AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಬೆಂಗಳೂರಿನ ಡೆಂಟಲ್ ಕಾಲೇಜಿನ 6 ಉಪನ್ಯಾಸಕರು ಕೆಲಸದಿಂದ ವಜಾ

ಬೆಂಗಳೂರಿನ ಆನೇಕಲ್ ಸಮೀಪದ ಚಂದಾಪುರದಲ್ಲಿ ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಲೇಜು ಅಧ್ಯಾಪಕರ ಕಿರುಕುಳವೇ ಮಗಳ ಸಾವಿಗೆ ಕಾರಣ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಮತ್ತೊಂದೆಡೆ ಯಶಸ್ವಿನಿ ಸಾವಿನ ನ್ಯಾಯಬೇಕೆಂದು ಸಹಪಾಠಿಗಳು ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕೆಲಸದಿಂದ ಆರು ಉಪನ್ಯಾಸಕರನ್ನು ವಜಾ ಮಾಡಲಾಗಿದೆ.

ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಬೆಂಗಳೂರಿನ ಡೆಂಟಲ್ ಕಾಲೇಜಿನ 6 ಉಪನ್ಯಾಸಕರು ಕೆಲಸದಿಂದ ವಜಾ
Yashaswini
ರಾಮು, ಆನೇಕಲ್​
| Edited By: |

Updated on:Jan 12, 2026 | 9:03 PM

Share

ಬೆಂಗಳೂರು, (ಜನವರಿ 12): ನಗರದ ಆಕ್ಸ್​ಫರ್ಡ್ ಡೆಂಟಲ್ ಕಾಲೇಜಿನ (Bengaluru dental college) ವಿದ್ಯಾರ್ಥಿನಿ ಯಶಸ್ವಿ ಆತ್ಮಹತ್ಯೆ ಪ್ರಕರಣಕ್ಕೆ ( Yashaswini suicide Case) ಸಂಬಂಧಿಸಿದಂತೆ ಆರು ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಮೊನ್ನೆ ಅಂದರೆ ಜನವರಿ 8ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಉಪನ್ಯಾಸಕರ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಹಾಗೂ ಯಶಸ್ವಿ ಸಹಪಾಠಿಗಳು ಆರೋಪಿಸಿದ್ದರು. ಈ ಸಂಬಂಧ ಕಾಲೇಜು ಅಧ್ಯಾಪಕರ ಜನಾಂಗೀಯ ನಿಂದನೆ ಮತ್ತು ಕಿರುಕುಳವೇ ಮಗಳ ಸಾವಿಗೆ ಕಾರಣ ಎಂದು ಪ್ರಾಂಶುಪಾಲರು ಸೇರಿದಂತೆ ಐವರ ವಿರುದ್ಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಎಫ್​​ಐಆರ್ ದಾಖಲಾಗುತ್ತಿದ್ದಂತೆಯೇ ಆಕ್ಸ್​ಫರ್ಡ್ ಡೆಂಟಲ್ ಕಾಲೇಜಿನ ಆಡಳಿತ ಮಂಡಳಿ, ಆರು ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡಿದೆ. ಒಎಂಆರ್‌ ವಿಭಾಗದ ಲೆಕ್ಚರರ್ಸ್‌ಗಳಾದ ಡಾ.ಅನಿಮೋಲ್, ಡಾ.ಶಬಾನಾ, ಡಾ.ಫೈಕಾ, ಡಾ.ಸಿಂಧು, ಡಾ.ಸುಶ್ಮಿನಿ, ಡಾ.ಅಲ್ಬಾ  ವಜಾಗೊಂಡ ಉಪನ್ಯಾಸಕರು.

ಬಟ್ಟೆ, ಮೈಬಣ್ಣದ ಬಗ್ಗೆ ನಿಂದನೆ ಆರೋಪ

ಸಹಪಾಠಿಗಳ ಮುಂದೆ ಯಶಸ್ವಿನಿ ಮೈಬಣ್ಣ ಹಾಗೂ ಡ್ರೆಸ್‌ ಬಗ್ಗೆ ಟೀಕೆ ಆರೋಪ ಕೇಳಿಬಂದಿದೆ. ಕಪ್ಪು ಬಣ್ಣದ ನಿನಗೆ ಡಾಕ್ಟರ್ ಆಗಬೇಕ ಎಂದು ಅವಮಾನ ಮಾಡಲಾಗಿತ್ತು ಎನ್ನಲಾಗಿದ್ದು, ಇದರಿಂದ ಮನನೊಂದು ಯಶಸ್ವಿ ಆತ್ಮಹತ್ಯೆಗೆ ಶರಣಾಗಿದ್ದಳು ಎಂದು ಆರೋಪಿಸಲಾಗಿತ್ತು.  ಕಣ್ಣು ನೋವು ಎಂದು ಒಂದು ದಿನ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಸೆಮಿನಾರ್, ರೆಡಿಯಾಲಜಿ ಕೇಸ್ ನೀಡದೆ ಕೊಂಕು ಮಾತುಗಳಿಂದ ನಿಂದನೆ ಮಾಡಲಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಕಾಲೇಜು ಆಡಳಿತ ಮಂಡಳಿಯಿಂದ ಕಿರುಕುಳ ಆರೋಪ: ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

ತನ್ನ ಮಗಳ ಸಾವಿಗೆ ಕಾರಣರಾದ ಲೆಕ್ಚರರ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯಶಸ್ವಿನಿ ತಾಯಿ ಪರಿಮಳ ಒತ್ತಾಯಿಸಿದ್ದರು. ‘ನನ್ನ ಮಗಳು ವೈದ್ಯೆಯಾಗಿ ಸಮಾಜ ಸೇವೆ ಮಾಡಬೇಕೆಂಬ ಕನಸು ಕಂಡಿದ್ದಳು. ಆದರೆ ಕಾಲೇಜು ಲೆಕ್ಚರರ್ಸ್ ಆಕೆಯ ಕನಸನ್ನು ಹೊಸಕಿ ಹಾಕಿದ್ದಾರೆ. ಅವಳಿಗೆ ಸಿಗಬೇಕಾದ ನ್ಯಾಯ ಎಲ್ಲ ವಿದ್ಯಾರ್ಥಿಗಳಿಗೂ ಸಂದೇಶವಾಗಬೇಕು’ ಎಂದು ಕಣ್ಣೀರಿಟ್ಟಿದ್ದರು. ಅಲ್ಲದೇ ಯಶಸ್ವಿನಿ ಸಹಪಾಠಿಗಳು ಸಹ ಕಾಲೇಜು ಮುಂದೆ ಪ್ರತಿಭಟನೆ ನಡೆಸಿದ್ದು, ಯಶಸ್ವಿನಿ ಸಾವಿಗೆ ನ್ಯಾಯಬೇಕೆಂದು ಆಗ್ರಹಿಸಿದ್ದರು.

ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಕುಟುಂಬಸ್ಥರು ನೀಡಿದ್ದ ದೂರಿನ ಮೇರೆಗೆ ಪ್ರಿನ್ಸಿಪಾಲ್‌ ಡಾ.ಪ್ರಿಯಾ ಸೇರಿದಂತೆ ಒಟ್ಟು ಐದು ಜನರ ಮೇಲೆ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.​​

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:55 pm, Mon, 12 January 26

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