯಲ್ಲಿ ಮಗಳ ಎದುರೇ ಮದುವೆಯಾದ ಉಕ್ರೇನಿಯನ್ ದಂಪತಿ; ಹಾಡಿ, ಸಂಭ್ರಮಿಸಿದ ಸೈನಿಕರ ವಿಡಿಯೋ ವೈರಲ್

Crime News: ಸಂಚಾರ ವಿಭಾಗ ಜಂಟಿ ಪೊಲೀಸ್ ಆಯಕ್ತರ ಕಚೇರಿಯಲ್ಲೇ ಕಳ್ಳತನ; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?