AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಗಲಾಟೆ, ಬೆಂಗಳೂರಲ್ಲಿ ಬೆದರಿಕೆ: ಪಾರ್ಕ್​​ನಲ್ಲೇ ವ್ಯಕ್ತಿ ಆತ್ಮಹತ್ಯೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​

ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ರಾಜಸ್ಥಾನದಲ್ಲಿ ಶುರುವಾದ ಜಗಳ, ಬೆಂಗಳೂರಿಗೂ ತಲುಪಿ ಕೊಲೆ ಬೆದರಿಕೆ ಹಾಗೂ ಹಲ್ಲೆ ಆರೋಪ ಕೇಳಿಬಂದಿತ್ತು. ಇದೇ ವಿಚಾರವಾಗಿ ಮನನೊಂದು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದು, ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ರಾಜಸ್ಥಾನದಲ್ಲಿ ಗಲಾಟೆ, ಬೆಂಗಳೂರಲ್ಲಿ ಬೆದರಿಕೆ: ಪಾರ್ಕ್​​ನಲ್ಲೇ ವ್ಯಕ್ತಿ ಆತ್ಮಹತ್ಯೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​
ಮೃತ ವ್ಯಕ್ತಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Apr 27, 2026 | 3:45 PM

Share

ಬೆಂಗಳೂರು, ಏಪ್ರಿಲ್​​ 27: ನಗರದ ಕಬ್ಬನ್ ಪಾರ್ಕ್​​ನಲ್ಲಿ ಕಳೆದ 20 ದಿನಗಳ ಹಿಂದೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಸ್ತಿದ್ದ ಕಬ್ಬನ್ ಪಾರ್ಕ್ ಪೊಲೀಸರು ಕೊನೆಗೂ ಸಾವಿನ ಹಿಂದಿನ ಸತ್ಯವನ್ನು ಬಯಲಿಗೆಳೆದಿದ್ದಾರೆ. ಮೃತ ವ್ಯಕ್ತಿಯನ್ನು ರಾಜಸ್ಥಾನದ ಸುರೇಶ್ ಕುಮಾರ್ ಪುರೋಹಿತ್ ಎಂದು ಗುರುತಿಸಲಾಗಿದ್ದು, ಈತನದ್ದು ಮಾಮೂಲಿ ಆತ್ಮಹತ್ಯೆ ಅಲ್ಲ. ಬದಲಾಗಿ ಹೊಡೆದು, ಬಡಿದಿದ್ದಲ್ಲದೆ ಕೊಲೆ ಬೆದರಿಕೆ ಹಾಕಿದ್ದ ಕಾರಣ ಮನನೊಂದು ಸುರೇಶ್ ಕುಮಾರ್ ಇಂತಹ ದುಡುಕಿನ ನಿರ್ಧಾರ ತೆಗೆದುಕೊಂಡಿರೋದು ತನಿಖೆ ವೇಳೆ ಗೊತ್ತಾಗಿದೆ.

ಮೃತ ಸುರೇಶ್ ಕುಮಾರ್ ಕುಟುಂಬ ಮೂಲತಃ ರಾಜಸ್ಥಾನದವರಾಗಿದ್ದು, ಅಲ್ಲಿ ಜಬರರಾಮ್ ಎಂಬಾತನ ಜೊತೆಗೆ ಈತ ಜಗಳ ಮಾಡಿಕೊಂಡಿದ್ದ. ಜಗಳ ವಿಕೋಪಕ್ಕೆ ಹೋಗಿ ಜಬರರಾಮ್ ಮತ್ತು ಸುರೇಶ್ ಪರಸ್ಪರ ಹಲ್ಲೆ ಕೂಡ ನಡೆಸಿದ್ದರು. ಬಳಿಕ ಬೆಂಗಳೂರಿನ ಸ್ನೇಹಿತರಿಂದ ಪಾಠ ಕಲಿಸೋದಾಗಿ ಜಬರರಾಮ್ ಸುರೇಶ್​​ಗೆ ಬೆದರಿಕೆ ಕೂಡ ಹಾಕಿದ್ದ. ಅದಾದ ಬಳಿಕ ತನ್ನ ಊರಿನಿಂದ ಸುರೇಶ್ ಕುಮಾರ್ ಬೆಂಗಳೂರಿಗೆ ಬಂದಿದ್ದರೆ, ಮಾರ್ಚ್ ಕೊನೆಯ ವಾರದಲ್ಲಿ ಜಬರರಾಮ್ ಕೂಡ ನಗರಕ್ಕೆ ಆಗಮಿಸಿದ್ದ. ಈತ ಸ್ನೇಹಿತರ ಬಳಿ ಸುರೇಶ್ ಕುಮಾರ್​​ ಮೇಲೆ ಹಲ್ಲೆ ನಡೆಸುವಂತೆ ತಿಳಿಸಿದ್ದ. ಪ್ರವೀಣ್, ಭಾವೇಶ್, ನಿತೇಶ್ ಮತ್ತು ಮುಖೇಶ್ ಎಂಬುವವರಿಗೆ ಈ ಬಗ್ಗೆ ಸೂಚಿಸಿದ್ದ. ಆ ಬಗ್ಗೆ ಮಾಹಿತಿ ತಿಳಿದ ಸುರೇಶ್​​ ಕುಮಾರ್​​ ವಿಚಾರವನ್ನ ಸಹೋದರನಿಗೆ ಕರೆಮಾಡಿ  ಹೇಳಿದ್ದ. ಹೋಟೆಲ್​​ನಲ್ಲಿ ಊಟ ಮುಗಿಸಿ  ಸುರೇಶ್ ಹೊರಟಿದ್ದ ವೇಳೆ ಆರೋಪಿಗಳು ಹಲ್ಲೆ ಮಾಡಿರೋದಾಗಿ ದೂರು ಕೂಡ ದಾಖಲಾಗಿತ್ತು.

ಇದನ್ನೂ ಓದಿ: ಎಂಗೇಜ್ಮೆಂಟ್ ಆದ ರಾತ್ರಿಯೇ ಯುವತಿ ಪ್ರಿಯತಮನೊಂದಿಗೆ ಪರಾರಿ! ಲವ್ ಜಿಹಾದ್ ಶಂಕೆ

ಇನ್ನು ಇದೇ ವಿಚಾರವಾಗಿ ಮನನೊಂದು ಸುರೇಶ್ ಕುಮಾರ್ ಪುರೋಹಿತ್ ಆತ್ಮಹತ್ಯೆಗೆ ಶರಣಾಗಿರೋದಾಗಿ ಆತನ ಸಹೋದರ ವಾಸನರಾಮ್ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಸುರೇಶ್ ಕುಮಾರ್ ಆತ್ಮಹತ್ಯೆ ಸಂಬಂಧ ಐದು ಜನರ ವಿರುದ್ಧ FIR ದಾಖಲಿಸಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ಶುರುವಾದ ಗಲಾಟೆ ಓರ್ವನ ಸಾವಿನಲ್ಲಿ ಅಂತ್ಯವಾಗಿದ್ದು, ಕಬ್ಬನ್ ಪಾರ್ಕ್​​ನಲ್ಲಿ ಆತ್ಮಹತ್ಯೆಗೆ ವ್ಯಕ್ತಿ ಶರಣಾಗಿದ್ದೇಕೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು