AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಗಾಯತ್ರಿ ನಗರದ ಮನೆಯಲ್ಲಿ ಅಗ್ನಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

Bangalore Cime: ಬೆಂಗಳೂರಿನಲ್ಲಿ ಸೋಮವಾರ ನಡೆದ ಎರಡು ಪ್ರತ್ಯೇಕ ಘಟನೆಗಳು ನಗರವಾಸಿಗಳನ್ನು ಬೆಚ್ಚಿಬೀಳುವಂತೆ ಮಾಡಿವೆ. ಗಾಯತ್ರಿ ನಗರದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮಹಿಳೆಯೊಬ್ಬರು ದುರ್ಮರಣ ಹೊಂದಿದರೆ, ಮೂವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸವೇಶ್ವರನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಬೆಂಗಳೂರಿನ ಗಾಯತ್ರಿ ನಗರದ ಮನೆಯಲ್ಲಿ ಅಗ್ನಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ
ಗಾಯತ್ರಿ ನಗರದ ಮನೆಯಲ್ಲಿ ಅಗ್ನಿ ಅವಘಡImage Credit source: tv9
ರಾಚಪ್ಪಾಜಿ ನಾಯ್ಕ್
| Edited By: |

Updated on: Mar 03, 2026 | 6:35 AM

Share

ಬೆಂಗಳೂರು, ಮಾರ್ಚ್​ 3: ಬೆಂಗಳೂರಿನ (Bangalore) ಗಾಯತ್ರಿ ನಗರದಲ್ಲಿರುವ ಕಂಟ್ರ್ಯಾಕ್ಟರ್ ರಮೇಶ್ ಬಾಬು ಅವರ ನಾಲ್ಕು ಅಂತಸ್ತಿನ ಮನೆಯಲ್ಲಿ ಮೂರನೇ ಮಹಡಿಯ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಸಂಭವಿಸಿದ ಅವಘಡದಲ್ಲಿ ರಮೇಶ್ ಬಾಬು ಅವರ ಪತ್ನಿ 53 ವರ್ಷದ ಸವಿತಾ ದುರ್ಮರಣ ಹೊಂದಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ ಹಾಗೂ ಮಗನನ್ನು ರಕ್ಷಿಸಿದ್ದಾರೆ. ಗಾಯಗೊಂಡವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಮಲ್ಲೇಶ್ವರಂ ಎಸಿಪಿ ವೇಣುಗೋಪಾಲ್ ಹಾಗೂ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದನ್ನು ತಿಳಿಯಲು ತನಿಖೆ ಮುಂದುವರಿದಿದೆ.

ಬಸವೇಶ್ವರನಗರದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

ಇನ್ನೊಂದೆಡೆ ಬಸವೇಶ್ವರನಗರದ ಶಿವನಹಳ್ಳಿಯಲ್ಲಿ ರಾತ್ರಿ 11.30ರ ಸುಮಾರಿಗೆ ಶಶಿಕುಮಾರ್ ಎಂಬಾತನನ್ನು ಚಾಕು ಹಾಗೂ ಡ್ರ್ಯಾಗರ್‌ನಿಂದ ಇರಿದು ಹತ್ಯೆ ಮಾಡಲಾಗಿದೆ. ಶ್ರೀ ಗುರು ರಾಘವೇಂದ್ರ ವೆಜ್ ಆ್ಯಂಡ್ ದೋಸೆ ಕಾರ್ನರ್ ಹೋಟೆಲ್ ಬಳಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಅಡುಗೆಯವನ ಕೆಲಸವೇ ಹೋಯ್ತು! ಬೆಂಗಳೂರು ಟೆಕ್ಕಿಗೆ ಎಐ ರೂಮ್​ಮೇಟ್ ನೆರವಾಗಿದ್ಹೇಗೆ ಗೊತ್ತೇ!

ರಾತ್ರಿ ಊಟಕ್ಕೆ ಬಂದಿದ್ದ ಶಶಿಕುಮಾರ್ ಜೊತೆ ಇಬ್ಬರು ವ್ಯಕ್ತಿಗಳ ನಡುವೆ ಗಲಾಟೆ ಸಂಭವಿಸಿದ್ದು, ಬಳಿಕ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ಕ್ಷುಲ್ಲಕ ಕಾರಣಕ್ಕೆ ಕೊಲೆ ನಡೆದಿದೆಯೇ ಅಥವಾ ಹಳೆಯ ವೈಷಮ್ಯವೇ ಕಾರಣವೇ ಎಂಬುದರ ಬಗ್ಗೆ ಬಸವೇಶ್ವರನಗರ ಪೊಲೀಸರು ತನಿಖೆ ನಡೆಸಲಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ
ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ
ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ
ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ
ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು
ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು