AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ! ಹೃದಯಾಘಾತದ ನಾಟಕವಾಡಿ ಕಣ್ಣೀರಿಟ್ಟಿದ್ದ ಆರೋಪಿ ಅರೆಸ್ಟ್

ಬೆಂಗಳೂರಿನ ದೊಡ್ಡತೋಗೂರಿನಲ್ಲಿ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಉಪೇಂದ್ರನನ್ನು ಪತ್ನಿ ಅನಿತಾ ಪ್ರಿಯಕರ ಮಧುಸೂಧನ್ ಜೊತೆ ಸೇರಿ ಹತ್ಯೆ ಮಾಡಿದ್ದಾಳೆ. ಬಳಿಕ ಹೃದಯಾಘಾತದಿಂದ ಸಾವು ಎಂದು ನಾಟಕವಾಡಿದ್ದಾಳೆ. ಮರಣೋತ್ತರ ಪರೀಕ್ಷೆ ವರದಿಯಿಂದ ಕೊಲೆ ರಹಸ್ಯ ಬಯಲಾಗಿದ್ದು, ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ! ಹೃದಯಾಘಾತದ ನಾಟಕವಾಡಿ ಕಣ್ಣೀರಿಟ್ಟಿದ್ದ ಆರೋಪಿ ಅರೆಸ್ಟ್
ಆರೋಪಿಗಳಾದ ಅನಿತಾ, ಮಧುಸೂಧನ್ ಮತ್ತು ಮೃತ ಉಪೇಂದ್ರ
ಪ್ರದೀಪ್​ ಚಿಕ್ಕಾಟಿ
| Edited By: |

Updated on: Nov 09, 2026 | 11:22 AM

Share

ಮುಖ್ಯಾಂಶಗಳು

  • ಪ್ರಿಯಕರನ ಜೊತೆ ಸೇರಿ ದೊಡ್ಡತೋಗೂರಿನಲ್ಲಿ ಪತಿ ಉಪೇಂದ್ರನನ್ನು ಹತ್ಯೆಗೈದ ಪತ್ನಿ ಅನಿತಾ.
  • ಹೃದಯಾಘಾತದಿಂದ ಸಾವು ಎಂದು ನಂಬಿಸಿ ಕುಟುಂಬಸ್ಥರ ಮುಂದೆ ಕಣ್ಣೀರಿಟ್ಟಿದ್ದ ಆರೋಪಿ.
  • ಮರಣೋತ್ತರ ಪರೀಕ್ಷೆ ವರದಿಯಿಂದ ಕೊಲೆ ರಹಸ್ಯ ಬಯಲು, ಅನಿತಾ ಮಧುಸೂಧನ್ ಬಂಧನ.

ಬೆಂಗಳೂರು, ನವೆಂಬರ್ 09: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿಯ ಕೃತ್ಯ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪತಿಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ನಂಬಿಸಿ ನಾಟಕವಾಡಿದ್ದ ಪತ್ನಿಯ ಅಸಲಿ ಮುಖವಾಡ ಬಯಲಾಗಿದೆ. ಪ್ರಕರಣ ಸಂಬಂಧ ಪತ್ನಿ ಅನಿತಾ ಮತ್ತು ಆಕೆಯ ಪ್ರಿಯಕರ ಮಧುಸೂಧನ್‌ನನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ.

ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ!

ಅಕ್ಟೋಬರ್ 12ರಂದು ದೊಡ್ಡತೋಗೂರಿನ ಮನೆಯಲ್ಲಿ ಉಪೇಂದ್ರ (40) ಎಂಬ ವ್ಯಕ್ತಿ ಮಧ್ಯರಾತ್ರಿ ಮೃತಪಟ್ಟಿದ್ದರು. ಪತಿ ಸಾವಿನ ವಿಚಾರವನ್ನು ಕುಟುಂಬಸ್ಥರಿಗೆ ತಿಳಿಸಿದ್ದ ಪತ್ನಿ ಅನಿತಾ, ಜಾರಿ ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕಥೆ ಕಟ್ಟಿದ್ದಳು. ಪತಿಯ ಮೃತದೇಹದ ಮುಂದೆ ಕಣ್ಣೀರಿಟ್ಟು ನಾಟಕವಾಡಿದ್ದಳು. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ಇತ್ತೀಚೆಗೆ ಬಂದ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಉಪೇಂದ್ರ ಉಸಿರುಗಟ್ಟಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಇದರಿಂದ ಅನುಮಾನಗೊಂಡ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಘಟನೆಯ ರಾತ್ರಿ ಉಪೇಂದ್ರ ಮನೆಗೆ ಅಪರಿಚಿತ ವ್ಯಕ್ತಿಯೊಬ್ಬ ಬಂದಿದ್ದ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಸುಳಿವಿನ ಆಧಾರದಲ್ಲಿ ಮಧುಸೂಧನ್‌ನನ್ನು ವಶಕ್ಕೆ ಪಡೆದು ಅನಿತಾಳೊಂದಿಗೆ ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ.

