AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆದ್ದು ಹುಡುಗರೇ ಡಿಜಿಟಲ್ ಸುಂದರಿಯರ ಹಾಟ್ ಟಾರ್ಗೆಟ್: ಡೇಟಿಂಗ್ ಆಪ್ ಹುಚ್ಚಿನಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಬೆಂಗಳೂರಿನ ಯುವಕ

ಬೆಂಗಳೂರಿನಲ್ಲಿ ಡೇಟಿಂಗ್ ಆ್ಯಪ್ ಮೂಲಕ AI ವೀಡಿಯೊ ಬ್ಲ್ಯಾಕ್‌ಮೇಲ್ ವಂಚನೆ ಹೆಚ್ಚಾಗಿದೆ. ಯುವಕರನ್ನು ಗುರಿಯಾಗಿಸಿಕೊಂಡು, ನಕಲಿ ವೀಡಿಯೊ ಸೃಷ್ಟಿಸಿ ಹಣ ಸುಲಿಗೆ ಮಾಡಲಾಗುತ್ತಿದೆ. ಬೆಳ್ಳಂದೂರಿನ ಯುವಕನಿಂದ 1.85 ಲಕ್ಷ ರೂ. ಪಡೆದ ಪ್ರಕರಣ ದಾಖಲಾಗಿದೆ. ಅಪರಿಚಿತ ವೀಡಿಯೊ ಕರೆಗಳಿಗೆ ಉತ್ತರಿಸದಂತೆ, ಆನ್‌ಲೈನ್ ವಂಚನೆಗಳಿಂದ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಎಚ್ಚರಿಸಿದ್ದಾರೆ. ಕರ್ನಾಟಕದಲ್ಲಿ ಇಂತಹ ಸೈಬರ್ ಅಪರಾಧಗಳ ಸಂಖ್ಯೆ ಏರಿಕೆಯಾಗುತ್ತಿದೆ.

ಪೆದ್ದು ಹುಡುಗರೇ ಡಿಜಿಟಲ್ ಸುಂದರಿಯರ ಹಾಟ್ ಟಾರ್ಗೆಟ್: ಡೇಟಿಂಗ್ ಆಪ್ ಹುಚ್ಚಿನಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಬೆಂಗಳೂರಿನ ಯುವಕ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Oct 12, 2026 | 9:55 AM

Share

ಬೆಂಗಳೂರು, ಅ.12: ರಾಜ್ಯದಲ್ಲಿ ಪದೇ ಪದೇ ಸ್ಕ್ಯಾಮ್ ಕೃತ್ಯಗಳ ಬಗ್ಗೆ ವರದಿಯಾಗುತ್ತಿದ್ದರು, ಪೊಲೀಸರು ಇಂತಹ ಪ್ರಕರಣಗಳ ಬಗ್ಗೆ ಎಚ್ಚರಿಕೆಯಿಂದ ಇರಿ ಎಂದು ಹೇಳಿದ್ರೂ, ಈ ಜನರಿಗೆ ಅರ್ಥವೇ ಆಗುತ್ತಿಲ್ಲ.  ಮತ್ತೆ ಮತ್ತೆ ಸ್ಕ್ಯಾಮ್​​ಗಳಿಗೆ ಬಲಿಯಾಗುತ್ತಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆ ಇಂತಹ ಘಟನೆಗಳು ನಡೆಯುತ್ತಿದೆ. ಇನ್ನು ಬೆಂಗಳೂರಿನಲ್ಲಿ ಡಿಜಿಟಲ್ ವಂಚಕರು ಹೆಚ್ಚಾಗಿದ್ದಾರೆ. ಅದರಲ್ಲೂ ಇಂದಿನ ಯುವಕರು ಡೇಟಿಂಗ್ ಆ್ಯಪ್‌ ಜಾಲಕ್ಕೆ ಸಿಲುಕಿಕೊಳ್ಳುತ್ತಿದ್ದಾರೆ. ಈ ಡೇಟಿಂಗ್ ಆ್ಯಪ್‌ ಮೂಲಕ ಪರಿಚಯ ಮಾಡಿಕೊಳ್ಳುವವರನ್ನು ಗುರಿಯಾಗಿಸಿಕೊಂಡು ಹೊಸ ರೀತಿಯ ಬ್ಲ್ಯಾಕ್‌ಮೇಲ್ ದಂಧೆಗಳು ನಡೆಯುತ್ತಿದೆ. ಬೆಂಗಳೂರಿನ ಬೆಳ್ಳಂದೂರು ವಲಯದಲ್ಲಿ ಯುವಕನೊಬ್ಬನಿಗೆ ನಕಲಿ ವೀಡಿಯೋ ತೋರಿಸಿ ಬೆದರಿಸಿ 1.85 ಲಕ್ಷ ರೂ. ಸುಲಿಗೆ ಮಾಡಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.

