ಬೆಂಗಳೂರು ಮಹಿಳಾ ಅಧಿಕಾರಿ ಹತ್ಯೆ ಪ್ರಕರಣ: ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಕೆ.ಎ ದಯಾನಂದ್​ ಹೇಳಿದ್ದಿಷ್ಟು

ಎಲ್ಲಾ ಸಭೆಗಳಲ್ಲೂ ಕಡತಗಳ ಜೊತೆಗೆ ಹಾಜರಾಗುತ್ತಿದ್ದರು. ಕಳೆದ ಒಂದು ತಿಂಗಳ ಹಿಂದೆ ಎಲ್ಲಾ ಅಧಿಕಾರಿಗಳನ್ನು ಕರೆದು ಸ್ವಲ್ಪ ಜೋರು ಮಾಡಿದ್ದೆ. ಅಕ್ರಮವಾಗಿ ಜಲ್ಲಿಕಲ್ಲು, ಕಲ್ಲು ಗಣಿಗಾರಿಕೆ ನಡೆಯುತ್ತಿದೆ, ತಮಿಳುನಾಡಿನಿಂದ ತರುತ್ತಿದ್ದಾರೆ ನೋಡಿ ಅಂದಿದ್ದೆ. ಕೆಲಸದ ಸಂಬಂಧ ಯಾವುದೇ ಸಮಸ್ಯೆ ಇರಲಿಲ್ಲ. ಆ ರೀತಿಯ ಯಾವುದೇ ದೂರು ಬಂದಿಲ್ಲ. ತಮಿಳುನಾಡಿನ ಕಡೆಗೆ ಬರುವ ಲಾರಿಗಳನ್ನು ತಡೆಯೋಕೆ ಹೇಳಿದ್ದೆ. ಯಾವ ಕಾರಣಕ್ಕಾಗಿ ಕೊಲೆಯಾಗಿದೆ ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಹೇಳಿದರು.

ಬೆಂಗಳೂರು ಮಹಿಳಾ ಅಧಿಕಾರಿ ಹತ್ಯೆ ಪ್ರಕರಣ: ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಕೆ.ಎ ದಯಾನಂದ್​ ಹೇಳಿದ್ದಿಷ್ಟು
ಸಿಎಂ ಸಿದ್ದರಾಮಯ್ಯ
Follow us
TV9 Web
| Updated By: ವಿವೇಕ ಬಿರಾದಾರ

Updated on: Nov 05, 2023 | 1:57 PM

ಬೆಂಗಳೂರು ನ.05: ಗಣಿ-ಭೂವಿಜ್ಞಾನ ಇಲಾಖೆ (Department of Mines and Geology) ಉಪ ನಿರ್ದೇಶಕಿ ಡಿಡಿ ಪ್ರತಿಮಾ (Pratima) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತಾನೇ ಇದರ ಬಗ್ಗೆ ಮಾಹಿತಿ ಪಡೆದಿದ್ದೇನೆ. ಅಧಿಕಾರಿ ಒಬ್ಬಂಟಿಯಾಗಿ ಮನೆಯಲ್ಲಿ ವಾಸ ಮಾಡುತ್ತಿದ್ದರು. ಅವರ ಪತಿ ಊರಿನಲ್ಲಿ ಇದ್ದರು. ಸದ್ಯಕ್ಕೆ ಇದು ಆರಂಭಿಕ ಮಾಹಿತಿ. ಕೊಲೆಯ ಬಗ್ಗೆ ಸಂಪೂರ್ಣವಾದ ತನಿಖೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ಕೆಲಸದ ವಿಚಾರದಲ್ಲಿ ಪ್ರತಿಮಾಗೆ ಯಾವುದೇ ಸಮಸ್ಯೆ ಇರಲಿಲ್ಲ: ದಯಾನಂದ್​

