AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ದೃಶ್ಯ ಇಟ್ಟುಕೊಂಡು 78 ವರ್ಷದ ವ್ಯಕ್ತಿಗೆ ಮಹಿಳೆ ಬ್ಲ್ಯಾಕ್​​ಮೇಲ್​​: ದೂರು ದಾಖಲು

ಬೆಂಗಳೂರಿನಲ್ಲಿ 78 ವರ್ಷದ ವೃದ್ಧರೊಬ್ಬರಿಗೆ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಮಹಿಳೆಯೊಬ್ಬಳು, ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಆರಂಭದಲ್ಲಿ ಸ್ನೇಹ ಬೆಳೆಸಿ, ನಂತರ ಹಣಕ್ಕಾಗಿ ಒತ್ತಾಯಿಸಿದ್ದಾಳೆ. ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ಕುಟುಂಬಕ್ಕೆ ವೈಯಕ್ತಿಕ ಫೋಟೋಗಳನ್ನು ಕಳುಹಿಸುವುದಾಗಿ ಬೆದರಿಕೆ ಹಾಕಿರೋದಾಗಿಯೂ ಸಂತ್ರಸ್ತರ ಸೊಸೆ ದೂರು ನೀಡಿದ್ದು, ಸೈಬರ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಖಾಸಗಿ ದೃಶ್ಯ ಇಟ್ಟುಕೊಂಡು 78 ವರ್ಷದ ವ್ಯಕ್ತಿಗೆ ಮಹಿಳೆ ಬ್ಲ್ಯಾಕ್​​ಮೇಲ್​​: ದೂರು ದಾಖಲು
ಸಾಂದರ್ಭಿಕ ಚಿತ್ರImage Credit source: Google
ಪ್ರಸನ್ನ ಹೆಗಡೆ
|

Updated on: Mar 08, 2026 | 12:31 PM

Share

ಬೆಂಗಳೂರು, ಮಾರ್ಚ್​​ 08: 78 ವರ್ಷದ ವ್ಯಕ್ತಿಯೋರ್ವರನ್ನು ಸಾಮಾಜಿಕ ಜಾಲತಾಣದ ಮೂಲಕ ಪರಿಚಯಿಸಿಕೊಂಡ ಮಹಿಳೆಯೊಬ್ಬಳು ಅವರ ಜೊತೆ ಸ್ನೇಹ ಬೆಳೆಸಿ, ಈಗ ಬ್ಲ್ಯಾಕ್​​ಮೇಲ್​​ ಮಾಡುತ್ತಿರುವ ಆರೋಪ ಬೆಂಗಳೂರಲ್ಲಿ ಕೇಳಿಬಂದಿದೆ. ಸಂತ್ರಸ್ತ ವ್ಯಕ್ತಿಯ ಸೊಸೆ ಈ ಬಗ್ಗೆ ನೀಡಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಮಾರ್ಚ್​​ 3ರಂದೇ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿತ ಮಹಿಳೆ ಮೊದಲು ಫೇಸ್‌ಬುಕ್‌ನಲ್ಲಿ 78 ವರ್ಷದ ವ್ಯಕ್ತಿಯನ್ನು ಸಂಪರ್ಕಿಸಿದ್ದಾಳೆ. ಬಳಿಕ ತನ್ನ ವಾಟ್ಸ್ಆಪ್ ಸಂಖ್ಯೆಯನ್ನು ನೀಡಿ ಅಲ್ಲಿ ಸಂಭಾಷಣೆಯನ್ನು ಮುಂದುವರಿಸಿದ್ದಾಳೆ. ಮಾಹಿತಿ ಪ್ರಕಾರ, ಆರಂಭದಲ್ಲಿ ಸ್ನೇಹಪೂರ್ಣವಾಗಿ ನಡೆದ ಮಾತುಕತೆ ನಂತರ ಆತ್ಮೀಯ ವಿಡಿಯೋ ಕರೆಗಳಿಗೆ ತಿರುಗಿದೆ ಎಂದು ಹೇಳಲಾಗಿದೆ. ಬಳಿಕ ಆರೋಪಿತ ಮಹಿಳೆ ವ್ಯಕ್ತಿಯನ್ನು ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದು, ಮೊದಲಿಗೆ 2 ಲಕ್ಷ ರೂ. ಹಣವನ್ನು ಬೇಡಿಕೆ ಇಟ್ಟು, ನಂತರ ಹೆಚ್ಚಿನ ಹಣಕ್ಕೆ ಡಿಮ್ಯಾಂಡ್​​ ಮಾಡಿರೋದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಘಟನೆ ಕುಟುಂಬಕ್ಕೆ ತೀವ್ರ ಮಾನಸಿಕ ಒತ್ತಡ ಉಂಟುಮಾಡಿದ್ದು, ವಯಸ್ಸಿನ ಕಾರಣದಿಂದ ಮಾವ ಸ್ವತಃ ಪೊಲೀಸರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಗೃಹಿಣಿ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 90 ವರ್ಷದ ವೃದ್ಧೆ ಮೇಲೆ ನಾಲ್ವರು ಮುಸುಕುಧಾರಿಗಳಿಂದ ಸಾಮೂಹಿಕ ಅತ್ಯಾಚಾರ

ಈ ಸಂಬಂಧ ಸೈಬರ್ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 (C), ಸೆಕ್ಷನ್ 67 ಮತ್ತು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 318(4) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ಉಲ್ಲೇಖಿಸಿದ ಸಾಮಾಜಿಕ ಜಾಲತಾಣ ಖಾತೆಗಳು ಮತ್ತು ಫೋನ್ ಸಂಖ್ಯೆಗಳ ಪರಿಶೀಲನೆ ಕಾರ್ಯವನ್ನು ಆರಂಭಿಸಿದ್ದು, ಆರೋಪಿಗಾಗಿ ಬಲೆ ಬೀಸಲಾಗಿದೆ. ಇದಲ್ಲದೆ, ಆರೋಪಿತ ಮಹಿಳೆ ವ್ಯಕ್ತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿದ್ದಾಳೆ ಎಂದು ಆರೋಪಿಸಲಾಗಿದ್ದು, ಕುಟುಂಬದ ಸದಸ್ಯರನ್ನು ಆ ಖಾತೆಗೆ ಸೇರಿಸಿ ಖಾಸಗಿ ಫೋಟೋಗಳು ಮತ್ತು ವಿಡಿಯೋಗಳನ್ನು ಶೇರ್​​ ಮಾಡಿ ಅವಮಾನ ಮಾಡುವುದಾಗಿ ಬೆದರಿಕೆ ಹಾಕಿದ್ದಾಳೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?