AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರಿವಾಳ ವಿಚಾರಕ್ಕೆ ಯುವಕರ ಜಗಳ: ಸ್ನೇಹಿತ ಕರೆದಿದ್ದಾನೆಂದು ಹೊಡೆದಾಟ ನಡೆಯುತ್ತಿದ್ದಲ್ಲಿಗೆ ಹೋದವನೇ ಕೊಲೆಯಾದ!

ಬೆಂಗಳೂರಿನ ರಾಜಗೋಪಾಲನಗರದಲ್ಲಿ ಪಾರಿವಾಳ ಕಳ್ಳತನದ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಆಟೋ ಚಾಲಕ ಮಲ್ಲಿಕಾರ್ಜುನ್ ಎಂಬವರ ಕೊಲೆಯಾಗಿದೆ. ಜಗಳ ಬಿಡಿಸಲು ಹೋದ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಯ ಬಗ್ಗೆ ಪೊಲೀಸರು ಹೇಳಿದ್ದೇನು? ವಿವರ ಇಲ್ಲಿದೆ.

ಪಾರಿವಾಳ ವಿಚಾರಕ್ಕೆ ಯುವಕರ ಜಗಳ: ಸ್ನೇಹಿತ ಕರೆದಿದ್ದಾನೆಂದು ಹೊಡೆದಾಟ ನಡೆಯುತ್ತಿದ್ದಲ್ಲಿಗೆ ಹೋದವನೇ ಕೊಲೆಯಾದ!
ಮೃತ ಮಲ್ಲಿಕಾರ್ಜುನ ಹಾಗೂ ರಾಜಗೋಪಾಲನಗರ ಪೊಲೀಸ್ ಠಾಣೆ ಚಿತ್ರImage Credit source: tv9
ಪ್ರದೀಪ್​ ಚಿಕ್ಕಾಟಿ
| Edited By: |

Updated on: Apr 24, 2026 | 8:06 AM

Share

ಬೆಂಗಳೂರು, ಏಪ್ರಿಲ್ 24: ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪಿನ ನಡುವೆ ನಡೆದ ಜಗಳವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ (Bengaluru) ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಾರಿವಾಳ ಕಳ್ಳತನದ ವಿಚಾರವಾಗಿ ಉಂಟಾದ ಕಿರಿಕ್‌ನಲ್ಲಿ ಆಟೋ ಚಾಲಕ ಮಲ್ಲಿಕಾರ್ಜುನ್ (24) ಎಂಬಾತ ಕೊಲೆಯಾಗಿದ್ದಾರೆ.

ಪಾರಿವಾಳ ಕಳ್ಳತನ, ಜಗಳ ಘಟನೆಯ ವಿವರ

ಲಗ್ಗೆರೆಯ ನಿವಾಸಿಗಳಾದ ಶಂಕರ್ ರಾವ್ ಮತ್ತು ಅನ್ನಪೂರ್ಣ ದಂಪತಿಯ ಪುತ್ರ ಮಲ್ಲಿಕಾರ್ಜುನ್ ಕಳೆದ ಸೋಮವಾರ ರಾತ್ರಿ ಕೊಲೆಯಾದ ದುರ್ದೈವಿ. ಸೋಮವಾರ ಸಂಜೆ ಮಲ್ಲಿಕಾರ್ಜುನ್ ಸ್ನೇಹಿತ ಪ್ರಶಾಂತ್ ಎಂಬಾತ ಸಾಕಿದ್ದ ಪಾರಿವಾಳವನ್ನು ಅದೇ ಏರಿಯಾದ ಸುರೇಂದ್ರ, ದರ್ಶನ್ ಹಾಗೂ ಮಹೇಂದ್ರ ಎಂಬುವವರ ಗುಂಪು ಕಳ್ಳತನ ಮಾಡಿತ್ತು ಎನ್ನಲಾಗಿದೆ. ಈ ವಿಚಾರವಾಗಿ ಎರಡೂ ಗುಂಪುಗಳ ನಡುವೆ ಜಗಳ ಆರಂಭವಾಗಿತ್ತು.

ಈ ವೇಳೆ ಸ್ನೇಹಿತ ಪ್ರಶಾಂತ್ ಕರೆ ಮಾಡಿದ್ದಾನೆಂದು ಗಲಾಟೆ ನಡೆಯುತ್ತಿದ್ದ ಸ್ಥಳಕ್ಕೆ ಮಲ್ಲಿಕಾರ್ಜುನ್ ಧಾವಿಸಿದ್ದರು. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಆಕ್ರೋಶಗೊಂಡ ಆರೋಪಿಗಳ ಗುಂಪು ಮಲ್ಲಿಕಾರ್ಜುನ್ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಬೆನ್ನು ಮತ್ತು ದೇಹದ ಹಲವು ಭಾಗಗಳಿಗೆ ಚಾಕುವಿನಿಂದ ಇರಿದ ಪರಿಣಾಮ ಮಲ್ಲಿಕಾರ್ಜುನ್ ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದಿದ್ದರು.

ಆಸ್ಪತ್ರೆಯಲ್ಲಿ ಸಾವು

ತೀವ್ರವಾಗಿ ಗಾಯಗೊಂಡಿದ್ದ ಮಲ್ಲಿಕಾರ್ಜುನ್‌ರನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಮಾರು ಆರು ಬಾಟಲ್ ರಕ್ತ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕೇವಲ ಒಂದು ವಾರದ ಹಿಂದಷ್ಟೇ ಪೋಷಕರು ಮಗನಿಗೆ ಹೊಸ ಆಟೋ ಕೊಡಿಸಿದ್ದರು. ಈಗ ಮಗನ ಶವದ ಮುಂದೆ ಪೋಷಕರು ಕಣ್ಣೀರು ಹಾಕುತ್ತಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ ಎಂದು ಆಗ್ರಹಿಸಿದ್ದಾರೆ.

ಐವರು ಆರೋಪಿಗಳ ಬಂಧನ

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ರಾಜಗೋಪಾಲನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸುರೇಂದ್ರ, ದರ್ಶನ್ ಮತ್ತು ಮಹೇಂದ್ರ ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಉದ್ಯಮಿ ಜತೆ ಡೇಟಿಂಗ್, ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಆರೋಪ: ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ವಿರುದ್ಧ ದೂರು

‘ಪಾರಿವಾಳದ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ, ಸದ್ಯ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದೇವೆ’ ಎಂದು ವಾಯುವ್ಯ ವಿಭಾಗದ ಡಿಸಿಪಿ ಡಿ.ಎಲ್. ನಾಗೇಶ್ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Pradeep Chikkati
Pradeep Chikkati

ಕ್ರೈಂ ವರದಿಗಾರನಾಗಿ ಟಿವಿ9 ಕನ್ನಡದಲ್ಲಿ ಕೆಲಸ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