ಕೆಲಸದ ವಿಚಾರದಲ್ಲಿ ಡಿಡಿ ಪ್ರತಿಮಾಗೆ ಯಾವುದೇ ಸಮಸ್ಯೆ ಇರಲಿಲ್ಲ. ಕೆಲಸದ ವಿಚಾರವಾಗಿ ಪ್ರತಿಮಾ ಯಾವುದೇ ಗಂಭೀರ ಆರೋಪ ಮಾಡಿರಲಿಲ್ಲ. ಡಿಡಿ ಪ್ರತಿಮಾ ದಕ್ಷ ಅಧಿಕಾರಿಯಾಗಿದ್ದರು, ನಿರಂತರವಾಗಿ ನನ್ನ ಸಂಪರ್ಕದಲ್ಲಿದ್ದರು. ಉಪ ನಿರ್ದೇಶಕಿ ಪ್ರತಿಮಾ ಪಾಸಿಟಿವ್ ಮೈಂಡ್ ಸೆಟ್‌ ಹೊಂದಿದ್ದರು. ಯಾವ ಕಾರಣಕ್ಕಾಗಿ ಕೊಲೆ ಎಂದು ತನಿಖೆಯಿಂದ ಗೊತ್ತಾಗಬೇಕಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಹೇಳಿದರು.

ಘಟನಾ ಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಎಲ್ಲಾ ಸಭೆಗಳಲ್ಲೂ ಕಡತಗಳ ಜೊತೆಗೆ ಹಾಜರಾಗುತ್ತಿದ್ದರು. ಕಳೆದ ಒಂದು ತಿಂಗಳ ಹಿಂದೆ ಎಲ್ಲಾ ಅಧಿಕಾರಿಗಳನ್ನು ಕರೆದು ಸ್ವಲ್ಪ ಜೋರು ಮಾಡಿದ್ದೆ. ಅಕ್ರಮವಾಗಿ ಜಲ್ಲಿಕಲ್ಲು, ಕಲ್ಲು ಗಣಿಗಾರಿಕೆ ನಡೆಯುತ್ತಿದೆ, ತಮಿಳುನಾಡಿನಿಂದ ತರುತ್ತಿದ್ದಾರೆ ನೋಡಿ ಅಂದಿದ್ದೆ. ಕೆಲಸದ ಸಂಬಂಧ ಯಾವುದೇ ಸಮಸ್ಯೆ ಇರಲಿಲ್ಲ. ಆ ರೀತಿಯ ಯಾವುದೇ ದೂರು ಬಂದಿಲ್ಲ. ತಮಿಳುನಾಡಿನ ಕಡೆಗೆ ಬರುವ ಲಾರಿಗಳನ್ನು ತಡೆಯೋಕೆ ಹೇಳಿದ್ದೆ. ಯಾವ ಕಾರಣಕ್ಕಾಗಿ ಕೊಲೆಯಾಗಿದೆ ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ ಎಂದರು.

ಇದನ್ನೂ ಓದಿ: ಒಂಟಿಯಾಗಿ ನೆಲೆಸಿದ್ದ ಮಹಿಳಾ ಅಧಿಕಾರಿಯ ಮನೆಗೆ ನುಗ್ಗಿ ಕುತ್ತಿಗೆ ಕೊಯ್ದು ಬರ್ಬರ ಕೊಲೆ

