Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗೃಹ ಸಾಲ ಕ್ಲಿಯರ್ ಮಾಡಲು ಹೋಗಿ 47 ಲಕ್ಷ ಕಳೆದುಕೊಂಡ ವ್ಯಕ್ತಿ

ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಂಚನೆ ಪ್ರಕರಣಗಳು, ಸೈಬರ್ ಪ್ರಕರಣಗಳು ಹೆಚ್ಚುತ್ತಲೇ ಇದೆ. ಪೊಲೀಸ್ ಇಲಾಖೆ ಎಷ್ಟೇ ಕ್ರಮ ವಹಿಸಿದರೂ ವಂಚನೆ ಪ್ರಕರಣಗಳಿಗೆ ಬ್ರೇಕ್ ಬೀಳುತ್ತಿಲ್ಲ. ಇದೀಗ, ಗೃಹ ಸಾಲ ಕ್ಲಿಯರ್ ಮಾಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 47 ಲಕ್ಷ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲದೆ, 7 ತಿಂಗಳ ಹಿಂದೆ ಸೈಬರ್ ವಂಚಕರು ದೋಚಿದ ಹಣವೂ ಸಿಕ್ಕಿಲ್ಲ, ಆರೋಪಿಗಳೂ ಸಿಕ್ಕಿಲ್ಲ ಎಂದು ಆಕ್ರೋಶ ಹೊರಹಾಕಿರುವ ವಿದ್ಯಾರ್ಥಿ, ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಟ್ಯಾಗ್ ಮಾಡಿದ್ದಾನೆ.

ಬೆಂಗಳೂರು: ಗೃಹ ಸಾಲ ಕ್ಲಿಯರ್ ಮಾಡಲು ಹೋಗಿ 47 ಲಕ್ಷ ಕಳೆದುಕೊಂಡ ವ್ಯಕ್ತಿ
ಗೃಹ ಸಾಲ ಕ್ಲಿಯರ್ ಮಾಡಲು ಹೋಗಿ 47 ಲಕ್ಷ ಕಳೆದುಕೊಂಡ ವ್ಯಕ್ತಿ (ಸಾಂದರ್ಭಿಕ ಚಿತ್ರ)
Follow us
Shivaprasad
| Updated By: Rakesh Nayak Manchi

Updated on: Mar 21, 2024 | 9:28 AM

ಬೆಂಗಳೂರು, ಮಾ.21: ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ವಂಚನೆ ಪ್ರಕರಣಗಳು, ಸೈಬರ್ ಪ್ರಕರಣಗಳು ಹೆಚ್ಚುತ್ತಲೇ ಇದೆ. ಪೊಲೀಸ್ ಇಲಾಖೆ ಎಷ್ಟೇ ಕ್ರಮ ವಹಿಸಿದರೂ ವಂಚನೆ (Cheating) ಪ್ರಕರಣಗಳಿಗೆ ಬ್ರೇಕ್ ಬೀಳುತ್ತಿಲ್ಲ. ಇದೀಗ, ಗೃಹ ಸಾಲ ಕ್ಲಿಯರ್ ಮಾಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 47 ಲಕ್ಷ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ನಿರ್ವಿಕ್ ರಾಧೇಶ್ಯಾಮ್ ಮತ್ತು ಗೌರವ್ ಅರೋರ ಎಂಬವರು 47 ಲಕ್ಷ ರೂಪಾಯಿ ವಂಚಿಸಿದ್ದಾಗಿ ಆರೋಪಿಸಿ ಸಂಜಯ್ ಎಂಬುವರು ಕೇಂದ್ರ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, FIR ದಾಖಲಿಸಿದ ಪೊಲೀಸರು ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಬ್ಯಾಂಕ್​ ಮೂಲಕ ಸಂಜಯ್ ಗೃಹ ಸಾಲ ತೆಗೆದುಕೊಂಡಿದ್ದರು. ಈ ವಿಚಾರ ತಿಳಿದ ಮ್ಯೂಚುಯಲ್ ಫ್ರೆಂಡ್ ನಿರ್ವಿಕ್ ರಾಧೆ ಶ್ಯಾಮ್, ತನಗೆ ಬ್ಯಾಂಕ್​ನ ಹಿರಿಯ ಅಧಿಕಾರಿಗಳು ಪರಿಚಯ ಇದ್ದಾರೆ. ಬ್ಯಾಂಕ್ ಲೋನ್ ಸೆಟಲ್​ಮೆಂಟ್ ಮಾಡಿಸುವುದಾಗಿ ನಂಬಿಸಿ ಗೌರವ್ ಅರೋರ ಎಂಬಾತನನ್ನ ಬ್ಯಾಕ್​ನ ಲೀಗಲ್ ಲಾಯರ್ ಎಂದು ಪರಿಚಯಿಸಿದ್ದನು.