ಮಧ್ಯರಾತ್ರಿ ಪ್ರಿಯಕರನನ್ನು ಕರೆಸಿ ಪತಿ ಹತ್ಯೆ!

ಅನಿತಾ ಮತ್ತು ಮಧುಸೂಧನ್ ಹಲವು ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ವಿಚಾರ ತಿಳಿದಿದ್ದ ಉಪೇಂದ್ರ, ಪತ್ನಿಯೊಂದಿಗೆ ಆಗಾಗ ಜಗಳವಾಡುತ್ತಿದ್ದ. ಅಕ್ಟೋಬರ್ 11ರ ರಾತ್ರಿ ಕೂಡ ದಂಪತಿ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಅನಿತಾ ತನ್ನ ಪ್ರಿಯಕರ ಮಧುಸೂಧನ್‌ಗೆ ಕರೆ ಮಾಡಿ, ಪತಿ ಗಲಾಟೆ ಮಾಡುತ್ತಿದ್ದಾನೆ, ಆತನನ್ನು ಕೊಲೆ ಮಾಡಲು ಮನೆಗೆ ಬರುವಂತೆ ತಿಳಿಸಿದ್ದಳು ಎನ್ನಲಾಗಿದೆ.

ಅನಿತಾಳ ಕರೆ ಮೇರೆಗೆ ಮನೆಗೆ ಬಂದ ಮಧುಸೂಧನ್, ಬೆಡ್‌ರೂಮ್‌ನಲ್ಲಿ ಮಲಗಿದ್ದ ಉಪೇಂದ್ರನ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಅನಿತಾ ಕೂಡ ಆತನಿಗೆ ಸಹಕರಿಸಿ ಪತಿಯ ಬಾಯಿ ಮತ್ತು ಮೂಗನ್ನು ಮುಚ್ಚಿದ್ದಳು. ಬಳಿಕ ಮಧುಸೂಧನ್ ಉಪೇಂದ್ರನ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.

ಹತ್ಯೆ ಬಳಿಕ ಮಧುಸೂಧನ್‌ನನ್ನು ಅಲ್ಲಿಂದ ಕಳುಹಿಸಿದ್ದ ಅನಿತಾ, ಕುಟುಂಬಸ್ಥರ ಮುಂದೆ ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ನಾಟಕವಾಡಿದ್ದಳು. ಆದರೆ ಮರಣೋತ್ತರ ಪರೀಕ್ಷೆ ವರದಿ ಮತ್ತು ಪೊಲೀಸರ ತನಿಖೆಯಿಂದ ದಂಪತಿಯ ಸಾವಿನ ಹಿಂದಿನ ಸಂಚು ಬಯಲಾಗಿದೆ. ಸದ್ಯ ಅನಿತಾ ಮತ್ತು ಮಧುಸೂಧನ್‌ನನ್ನು ಬಂಧಿಸಿರುವ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ದಿನವೇ ರಂಪಾಟ ಸೃಷ್ಟಿಸಿದ ಮಂಜು
ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ದಿನವೇ ರಂಪಾಟ ಸೃಷ್ಟಿಸಿದ ಮಂಜು
ದೀಪಾವಳಿ ಪಟಾಕಿ ದುರಂತ: ಮೊದಲ ದಿನವೇ ಮಕ್ಕಳೂ ಸೇರಿ 32 ಮಂದಿಗೆ ಗಾಯ
ದೀಪಾವಳಿ ಪಟಾಕಿ ದುರಂತ: ಮೊದಲ ದಿನವೇ ಮಕ್ಕಳೂ ಸೇರಿ 32 ಮಂದಿಗೆ ಗಾಯ
ಇಂದು ಈ ರಾಶಿಯವರು ಹಿತಶತ್ರುಗಳ ಬಗ್ಗೆ ಜಾಗೃತೆವಹಿಸಿ
ಇಂದು ಈ ರಾಶಿಯವರು ಹಿತಶತ್ರುಗಳ ಬಗ್ಗೆ ಜಾಗೃತೆವಹಿಸಿ
ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ
ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್
ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​
ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​