AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸಿಲಿಂಡರ್ ಸ್ಫೋಟ ಕೇಸ್​: ಮತ್ತೊಂದು ಮಗು ಸಾವು; ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಅಕ್ಟೋಬರ್ 2ರಂದು ನಡೆದಿದ್ದ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮತ್ತೊಂದು ಮಗು ಸಾವನ್ನಪ್ಪಿದೆ. ಇದರೊಂದಿಗೆ ಮೃತರ ಸಂಖ್ಯೆ ಮೂರಕ್ಕೇರಿದೆ. ತಾಯಿ ಹಾಗೂ ಅವಳಿ ಜವಳಿ ಮಕ್ಕಳು ಸಾವನ್ನಪ್ಪಿದ್ದಾರೆ. ತಂದೆ ಅವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಸಿಲಿಂಡರ್ ಸ್ಫೋಟ ಕೇಸ್​: ಮತ್ತೊಂದು ಮಗು ಸಾವು; ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ
ಸಿಲಿಂಡರ್ ಸೋರಿಕೆಯಾಗಿ ಸ್ಫೋಟ
ಪ್ರದೀಪ್​ ಚಿಕ್ಕಾಟಿ
| Edited By: |

Updated on: Oct 18, 2026 | 7:05 PM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಸಿಲಿಂಡರ್ ಸೋರಿಕೆಯಾಗಿ ಸ್ಫೋಟ ಪ್ರಕರಣ
  • ದುರಂತದಲ್ಲಿ ಗಂಭೀರ ಗಾಯಗೊಂಡಿದ್ದ ಮತ್ತೊಂದು ಮಗು ಸಾವು
  • ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

ಬೆಂಗಳೂರು, ಅಕ್ಟೋಬರ್​​ 18: ಬೆಂಗಳೂರಿನ ನಾಯಂಡಹಳ್ಳಿಯ ವಿನಾಯಕ ಲೇಔಟ್​ನಲ್ಲಿ ನಡೆದ ಸಿಲಿಂಡರ್​​ ಸೋರಿಕೆ ಹಾಗೂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಂದು ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಸದ್ಯ ಪ್ರಕರಣದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ. ತಾಯಿ ಲಕ್ಷ್ಮಮ್ಮ ಹಾಗೂ ಅವಳಿ ಮಕ್ಕಳಾದ ಗೀತಾ ಮತ್ತು ಗಿರಿಜಾ ಮೃತರು. ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ಟೋಬರ್ 2ರಂದು ನಡೆದಿದ್ದೇನು?

ನಾಯಂಡಹಳ್ಳಿಯ ವಿನಾಯಕ ಲೇಔಟ್​ನಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ರಾಯಚೂರು ಮೂಲದ ಕುಟುಂಬ ವಾಸವಾಗಿತ್ತು. ಕಳೆದ ಅಕ್ಟೋಬರ್​​ 2ರಂದು ಬೆಳಿಗ್ಗೆ ತಿಂಡಿ ಮಾಡಲು ಒಲೆ ಹಚ್ಚುತ್ತಿದ್ದಂತೆ ಸಿಲಿಂಡರ್​​ ಸ್ಫೋಟಗೊಂಡಿತ್ತು. ಈ ದುರಂತದಲ್ಲಿ ಇಡೀ ಕುಟುಂಬ ಗಂಭೀರವಾಗಿ ಗಾಯಗೊಂಡಿತ್ತು.

ಇದನ್ನೂ ಓದಿ: ಮಂಗಳೂರಿನ MRPLನಲ್ಲಿ ಸ್ಫೋಟ: ಓರ್ವ ಸಾವು, 9 ಕಾರ್ಮಿಕರಿಗೆ ಗಾಯ; ಸ್ಫೋಟದ ಶಬ್ಧಕ್ಕೆ ಬೆಚ್ಚಿಬಿದ್ದ ಜನ

ಸದ್ಯ ಈ ದುರಂತದಲ್ಲಿ ಅವಳಿ ಮಕ್ಕಳು ಸೇರಿದಂತೆ ತಾಯಿ ಸಾವನ್ನಪ್ಪಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿದ್ದ ತಂದೆ ಕರಿಲಿಂಗಪ್ಪ ಅವರ ಸ್ಥಿತಿಯೂ ಗಂಭೀರವಾಗಿದೆ. ಶೇ. 40ಕ್ಕಿಂತ ಹೆಚ್ಚು ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಜೊತೆಗೆ ಇನ್ನೂ ಇಬ್ಬರು ಮಕ್ಕಳಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

LIVE TV

ಗ್ಯಾಸ್ ಸಿಲಿಂಡರ್ ಲೀಕ್: ಹೋಟೆಲ್‌ನಲ್ಲಿ ಅಗ್ನಿ ಅವಘಡ

ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಸಮೀಪದ ಹೋಟೆಲ್‌ನಲ್ಲಿ ನಡೆದಿದೆ. ಘಟನೆಯಿಂದಾಗಿ ಹೋಟೆಲ್ ಮತ್ತು ನೆರೆಹೊರೆಯ ಅಂಗಡಿಗಳ ಮಾಲೀಕರು ಮತ್ತು ಸಿಬ್ಬಂದಿ ಆತಂಕಗೊಂಡಿದ್ದರು.

ಇದನ್ನೂ ಓದಿ: ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್: ನೈಸ್ ರಸ್ತೆಯಲ್ಲಿ ಕನಿಷ್ಠ ನಾಲ್ಕು ಕಿಲೋಮೀಟರ್ ಟ್ರಾಫಿಕ್ ಜಾಮ್

ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​
ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​