ಬೆಳ್ಳಂದೂರಿನ 23 ವರ್ಷದ ಯುವಕನೊಬ್ಬ ಸೆಪ್ಟೆಂಬರ್ 27 ರಂದು ಜನಪ್ರಿಯ ಡೇಟಿಂಗ್ ಆ್ಯಪ್ ಮೂಲಕ ಆರಾಧ್ಯ ಹೆಸರಿನ ಯುವತಿಯೊಬ್ಬಳ ಸಂಪರ್ಕಕ್ಕೆ ಬಂದಿದ್ದನು. ನಂತರ ಇಬ್ಬರೂ ತಮ್ಮ ಮೊಬೈಲ್ ನಂಬರ್‌ಗಳನ್ನು ವಿನಿಮಯ ಮಾಡಿಕೊಂಡಿದ್ದರು. ನಂಬರ್ ವಿನಿಮಯವಾದ ಕೆಲವೇ ಕ್ಷಣಗಳಲ್ಲಿ ಆಕೆಯ ನಂಬರ್‌ನಿಂದ ವಾಟ್ಸಾಪ್ ವೀಡಿಯೋ ಕಾಲ್ ಬಂದಿದ್ದು, ಅದು ಕೇವಲ 5 ರಿಂದ 6 ಸೆಕೆಂಡುಗಳಷ್ಟೇ ಇತ್ತು ಎಂದು ಯುವಕ ಪೊಲೀಸರಿಗೆ ತಿಳಿಸಿದ್ದಾನೆ. ಕಾಲ್ ಕಟ್ ಆದ ಕೆಲವೇ ಕ್ಷಣಗಳಲ್ಲಿ ವಂಚಕರು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬಳಸಿ ಮಾರ್ಫ್ ಮಾಡಲಾದ ಯುವಕನ ಅಶ್ಲೀಲ ವೀಡಿಯೋವನ್ನು ಆತನಿಗೆ ಕಳುಹಿಸಿದ್ದಾರೆ.

ಈ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ ವಂಚಕರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದರಿಂದ ಭಯಗೊಂಡ ಯುವಕ ಸ್ನೇಹಿತರಿಂದ ಸಾಲ ಮಾಡಿ ಸೆಪ್ಟೆಂಬರ್ 27 ರಿಂದ 29 ರ ನಡುವೆ ವಿವಿಧ ಯುಪಿಐ (UPI) ಐಡಿಗಳಿಗೆ ಹಂತ ಹಂತವಾಗಿ ಒಟ್ಟು 1.85 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾನೆ. ನಂತರ ಮೋಸಹೋಗಿರುವುದನ್ನು ಅರಿತ ಯುವಕ ಸೈಬರ್ ಕ್ರೈಮ್‌ಗೆ ಆನ್‌ಲೈನ್ ಮೂಲಕ ದೂರು ದಾಖಲಿಸಿದ್ದು, ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಸೆಕ್ಷನ್ 66C, 66D ಹಾಗೂ ಬಿಎನ್‌ಎಸ್ (BNS) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಉತ್ತರ ನಿಗಮದಿಂದ ಮಹತ್ವದ ಹೆಜ್ಜೆ: ಇನ್ಮುಂದೆ ಪ್ರತಿ ಮಂಗಳವಾರ ಕಸದ ಸಮಸ್ಯೆಗೆ ಫೋನ್-ಇನ್ ಕಾರ್ಯಕ್ರಮ!

ಸೈಬರ್ ವಂಚಕರ ಈ ಕೃತ್ಯವು ರಾಜ್ಯದ ಜನತೆಯಲ್ಲಿ ಆತಂಕ ಮೂಡಿಸಿದ್ದು, ಪೊಲೀಸ್ ಇಲಾಖೆಯ ಅಧಿಕೃತ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಇಂತಹ ಅಪರಾಧಗಳು ಏರಿಕೆಯಾಗುತ್ತಿವೆ. ಇಂತಹ ಪ್ರಕರಣಕ್ಕೆ ಸಂಬಂಧಿಸಿದಂತೆ 2024ರಲ್ಲಿ 20 ಪ್ರಕರಣಗಳು ದಾಖಲಾಗಿದ್ದವು. 2025ರಲ್ಲಿ ಪ್ರಕರಣಗಳ ಸಂಖ್ಯೆ 104 ಕ್ಕೆ ಏರಿಕೆಯಾಗಿತ್ತು. 2026 (ಆಗಸ್ಟ್ ವರೆಗೆ) ಈಗಾಗಲೇ 57 ಪ್ರಕರಣಗಳು ವರದಿಯಾಗಿವೆ. ಆನ್‌ಲೈನ್ ಡೇಟಿಂಗ್ ಅನ್ನು ಸೈಬರ್ ಅಪರಾಧಿಗಳು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ವಾಟ್ಸಾಪ್ ಅಥವಾ ಇತರೆ ಆಪ್‌ಗಳಲ್ಲಿ ಬರುವ ಅರಿವಿಲ್ಲದ ವೀಡಿಯೋ ಕಾಲ್‌ಗಳನ್ನು ಸ್ವೀಕರಿಸುವಾಗ ನಾಗರಿಕರು ಅತ್ಯಂತ ಎಚ್ಚರಿಕೆ ವಹಿಸಬೇಕು. ಇತ್ತೀಚಿನ ದಿನಗಳಲ್ಲಿ AI ಮೂಲಕ ದೃಶ್ಯಗಳನ್ನು ಮಾರ್ಫ್ ಮಾಡುವುದು ಅತ್ಯಂತ ಸುಲಭವಾಗಿದ್ದು, ಅನೇಕ ಪ್ರಕರಣಗಳು ಹೊರಬರಲು ಹೆಪರಿರುತ್ತಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಎಚ್ಚರಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?