AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತರಿಗೆ ಪ್ರಾಣವನ್ನಾದರೂ ಕೊಡಿ, ಬ್ಯಾಂಕ್ ಡೀಟೇಲ್ಸ್ ಕೊಡ್ಬೇಡಿ! ಯಾಕೆ ಗೊತ್ತಾ?

ಬೆಂಗಳೂರಿನಲ್ಲಿ ಆಘಾತಕಾರಿ ಸೈಬರ್ ವಂಚನೆ ನಡೆದಿದೆ. ಸ್ನೇಹಿತನನ್ನು ನಂಬಿದ ವಿದ್ಯಾರ್ಥಿಯೊಬ್ಬ ತನ್ನ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಂಡಿದ್ದ. ಸ್ನೇಹಿತ ಆಯುಷ್ ಈ ಖಾತೆಯನ್ನು ದುರ್ಬಳಕೆ ಮಾಡಿಕೊಂಡು 7 ಕೋಟಿ ರೂಪಾಯಿ ವಹಿವಾಟು ನಡೆಸಿದ್ದಾನೆ. ಬ್ಯಾಂಕ್ ಮಾಹಿತಿ ನೀಡಿದ ನಂತರ ವಂಚನೆ ಬೆಳಕಿಗೆ ಬಂದಿದ್ದು, ವಿದ್ಯಾರ್ಥಿಯ ಖಾತೆಯನ್ನು ಬ್ಲಾಕ್ ಮಾಡಲಾಗಿದೆ. ಘಟನೆ ಕುರಿತು ಬೆಂಗಳೂರು ಉತ್ತರ ವಿಭಾಗ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಸ್ನೇಹಿತರಿಗೆ ಪ್ರಾಣವನ್ನಾದರೂ ಕೊಡಿ, ಬ್ಯಾಂಕ್ ಡೀಟೇಲ್ಸ್ ಕೊಡ್ಬೇಡಿ! ಯಾಕೆ ಗೊತ್ತಾ?
ಸ್ನೇಹಿತರಿಗೆ ಪ್ರಾಣವನ್ನಾದರೂ ಕೊಡಿ, ಬ್ಯಾಂಕ್ ಡೀಟೇಲ್ಸ್ ಕೊಡ್ಬೇಡಿ! ಯಾಕೆ ಗೊತ್ತಾ?
ಪ್ರದೀಪ್​ ಚಿಕ್ಕಾಟಿ
| Edited By: |

Updated on: Feb 23, 2026 | 11:20 AM

Share

ಬೆಂಗಳೂರು, ಫೆಬ್ರವರಿ 23: ಸ್ನೇಹಿತರ ಬಳಿ ನಾವು ಜೀವನದ ಹಲವು ಗೌಪ್ಯ ಸಂಗತಿಗಳನ್ನು ಹಂಚಿಕೊಳ್ಳುತ್ತೇವೆ. ಅವರು ನಮ್ಮ ನಂಬಿಕೆಯನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ ಎಂದು ನಂಬುತ್ತೇವೆ. ಹೀಗೆಯೇ ತನ್ನ ಸ್ನೇಹಿತನನ್ನು ನಂಬಿದ್ದ ವಿದ್ಯಾರ್ಥಿಯೊಬ್ಬ ಸೈಬರ್ ವಂಚನೆಯ (Cyber Crime) ಖೆಡ್ಡಾದಲ್ಲಿ ಸಿಕ್ಕಿಹಾಕಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಂದು ವರ್ಷದ ಗೆಳೆತನ ನಂಬಿದ ವಿದ್ಯಾರ್ಥಿ ತನ್ನ ಬ್ಯಾಂಕ್ ಖಾತೆಯ ವಿವರವನ್ನು ತನ್ನ ಸ್ನೇಹಿತನೊಂದಿಗೆ ಹಂಚಿಕೊಂಡು ಪೇಚೆಗೆ ಸಿಲುಕಿದ್ದಾನೆ.

ತನ್ನ ಖಾತೆ ಬ್ಲಾಕ್ ಆಗಿದೆ ಎಂದು ವಿವರ ಪಡೆದಿದ್ದ ಆಯುಷ್

ಒಂದು ವರ್ಷದ ಹಿಂದೆ ವಿದ್ಯಾರ್ಥಿಗೆ ಪರಿಚಯವಾಗಿದ್ದ ಆಯುಷ್, ತನ್ನ ಅಕೌಂಟ್ ಬ್ಲಾಕ್ ಆಗಿದೆ ಎಂದು ವಿದ್ಯಾರ್ಥಿ ಬಳಿ ಆತನ ಬ್ಯಾಂಕ್ ವಿವರಗಳನ್ನು ಕೇಳಿದ್ದ. ಆತನನ್ನು ನಂಬಿದ್ದ ವಿದ್ಯಾರ್ಥಿ ತನ್ನ ಬ್ಯಾಂಕ್ ಪಾಸ್ ಬುಕ್, ಎಟಿಎಂ ಕಾರ್ಡ್ ಹಾಗೂ ಮೊಬೈಲ್ ಸಿಮ್ ಎಲ್ಲವನ್ನೂ ಆಯುಷ್​ಗೆ ನೀಡಿದ್ದ. ಇದನ್ನೇ ಬಳಸಿಕೊಂಡ ಆಯುಷ್, ಅಕೌಂಟ್ ಮೂಲಕ ಸುಮಾರು 7 ಕೋಟಿ ರೂ. ಹಣ ವರ್ಗಾಯಿಸಿದ್ದು, ಇದೇ ವಿಚಾರದಿಂದ ಬ್ಯಾಂಕ್ ಇತ್ತೀಚೆಗೆ ವಿದ್ಯಾರ್ಥಿಯನ್ನು ಸಂಪರ್ಕಿಸಿದೆ.

ಇದನ್ನೂ ಓದಿ ಮಾರಕಾಸ್ತ್ರಗಳಿಂದ ಕೊಚ್ಚಿ, ಮರ್ಮಾಂಗ ಕತ್ತರಿಸಿ ವ್ಯಕ್ತಿಯ ಬರ್ಬರ ಹತ್ಯೆ!

ನಿಮ್ಮ ಅಕೌಂಟ್ ಮೂಲಕ ಸೈಬರ್ ವಂಚನೆ ನಡೆದಿದೆ ಎಂದು ವಿದ್ಯಾರ್ಥಿಗೆ ಬ್ಯಾಂಕ್ ಮಾಹಿತಿ ನೀಡಿದ್ದು, ನಂತರ ವಿದ್ಯಾರ್ಥಿಯ ಖಾತೆಯನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಲಾಗಿತ್ತು. ಈ ಘಟನೆ ಬಗ್ಗೆ ವಿದ್ಯಾರ್ಥಿ ತಕ್ಷಣ ಬೆಂಗಳೂರು ಉತ್ತರ ವಿಭಾಗ ಸೈಬರ್ ಪೊಲೀಸ್ ಠಾಣೆಗೆ ಹೋಗಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಈ ಪ್ರಕರಣದ ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