ಪ್ರತಿಮಾ ತುಂಬಾ ಸ್ಟ್ರಾಂಗ್ ಮಹಿಳೆ. ಅವರು ಕೊಲೆಯಾಗಿದೆ ಅಂದರೆ ನಂಬೋಕೆ ಆಗುತ್ತಿಲ್ಲ. ನಾನು ದಿನ ಆಕೆಗೆ ಕರೆ ಮಾಡುತ್ತಿದ್ದೆ. ಎಲ್ಲವನ್ನೂ ಮಾತಾಡುತ್ತಿದ್ದವಿ. ಇವತ್ತು ಒಂದು ಮದುವೆಗೆ ಹೋಗಬೇಕಿತ್ತು. ಅದಕ್ಕೆ ನಿನ್ನೆ ರಾತ್ರಿಯಿಂದ ಕಾಲ್ ಮಾಡ್ತಿದ್ದೆ, ಬಟ್ ರಿಸಿವ್ ಮಾಡ್ತಾ ಇರಲಿಲ್ಲ. ಬೆಳಗ್ಗೆ ಮತ್ತೆ ಕಾಲ್ ಮಾಡಿದಾಗಲು ರಿಸಿವ್ ಮಾಡಲಿಲ್ಲ. ಹಾಗಾಗಿ ಕೆಳಗಿನ ಮನೆಯವರಿಗೆ ಪೋನ್ ಮಾಡಿ ತಿಳಿಸಿದ್ವಿ. ಆಗ ನೋಡಿದಾಗ ಕೊಲೆಯಾಗಿರುವುದು ಗೊತ್ತಾಗಿದೆ ಎಂದು ಪ್ರತಿಮಾ ಸಹೋದರ ಪ್ರತೀಶ್ ಹೇಳಿದರು.

ಕೆಲಸದ ವಿಚಾರವಾಗಿ ಏನು ಸಮಸ್ಯೆ ಇರಲಿಲ್ಲ. ಆ ತರ ಇದ್ದಿದ್ದರೇ ನನ್ನ ಹತ್ರ ಹೇಳಿಕೊಳ್ಳುತ್ತಿದ್ದರು. ಮನೆಯಲ್ಲಿ ಏನು ಕಳ್ಳತನವಾಗಿಲ್ಲ. ಪೊಲೀಸ್ ಇಲಾಖೆ ಮೇಲೆ ನಂಬಿಕೆ ಇದೆ. ಕೊಲೆ ಮಾಡಿದವರಿಗೆ ತಕ್ಕ ಶಿಕ್ಷೆಯಾಗುತ್ತೆ. ಇನ್ನೂ ಕುಟುಂಬಸ್ಥರು ಬರಬೇಕಿದೆ ಎಂದು ಹೇಳಿದರು.

ದಕ್ಷಿಣ ವಿಭಾಗದ ಡಿಸಿಪಿ ರಾಹುಲ್‌ ಕುಮಾರ್ ಶಹಾಪುರ್‌ವಾಡ್ ಹೇಳಿಕೆ

ಶನಿವಾರ ಸಂಜೆ ಎಂಟು ಗಂಟೆಗೆ ಪ್ರತಿಮಾ ಮನೆಗೆ ಬಂದಿದ್ದರು. ಇಂದು ಬೆಳಗ್ಗೆ ಮನೆಯವರು ಫೋನ್ ಮಾಡಿದರೂ ರಿಸೀವ್ ಮಾಡಿರಲಿಲ್ಲ. ಬೆಳಗ್ಗೆ ಸಹೋದರ ಮನೆಗೆ ಬಂದು ನೋಡಿದಾಗ ಕೊಲೆ ಕೇಸ್ ಬಹಿರಂಗವಾಗಿದೆ. ಮೊದಲು ಉಸಿರುಗಟ್ಟಿಸಿ ನಂತರ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಐದು ವರ್ಷದಿಂದ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ ಒಬ್ಬರೇ ವಾಸವಿದ್ದರು. ಕೊಲೆಯಾದ ಪ್ರತಿಮಾ ಮನೆಯಲ್ಲಿ ಯಾವುದೇ ವಸ್ತು ಕಳ್ಳತನವಾಗಿಲ್ಲ. ಆರೋಪಿಗಳ ಬಂಧನಕ್ಕಾಗಿ ಪೊಲೀಸರ ಮೂರು ತಂಡ ರಚಿಸಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ರಾಹುಲ್‌ ಕುಮಾರ್ ಶಹಾಪುರ್‌ವಾಡ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್