ಬೆಂಗಳೂರಿನಲ್ಲಿ ಬಾಯ್ಲರ್ ಸ್ಫೋಟ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಇನ್ನೂ ಇಬ್ಬರ ಸಾವು
ಘಟನೆಯಲ್ಲಿ ತೀವ್ರ ಸ್ವರೂಪದ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ನಾಲ್ವರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಇಬ್ಬರು ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಆ ಮೂಲಕ ಬಾಯ್ಲರ್ ಸ್ಪೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ನಿನ್ನೆ (ಆಗಸ್ಟ್ 23) ಬಾಯ್ಲರ್ ಸ್ಫೋಟಿಸಿ ಇಬ್ಬರು ಸಜೀವ ದಹನವಾದ ದುರ್ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಅಂಜನ್ ಥಿಯೇಟರ್ ಬಳಿ ನಡೆದಿತ್ತು. ಇಲ್ಲಿಯ ಎಂ.ಎಂ.ಫುಡ್ ಫ್ಯಾಕ್ಟರಿಯಲ್ಲಿ ನಡೆದಿರುವ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ನಾಲ್ಕು ಜನರಿಗೆ ಗಂಭೀರ ಗಾಯವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ, ಧನಲಕ್ಷ್ಮಿ(5೦) ಹಾಗೂ ಸಚಿನ (4೦) ಮೃತಪಟ್ಟಿದ್ದಾರೆ.
ಘಟನೆಯಲ್ಲಿ ತೀವ್ರ ಸ್ವರೂಪದ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ನಾಲ್ವರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಇಬ್ಬರು ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಆ ಮೂಲಕ ಬಾಯ್ಲರ್ ಸ್ಪೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ.
ಕಾಬೂಲ್ ಕಡಲೆ, ಚಿಪ್ಸ್ ಸೇರಿದಂತೆ ಸ್ನ್ಯಾಕ್ಸ್ ತಯಾರಿಕಾ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದೆ. ಬಿಹಾರ, ತಮಿಳುನಾಡು ಮೂಲದವರು ಕೆಲಸ ಮಾಡುತ್ತಿದ್ದರು. ಅನಧಿಕೃತವಾಗಿ ಫುಡ್ ಫ್ಯಾಕ್ಟರಿ ನಡೆಸಲಾಗುತ್ತಿತ್ತು ಎಂಬ ದೂರು ಸಹ ಕೇಳಿಬಂದಿದೆ. ಈ ಕುರಿತು ಪ್ರತಿಕ್ರಿಯಿಸಿದ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್, ಗಾಯಾಳುಗಳ ಹೇಳಿಕೆ ಪಡೆದು ಪ್ರಕರಣ ದಾಖಲಿಸಲಿದ್ದೇವೆ. ಘಟನೆಯಲ್ಲಿ ಇಬ್ಬರು ಮೃತಪಟ್ಟು, ಮೂವರಿಗೆ ಗಾಯವಾಗಿದೆ. ಜನವಸತಿ ಪ್ರದೇಶದಲ್ಲಿ ಫ್ಯಾಕ್ಟರಿಗೆ ಹೇಗೆ ಅನುಮತಿ ಕೊಟ್ಟರು ಎಂಬ ಬಗ್ಗೆ ಸಂಬಂಧಿಸಿದ ಇಲಾಖೆಯವರೇ ಉತ್ತರಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಬೆಂಗಳೂರಿನಲ್ಲಿ ಫುಡ್ ಫ್ಯಾಕ್ಟರಿಯೊಂದರಲ್ಲಿ ಬಾಯ್ಲರ್ ಸ್ಫೋಟ; ಓರ್ವ ಸಜೀವ ದಹನ, ನಾಲ್ವರಿಗೆ ಗಂಭೀರ ಗಾಯ