Bengaluru Crime: ಬೆಂಗಳೂರಿನಲ್ಲೊಂದು ಭೀಕರ ಘಟನೆ; ಗರ್ಲ್​ಫ್ರೆಂಡ್​ನ 3 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ, ಕೊಲೆ

Shocking News: ಗಾಂಜಾ ಮತ್ತು ಕುಡಿತದ ಚಟಕ್ಕೆ ಬಿದ್ದಿದ್ದ ಬೆಂಗಳೂರಿನ 26 ವರ್ಷದ ಯುವಕ 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಸ್ಥಳದಲ್ಲೇ ಕೊಂದು ಹಾಕಿದ್ದಾನೆ.

Bengaluru Crime: ಬೆಂಗಳೂರಿನಲ್ಲೊಂದು ಭೀಕರ ಘಟನೆ; ಗರ್ಲ್​ಫ್ರೆಂಡ್​ನ 3 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ, ಕೊಲೆ
ಸಾಂದರ್ಭಿಕ ಚಿತ್ರ

Updated on: Feb 01, 2023 | 11:20 AM

ಬೆಂಗಳೂರು: ಮದುವೆಯಾಗಿ, ಮಗು ಇರುವ ಮಹಿಳೆಯ ಜೊತೆ ಸಂಬಂಧ ಹೊಂದಿದ್ದ ಬೆಂಗಳೂರಿನ (Bengaluru News) 26 ವರ್ಷದ ಯುವಕನೊಬ್ಬ ತನ್ನ ಗರ್ಲ್​ಫ್ರೆಂಡ್​​ನ 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಕೊಲೆ (Murder)  ಮಾಡಿರುವ ಭಯಾನಕ ಘಟನೆ (Shocking News) ಮಂಗಳವಾರ ನಡೆದಿದೆ. ಒಂಟಿಯಾಗಿ ಮಗಳೊಂದಿಗೆ ವಾಸವಾಗಿದ್ದ ಮಹಿಳೆ ಗಾರ್ಮೆಂಟ್ಸ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಆಕೆ ಆರೋಪಿಯೊಂದಿಗೆ 1 ವರ್ಷದಿಂದ ಸಂಬಂಧ ಹೊಂದಿದ್ದಳು. ಆಕೆಯನ್ನು ಭೇಟಿಯಾಗಲು ಆಗಾಗ ಮನೆಗೆ ಬರುತ್ತಿದ್ದ ಆರೋಪಿ ಆಕೆಯ 3 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸಿದ್ದು, ಈ ವಿಚಾರವನ್ನು ಆಕೆ ಬೇರೆಯವರಿಗೆ ಹೇಳಿದರೆ ಕಷ್ಟವೆಂದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ. ಮಹಿಳೆ ಮನೆಯಲ್ಲಿ ಇಲ್ಲದ ವೇಳೆ, ಮಗು ಒಂದೇ ಮನೆಯಲ್ಲಿದ್ದಾಗ ಆರೋಪಿ ಆ ಮನೆಗೆ ಹೋಗಿದ್ದಾನೆ. ಆಗ ಆ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ. ಆತನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾಮುಕನ ಅಟ್ಟಹಾಸ; ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ

ಈ ಕೃತ್ಯ ಎಸಗಿದಾಗ ಆರೋಪಿ ಗಾಂಜಾ ಸೇವನೆಯ ಅಮಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಸಂಜೆ ದಕ್ಷಿಣ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕೆಲವು ಗಂಟೆಗಳ ನಂತರ ಆರೋಪಿಯನ್ನು ಬಂಧಿಸಲಾಗಿದೆ. ಅಂಬೆಗಾಲಿಡುವ ಮಗುವನ್ನು ತನ್ನ ಕಾಮತೃಷೆಗೆ ಬಳಸಿಕೊಂಡು, ಕೊಲೆ ಮಾಡಿದ ಆರೋಪಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಗಾಂಜಾ ಮತ್ತು ಕುಡಿತದ ಚಟಕ್ಕೆ ಬಿದ್ದಿದ್ದ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಸ್ಥಳದಲ್ಲೇ ಕೊಂದು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ ಕೆಲಸ ಮುಗಿಸಿ ಮನೆಗೆ ಬಂದ ತಾಯಿ ತನ್ನ ಮಗಳು ಪ್ರಜ್ಞೆ ತಪ್ಪಿ ಬಿದ್ದಿರುವುದನ್ನು ನೋಡಿ ಗಾಬರಿಯಾಗಿ ತನ್ನ ಬಾಯ್​ಫ್ರೆಂಡ್​ಗೆ ಫೋನ್ ಮಾಡಿದ್ದಾಳೆ. ತನಗೇನೂ ಗೊತ್ತೇ ಇಲ್ಲವೆನ್ನುವಂತೆ ಅಲ್ಲಿಗೆ ಬಂದ ಆರೋಪಿಯೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಅಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ತಂದೆಯಿಂದಲೇ ಅತ್ಯಾಚಾರ

ತನ್ನ ಮಗಳನ್ನು ನೋಡಿಕೊಳ್ಳಲು ಬಾಯ್​ಫ್ರೆಂಡ್​ಗೆ ಹೇಳಿದ್ದ ಆ ಮಹಿಳೆ ತನ್ನ ಮಗಳು ಹೇಗೆ ಸತ್ತಳೆಂದು ಆತನನ್ನು ಪ್ರಶ್ನಿಸಿದ್ದಾನೆ. ಆಗ ಆತ ಆಕೆಗೆ ಹೊಡೆದು, ಹಿಂಸೆ ನೀಡಿದ್ದಾನೆ. ಬಳಿಕ ಆಕೆ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾಳೆ. ಬಾಲಕಿಯ ದೇಹದ ಮೇಲೆ ಬಾಹ್ಯ ಗಾಯಗಳಿರುವುದರಿಂದ ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ವಿಚಾರಣೆ ವೇಳೆ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