AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬದ ಸಂದರ್ಭದಲ್ಲಿ ಆ್ಯಕ್ಟೀವ್ ಆದ ಸೈಬರ್​ ವಂಚಕರು: ಬ್ಯಾಂಕ್​​​ ಆಫರ್​​ ಹೆಸರಿನಲ್ಲಿ ವಂಚನೆ​​

ಸಾಲು ಸಾಲು ಹಬ್ಬಗಳು ಶುರುವಾಗುತ್ತಿರುವ ಸಂದರ್ಭದಲ್ಲಿ ಸೈಬರ್​ ವಂಚಕರು ಕೂಡ ಆ್ಯಕ್ಟೀವ್​ ಆಗಿದ್ದಾರೆ. ಬ್ಯಾಂಕ್ ಗ್ರಾಹಕರನ್ನು ಗುರಿಯಾಗಿಟ್ಟುಕೊಂಡು ವಂಚನೆಗೆ ಇಳಿದಿದ್ದಾರೆ. ವಂಚಕರು ನಕಲಿ ವೆಬ್‌ಸೈಟ್‌ಗಳು ಮತ್ತು ಎಸ್‌ಎಂಎಸ್ ಮೂಲಕ ಆಕರ್ಷಕ ಆಫರ್‌ಗಳನ್ನು ನೀಡಿ ವಂಚಿಸುತ್ತಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಬ್ಬದ ಸಂದರ್ಭದಲ್ಲಿ ಆ್ಯಕ್ಟೀವ್ ಆದ ಸೈಬರ್​ ವಂಚಕರು: ಬ್ಯಾಂಕ್​​​ ಆಫರ್​​ ಹೆಸರಿನಲ್ಲಿ ವಂಚನೆ​​
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Sep 22, 2025 | 11:20 AM

Share

ಬೆಂಗಳೂರು, ಸೆಪ್ಟೆಂಬರ್ 22: ಸೈಬರ್​​ ವಂಚನೆ (cyber fraud) ಕಡಿವಾಣಕ್ಕೆ ಸರ್ಕಾರ ಚಾಪೆ ಕಳಗೆ ನುಗ್ಗಿದರೆ, ವಂಚಕರು ರಂಗೋಲಿ ಕೆಳಗೆ ನುಸುಳುತ್ತಿದ್ದಾರೆ. ಬೇರೆ ಬೇರೆ ಮಾರ್ಗಗಳಲ್ಲಿ ಜನರನ್ನು ಯಾಮಾರಿಸುತ್ತಿದ್ದಾರೆ. ಇದೀಗ ಸಾಲು ಸಾಲು ಹಬ್ಬಗಳು (festive season) ಆರಂಭವಾಗುತ್ತಿದ್ದಂತೆ, ಬೆಂಗಳೂರಿನ ಬ್ಯಾಂಕ್ ಗ್ರಾಹಕರನ್ನು ಟಾರ್ಗೆಟ್ ಮಾಡಿರುವ ಖದೀಮರು ವಿವಿಧ ಆಫರ್​​ಗಳನ್ನು ನೀಡುವ ಮೂಲಕ ವಂಚನೆಗಿಳಿದಿದ್ದಾರೆ.

ಬ್ಯಾಂಕ್ ಗ್ರಾಹಕರನ್ನು ಟಾರ್ಗೆಟ್ ಮಾಡಿಕೊಂಡಿರುವ ಸೈಬರ್ ವಂಚಕರು,  ಪ್ರತಿಷ್ಠಿತ ಬ್ಯಾಂಕ್​​ಗಳಂತೆ ವೆಬ್‌ಸೈಟ್​ಗಳನ್ನು ಮಾಡಿಕೊಂಡು ಗ್ರಾಹಕರಿಗೆ ನಕಲಿ ರಿವಾರ್ಡ್​ಗಳು ಮತ್ತು ಕ್ಯಾಶ್‌ಬ್ಯಾಕ್ ಆಫರ್‌ಗಳ ಲಿಂಕ್​ಗಳನ್ನು ಕಳುಹಿಸುವ ಮೂಲಕ ವಂಚಿಸುತ್ತಿದ್ದಾರೆ ಎಂದು ದಿ ನ್ಯೂ ಇಂಡಿಯನ್​ ಎಕ್ಸ್​ಪ್ರೆಸ್​ ವರದಿ ಮಾಡಿದೆ.

ಇದನ್ನೂ ಓದಿ: ಹಿರಿಯ ಐಎಎಸ್ ಅಧಿಕಾರಿ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ; ಸೈಬರ್ ಪೊಲೀಸರ ಮೊರೆ ಹೋದ ಮಣಿವಣ್ಣನ್!

