ಬೆಂಗಳೂರು: 7 ವರ್ಷದ ಬಾಲಕಿಗೆ 74 ವರ್ಷದ ನಿವೃತ್ತ ಪೊಲೀಸ್ ಸಬ್‌ಇನ್ಸ್​ಪೆಕ್ಟರ್​ ಲೈಂಗಿಕ ಕಿರುಕುಳ, ರಿಟೈಡ್ ಅಧಿಕಾರಿ ಅರೆಸ್ಟ್

ಸೋಮವಾರ, ಬಾಲಕಿ ಆಟಿಕೆ ತೆಗೆದುಕೊಳ್ಳಲು ಬಂದಾಗ ಆರೋಪಿ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾನೆ. ಪೋಕ್ಸೋ ಕಾಯ್ದೆಯಡಿ ಶಿವಾಜಿನಗರ ಪೊಲೀಸರು ನಿವೃತ್ತ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ನನ್ನು ಬಂಧಿಸಿದ್ದಾರೆ. ಸಂತ್ರಸ್ತೆ ಬಾಲಕಿಯ ತಂದೆ-ತಾಯಿ ಆರೋಪಿಗೆ ಸೇರಿದ ಮನೆಯಲ್ಲೇ ಬಾಡಿಗೆಗಿದ್ದರು.

ಬೆಂಗಳೂರು: 7 ವರ್ಷದ ಬಾಲಕಿಗೆ 74 ವರ್ಷದ ನಿವೃತ್ತ ಪೊಲೀಸ್ ಸಬ್‌ಇನ್ಸ್​ಪೆಕ್ಟರ್​ ಲೈಂಗಿಕ ಕಿರುಕುಳ, ರಿಟೈಡ್ ಅಧಿಕಾರಿ ಅರೆಸ್ಟ್
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on:Aug 16, 2023 | 3:23 PM

ಬೆಂಗಳೂರು, ಆ.16: 7 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ(Sexually Assaulting) ನೀಡಿದ ಆರೋಪದ ಮೇಲೆ ನಿವೃತ್ತ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ನನ್ನು ಶಿವಾಜಿನಗರ ಪೊಲೀಸರು(Shivaji Nagar police) ಸೋಮವಾರ ಬಂಧಿಸಿದ್ದಾರೆ. ಸಂತ್ರಸ್ತೆ ಬಾಲಕಿಯ ಪೋಷಕರ ದೂರಿನ ಆಧಾರದ ಮೇಲೆ ಲೈಂಗಿಕ ಅಪರಾಧಗಳ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಎಫ್‌ಐಆರ್(FIR) ದಾಖಲಿಸಲಾಗಿದೆ. ಬಂಧಿತ ಆರೋಪಿಯನ್ನು ನಿವೃತ್ತ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ 74 ವರ್ಷದ ಅಬ್ದುಲ್ ಹಫೀಜ್ ಎಂದು ಗುರುತಿಸಲಾಗಿದೆ.

ಸಂತ್ರಸ್ತೆ ಬಾಲಕಿಯ ತಂದೆ-ತಾಯಿ ಆರೋಪಿಗೆ ಸೇರಿದ ಮನೆಯಲ್ಲೇ ಬಾಡಿಗೆಗಿದ್ದರು. ಸೋಮವಾರ, ಬಾಲಕಿ ಆಟಿಕೆ ತೆಗೆದುಕೊಳ್ಳಲು ಬಂದಾಗ ಆರೋಪಿ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾನೆ. ಬಾಲಕಿಯ ಪೋಷಕರಿಗೆ ವಿಷಯ ತಿಳಿಯುತ್ತಿದ್ದಂತೆ ಪೋಷಕರು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ, 14 ವರ್ಷಗಳ ಹಿಂದೆ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತನಾಗಿದ್ದ ಎಂದು ತಿಳಿದು ಬಂದಿದೆ ಎಂದು ಪೂರ್ವ ಪೊಲೀಸ್ ಆಯುಕ್ತ ಭೀಮಾಶಂಕರ್ ಗುಳೇದ್ ತಿಳಿಸಿದರು. ಸೋಮವಾರ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸುವಲ್ಲಿ ಶಿವಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಒಂದೇ ತಿಂಗಳಲ್ಲಿ 24 ಪೋಕ್ಸೋ ಪ್ರಕರಣಗಳು ದಾಖಲು

ಏನಿದು ಪೋಕ್ಸೋ ಕಾಯ್ದೆ?

2012 Protection of Children from Sexual Offences Act ಅನ್ನು (POCSO ACT) ಎಂದು ಕರೆಯಲಾಗುತ್ತಿದೆ. ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲತೆಯ ಅಪರಾಧಗಳಿಂದ ಮಕ್ಕಳ ರಕ್ಷಣೆಗಾಗಿ ದೃಢವಾದ ಕಾನೂನು ಚೌಕಟ್ಟನ್ನು ಒದಗಿಸಲು ಪೊಕ್ಸೊ ಕಾಯ್ದೆಯನ್ನು 2012ರಲ್ಲಿ ಜಾರಿಗೆ ತರಲಾಯಿತು. ಈ ಮೂಲಕ ಮಕ್ಕಳನ್ನು ಎಲ್ಲ ರೀತಿಯ ಲೈಂಗಿಕ ದೌರ್ಜನ್ಯ ಅಪರಾಧಗಳಿಂದ ಪಾರು ಮಾಡುವುದು ಕಾಯಿದೆಯ ಮುಖ್ಯ ಉದ್ದೇಶವಾಗಿದೆ. ಈ ಕಾಯಿದೆ ಯಾವುದೇ ಲಿಂಗತಾರತಮ್ಯ ಮಾಡುವುದಿಲ್ಲ ಬಾಲಕಿ ಮತ್ತು ಬಾಲಕ ಇಬ್ಬರನ್ನು ಲೌಂಗಿಕ ದೌರ್ಜನ್ಯದ ಸಂತ್ರಸ್ತರು ಎಂದು ಪರಿಗಣಿಸುತ್ತದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:20 pm, Wed, 16 August 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!