ಇದನ್ನೂ ಓದಿ: ಬಾಳು ಕೊಡುವುದಾಗಿ ನಂಬಿಸಿ ಮಹಿಳೆಯಿಂದ 10 ಲಕ್ಷ ರೂ ವಂಚನೆ ಆರೋಪ: ಕುಟುಂಬಸ್ಥರಿಂದ ಧರಣಿ

ಲೀಗಲ್ ಫೀಸ್ ಅಂತ ಸಂಜಯ್ ಅವರಿಂದ 3.50 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಬಳಿಕ ಮುಂಬೈಗೆ ಕರೆಸಿಕೊಂಡು ಸೆಟಲ್ ಮೆಂಟ್ ಬಗ್ಗೆ ಮಾತುಕತೆ ನಡೆಸಿದ್ದಾರೆ. ಸಂಜಯ್ ಬ್ಯಾಂಕ್​ಗೆ ಮರುಪಾವತಿಸಬೇಕಾದ ಹಣವನ್ನು ಗೌರವ್ ಅಕೌಂಟ್​ಗೆ ಪಾವತಿಸಲು ನಿರ್ವಿಕ್ ಹೇಳಿದ್ದ. ಅದರಂತೆ 47.50 ಲಕ್ಷ ರೂ. ಅನ್ನು ಗೌರವ್ ಅರೋರ ಖಾತೆಗೆ ಪಾವತಿಸಿದ್ದಾರೆ.

ಬಳಿಕ ನಿರ್ವಿಕ್ ಮತ್ತು ಗೌರವ್ ಸಂಪರ್ಕಕ್ಕೆ ಸಿಗದೆ ತಲೆಮರೆಸಿಕೊಂಡಿದ್ದಾರೆ. ಬಳಿಕ ತಾನು ವಂಚನೆಗೆ ಸಿಲುಕಿರುವುದು ಖಚಿತವಾಗುತ್ತಿದ್ದಂತೆ ಸಂಜಯ್, ಕೇಂದ್ರ ಸೈಬರ್ ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ನೀಡಿದ್ದಾರೆ. ನಿರ್ವಿಕ್ ಮತ್ತು ಗೌರವ್ ಎಂಬವರು ಸುಳ್ಳು ಹೇಳಿ ವಂಚಿಸಿರುವುದಾಗಿ ಸಂಜಯ್ ದೂರಿನಲ್ಲಿ ಆರೋಪಿಸಿದ್ದಾರೆ.

ಹಣವೂ ಇಲ್ಲ, ಆರೋಪಿಗಳ ಪತ್ತೆಯೂ ಇಲ್ಲ; ಟ್ವೀಟ್ ಮಾಡಿದ ವಿದ್ಯಾರ್ಥಿ

ನಗರದಲ್ಲಿ ದಿನೇ ದಿನೇ ಸೈಬರ್ ಕ್ರೈಂ ಹೆಚ್ಚಾಗುತ್ತಿದೆ. ದೂರು ನೀಡಿದರೂ ಪ್ರಯೋಜನವಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಅನಾಶ್ ಮೆಹಮೂದ್ ಎಂಬ ವಿದ್ಯಾರ್ಥಿ 7 ತಿಂಗಳ ಹಿಂದೆ ಸೈಬರ್ ವಂಚಕರ ಜಾಲಕ್ಕೆ ಸಿಲುಕಿ 20 ಸಾವಿರ ಹಣ ಕಳೆದುಕೊಂಡಿದ್ದ. ತಕ್ಷಣವೇ ಕೆ.ಆರ್ ಪುರಂ ಠಾಣಾ ಪೊಲೀಸರಿಗೆ ಕರೆ ಮಾಡಿ ಅಕೌಂಟ್ ಸಹ ಫ್ರೀಜ್ ಮಾಡಿಸಿದ್ದ.

ಇದನ್ನೂ ಓದಿ: 10 ಕೋಟಿ ರೂ ವಜ್ರವನ್ನು 3 ಕೋಟಿಗೆ ಕೊಡುವುದಾಗಿ ಹೇಳಿ ವಂಚನೆ: ನಾಲ್ವರ ಬಂಧನ

ಆದರೆ, ಪ್ರಕರಣ ನಡೆದು 7 ತಿಂಗಳು ಆದರೂ ಇತ್ತ ಫ್ರೀಜ್ ಮಾಡಿದ್ದ ಹಣವೂ ಬಂದಿಲ್ಲ, ಆರೋಪಿಗಳು ಪತ್ತೆಯಾಗುತ್ತಿಲ್ಲ. ದೂರು ನೀಡಿದರೂ ಯಾವುದೇ ಪ್ರಯೋಜನೆ ಇಲ್ಲ ಎಂದು ಆಕ್ರೋಶಗೊಂಡ ವಿದ್ಯಾರ್ಥಿ ಅನಾಶ್, ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ನಗರ ಪೊಲೀಸ್ ಆಯುಕ್ತಿಗೆ ಟ್ಯಾಗ್ ಮಾಡಿದ್ದಾನೆ.

ದೂರುದಾರರ ಟ್ವೀಟ್​ ಗಮನಿಸಿದ ಪೊಲೀಸ್ ಆಯುಕ್ತರು, ಪ್ರಕರಣದ ಪ್ರಗತಿ ಕುರಿತು ಮಾಹಿತಿ ಕೇಳಿದ್ದಾರೆ. ತನಿಖೆಯ ಯಾವ ಹಂತದಲ್ಲಿ ಇದೆ, ಪ್ರೀಜ್ ಆದ ಹಣ ವಾಪಸ್ ಯಾಕೆ ದೂರುದಾರರಿಗೆ ಹೋಗಿಲ್ಲ ಅಂತ ಮಾಹಿತಿ ಪಡೆಯಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