ಈ ಕುರಿತಾಗಿ ಓರ್ವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆ ಪ್ರಕಾರ ಸೈಬರ್​ ವಂಚಕರು ಫೋನ್ ಕರೆಗಳ ಮೂಲಕ, ಅಧಿಕೃತ ಬ್ಯಾಂಕಿಂಗ್ ಅಪ್ಲಿಕೇಶನ್‌ಗಳು, ವೆಬ್‌ಸೈಟ್​​, ಎಸ್​​ಎಂಎಸ್​ ಅಥವಾ ವಾಟ್ಸ್ ಆ್ಯಪ್​​ ಮೂಲಕ ಎಪಿಕೆ ಫೈಲ್‌ಗಳನ್ನು ಕಳುಹಿಸುವ ಮೂಲಕ ವಂಚಿಸುವುದಾಗಿ ಅವರು ಹೇಳಿದ್ದಾರೆ.

ಹೇಗೆ ವಂಚಿಸುತ್ತಾರೆ?

ವಂಚಕರು, ಬ್ಯಾಂಕ್​​ ಗ್ರಾಹಕರಿಗೆ ಬಳಸದ ಕಾರ್ಡ್ ರಿವಾರ್ಡ್ ಪಾಯಿಂಟ್‌ಗಳನ್ನು ರಿಡೀಮ್ ಮಾಡಿಕೊಳ್ಳಬಹುದು ಅಥವಾ ಹಬ್ಬದ ಕ್ಯಾಶ್‌ಬ್ಯಾಕ್ ಪಡೆಯಬಹುದು ಎಂದು ನಂಬಿಸುತ್ತಾರೆ. ಜನರನ್ನು ನಂಬಿಸಲು ವಂಚಕರು, ಪ್ರಮುಖ ಖಾಸಗಿ ಬ್ಯಾಂಕುಗಳು ಮತ್ತು ಇತರ ಪ್ರಮುಖ ಹಣಕಾಸು ಸಂಸ್ಥೆಗಳ ಹೆಸರುಗಳನ್ನು ಬಳಸಿಕೊಳ್ಳುತ್ತಾರೆ.

ವಂಚಕರ ಆಫರ್​​ಗಳಿಗೆ ಮಾರುಹೋಗಿ ಅವರು ಕಳುಹಿಸಿದ ಲಿಂಕ್​ ಅಥವಾ ಎಪಿಕೆ ಫೈಲ್‌ಗಳನ್ನು ಒಂದು ವೇಳೆ ಡೌನ್‌ಲೋಡ್​ ಮಾಡಿಕೊಂಡರೆ, ಗ್ರಾಹಕರು ಬಲಿಪಶುವಾದಂತೆ. ಬ್ಯಾಂಕ್ ಅಧಿಕಾರಿಗಳೆಂದು ಹೇಳಿಕೊಂಡು ಫೋನ್​ ಮಾಡುವ ವಂಚಕರು, ರಿವಾರ್ಡ್ ಪಾಯಿಂಟ್‌ಗಳನ್ನು ನೀಡುವ ನೆಪದಲ್ಲಿ ಕ್ರೆಡಿಟ್ ಕಾರ್ಡ್‌ ಮಾಹಿತಿ ಸೇರಿದಂತೆ ಒಟಿಪಿ ವಿವರಗಳನ್ನು ಪಡೆದುಕೊಳ್ಳುತ್ತಾರೆ. ಬಳಿಕ ಎಲ್ಲೋ ದೂರದಲ್ಲೇ ಕುಳಿತು ಕ್ಷಣ ಮಾತ್ರದಲ್ಲಿ ನೋಡನೋಡುತ್ತಿದ್ದಂತೆ ಖಾತೆಯಲ್ಲಿರುವ ಹಣವನ್ನು ಎಗರಿಸುತ್ತಾರೆ.

ಇದನ್ನೂ ಓದಿ: ಸೈಬರ್ ವಂಚನೆ ಕಡಿವಾಣಕ್ಕೆ ದಿಟ್ಟ ಹೆಜ್ಜೆಯಿಟ್ಟ ಸರ್ಕಾರ: ಸೈಬರ್ ಕಮಾಂಡ್ ಸೆಂಟರ್ ಆರಂಭ

ಸದ್ಯ ವಂಚಕರ ಈ ಹೊಸ ತಂತ್ರಕ್ಕೆ ಹಲವರು ಲಕ್ಷಾಂತರ ರೂ ಕಳೆದುಕೊಂಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ದಿ ನ್ಯೂ ಇಂಡಿಯನ್​ ಎಕ್ಸ್​ಪ್ರೆಸ್​ಗೆ ಹೇಳಿರುವುದಾಗಿ​ ವರದಿ ಮಾಡಿದೆ. ಒಟಿಪಿ, ಎಟಿಎಂ ಪಿನ್​​, ಸಿವಿವಿ ಸಂಖ್ಯೆ ಅಥವಾ ಬ್ಯಾಂಕ್​ ವಿವರಗಳನ್ನು ಹಂಚಿಕೊಳ್ಳದಂತೆ ಮತ್ತು ಯಾವುದೇ ಆನ್‌ಲೈನ್ ವಂಚನೆಯನ್ನು ಸೈಬರ್ ಸಹಾಯವಾಣಿ ಸಂಖ್ಯೆ 1930 ಗೆ ಸಂಪರ್ಕಿಸುವ ಮೂಲಕ ವರದಿ ಮಾಡುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:05 am, Mon, 22 September 25

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?