AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಾದಿನಿ ಪರ ವಕಾಲತು ವಹಿಸಲು ಬಂದ ಬಾವನಿಗೆ ಡೆಲಿವರಿ ಬಾಯ್​​ನಿಂದ ಪಂಚ್

ಬಸವೇಶ್ವರ ನಗರದಲ್ಲಿ ಡೆಲಿವರಿ ಬಾಯ್ ವಿಷ್ಣುವರ್ಧನ್ ಗ್ರಾಹಕ ಶಶಾಂಕ್ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ್ದಾನೆ. ಆರ್ಡರ್ ಡೆಲಿವರಿ ವಿಳಾಸ ಬದಲಾವಣೆಯಿಂದ ಉಂಟಾದ ಜಗಳದಲ್ಲಿ ಶಶಾಂಕ್​ನ ಕಣ್ಣಿಗೆ ಪಂಚ್ ಮಾಡಿದ್ದಾನೆ. ಶಶಾಂಕ್​ರ ಕಣ್ಣಿನ ಮೂಳೆ ಮುರಿದಿದ್ದು, ದೃಷ್ಟಿಗೆ ಹಾನಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಹುಡುಕುತ್ತಿದ್ದಾರೆ. ಜೆಫ್ಟೋ ಸ್ಟೋರ್ ಮ್ಯಾನೇಜರ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

Shivaprasad B
| Edited By: |

Updated on: May 24, 2025 | 2:47 PM

Share

ಬೆಂಗಳೂರು, ಮೇ 23: ಕ್ಷುಲ್ಲಕ ಕಾರಣಕ್ಕೆ ಡೆಲಿವರಿ ಬಾಯ್ (Delivery boy) ಗ್ರಾಹಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬಸವೇಶ್ವರ ನಗರದಲ್ಲಿ (Basaveshwara Nagar) ನಡೆದಿದೆ. ಬುಧವಾರ ಮೇ.21 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಿನಸಿ ಸಾಮಾಗ್ರಿ ಡೆಲಿವರಿ ಮಾಡಲು ಬಂದಿದ್ದ ಜ್ಸೆಫ್ಟೋ ಸ್ಟೋರ್ ಡೆಲಿವರಿ ಬಾಯ್ ವಿಷ್ಣುವರ್ಧನ್ ಎಂಬುವನು ಗ್ರಾಹಕ ಶಂಶಾಂಕ್ ಕಣ್ಣಿಗೆ ಪಂಚ್ ಮಾಡಿ, ನಿಂದಿಸಿದ್ದಾನೆ. ಶಶಾಂಕ್​ ಅವರ ಕಣ್ಣಿನ ಕೆಳಭಾಗದ ಮೂಳೆ ಮುರಿದಿದೆ.

ಆರ್ಡರ್ ಡೆಲಿವರಿ ಅಡ್ರೆಸ್ ಬದಲಾಗಿದ್ದಕ್ಕೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ. ಡೆಲಿವರಿ ರಿಸೀವ್​ ಮಾಡಿಕೊಳ್ಳು ಬಂದಿದ್ದ ಶಶಾಂಕ್ ಅವರ ‌ನಾದಿನಿಯವರಿಗೆ ಡೆಲಿವರಿ ಬಾಯ್​ ವಿಷ್ಣುವರ್ಧನ್ ನಿಂದನೆ ಮಾಡಿದ್ದಾನೆ. ನಾದಿನಿಯನ್ನು ನಿಂದಿಸಿದ್ದಕ್ಕೆ ಮನೆಯಿಂದ ಹೊರಬಂದು ಶಶಾಂಕ್ ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಡೆಲಿವರಿ ಬಾಯ್ ವರ್ತನೆ ಕಂಡು ಶಶಾಂಕ್ ಪೊಲೀಸರಿಗೆ ಕರೆ ಮಾಡಲು ಮುಂದಾದರು.

ಪೊಲೀಸರ ಹೆಸರು ಹೇಳುತ್ತಿದ್ದಂತೆ ದ್ವಿ ಚಕ್ರವಾಹದಿಂದ ಇಳಿದು ಬಂದು ಡಿಲಿವರಿ ಬಾಯ್​ ವಿಷ್ಣವರ್ಧನ್​ ಗ್ರಾಹಕ ಶಶಾಂಕ್​ ಅವರ ಕಣ್ಣಿಗೆ ಪಂಚ್ ಮಾಡಿದ್ದಾನೆ. ಇದರಿಂದ ಗ್ರಾಹಕ ಶಶಾಂಕ್ ಅವರ ಕಣ್ಣಿನ ಕೆಳ ಭಾಗದ ಮೂಳೆ ಮುರಿದಿದೆ. ಕಣ್ಣು ಮಂಜಾಗಿದ್ದು ದೃಷ್ಟಿ ಸ್ವಲ್ಪಮಟ್ಟಿಗೆ ಹಾನಿಯಾಗಿದೆ. ಇದೇ ಪರಿಸ್ಥಿತಿ ಇದ್ದಲ್ಲಿ ಅಪರೇಷನ್ ಮಾಡುವುದು ಅನಿವಾರ್ಯ ಎಂದು ವೈದ್ಯರು ಹೇಳಿದ್ದಾರೆ. ಘಟನೆ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಎಫ್ಐಆರ್​​ ದಾಖಲಿಸಿ ಪೊಲೀಸರ ಆರೋಪಿ ವಿಷ್ಣವರ್ಧನ್​ಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ
Image
ಮೇ 29 ರಿಂದ ಮದ್ಯದಂಗಡಿ ಬಂದ್: ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲಾನ್
Image
ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ವಿವರ
Image
ಮೆಟ್ರೋ ನಿಲ್ದಾಣಗಳ‌ಲ್ಲಿ ಶೌಚಾಲಯ ಬಳಕೆಗೆ ಶುಲ್ಕ: ವಿವಾದಕ್ಕೆ ತೆರೆಳೆದ BMRC
Image
ಮೆಟ್ರೋದಲ್ಲಿ ಯುವತಿಯರ ವೀಡಿಯೋ ರೆಕಾರ್ಡ್ ಮಾಡಿ ವಿಕೃತಿ ಮರೆದಿದ್ದವ ಅರೆಸ್ಟ್

ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೋವಿಡ್: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಜ್ಸೆಫ್ಟೋ ಸ್ಟೋರ್ ಮ್ಯಾನೇಜರ್ ಗೆ ದೂರು ನೀಡಿದರೇ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ನೀವೂ ವಾದಿಸಿದ್ದಕ್ಕೆ ಡೆಲಿವರಿ ಬಾಯ್ ಹೊಡೆದಿದ್ದಾನೆಂದು ಎಂದು ಸಮರ್ಥನೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್