AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಲ್ಲೂ ಅಧಿಕಾರಿಗಳ ಜೊತೆ ಮೀಟಿಂಗ್​​: ವಿಡಿಯೋ ಕಾನ್ಫರೆನ್ಸ್​​ ಮೂಲಕ ಉನ್ನತ ಮಟ್ಟದ ಸಭೆ ನಡೆಸಿದ ಸಚಿವ ಕೃಷ್ಣಭೈರೇಗೌಡ

TV9 Kannada News: ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು ಸಮಯ ಉಳಿಸುವ ಸಲುವಾಗಿ ಕಾರಿನಲ್ಲಿ ಪ್ರಯಾಣಿಸುವಾಗಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಬಿಎಂಪಿ ಮತ್ತು ಉನ್ನತ ಮಟ್ಟದ ಅಧಿಕಾರಿಗಳ ಮಹತ್ವದ ಸಭೆ ನಡೆಸಿದ್ದಾರೆ. ಬೆಂಗಳೂರು ನಗರ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್(ಬಿ-ಸ್ಮೈಲ್) ಅಧಿಕಾರಿಗಳ ಜೊತೆ ನಿನ್ನೆ ಸಭೆ ನಡೆಸಿದ್ದ ಸಚಿವ ಕೃಷ್ಣ ಭೈರೇಗೌಡರು ಅಧಿಕಾರಿಗಳನ್ನು ತರಾಟೆಗೆ ಪಡೆದಿದ್ದರು.

ಕಾರಲ್ಲೂ ಅಧಿಕಾರಿಗಳ ಜೊತೆ ಮೀಟಿಂಗ್​​: ವಿಡಿಯೋ ಕಾನ್ಫರೆನ್ಸ್​​ ಮೂಲಕ ಉನ್ನತ ಮಟ್ಟದ ಸಭೆ ನಡೆಸಿದ ಸಚಿವ ಕೃಷ್ಣಭೈರೇಗೌಡ
ವಿಡಿಯೋ ಕಾನ್ಫರೆನ್ಸ್​​ ಮೂಲಕ ಉನ್ನತ ಮಟ್ಟದ ಸಭೆ ನಡೆಸಿದ ಸಚಿವ ಕೃಷ್ಣಬೈರೇಗೌಡImage Credit source: Krishna Byre Gowda X Account
Anil Kalkere
| Edited By: |

Updated on:Jun 23, 2026 | 2:05 PM

Share

ಬೆಂಗಳೂರು, ಜೂನ್​​ 23: ಕೃಷ್ಣ ಭೈರೇಗೌಡರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇಲಾಖೆಯ ಕಾರ್ಯಗಳಿಗೆ ಚುರುಕು ಮುಟ್ಟಿಸಿದ್ದು, ಮೇಲಿಂದ ಮೇಲೆ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಜಿಬಿಎ, ಬಿಎಂಆರ್​​ಸಿಎಲ್​​ ಮತ್ತು ಬಿ-ಸ್ಮೈಲ್ ಸಭೆಗಳಲ್ಲಿ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ವಿಚಾರ ಭಾರಿ ಸುದ್ದಿಯಾಗಿತ್ತು. ಈ ನಡುವೆ ಸಮಯ ಉಳಿತಾಯ ಮಾಡುವ ನಿಟ್ಟಿನಲ್ಲಿ ತಂತ್ರಜ್ಞಾನದ ನೆರವಿನಿಂದ ಕಾರಿನಲ್ಲಿ ಸಂಚಾರದ ಸಮಯದಲ್ಲೂ ವಿಡಿಯೋ ಕಾನ್ಫರೆನ್ಸ್ ಮೂಲಕ ಸಚಿವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಯಾರೆಲ್ಲ ಭಾಗಿ?

ಆಡಳಿತಾತ್ಮಕ ಕಾರ್ಯಗಳ ಕುರಿತು ಪ್ರಯಾಣದ ವೇಳೆಯೇ ಅಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಕೃಷ್ಣ ಭೈರೇಗೌಡರು ಮೀಟಿಂಗ್​​ ನಡೆಸಿದ್ದು, ತಂತ್ರಜ್ಞಾನ ಬಳಸಿ ಆಡಳಿತಕ್ಕೆ ವೇಗ ನೀಡುವ ಸಂದೇಶ ನೀಡಿದ್ದಾರೆ. ಸಚಿವರು ನಡೆಸಿರುವ ಈ ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತರು, ವಿಶೇಷ ಆಯುಕ್ತರು, ಯುಡಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ವಲಯ ಆಯುಕ್ತರು, ಮುಖ್ಯ ಎಂಜಿನಿಯರ್‌ ಮತ್ತು ಕಾರ್ಯನಿರ್ವಾಹಕ ಎಂಜಿನಿಯರ್​​ಗಳು ಭಾಗಿಯಾಗಿದ್ದರು.

ಇದನ್ನೂ ಓದಿ:  ಫ್ಲೈಓವರ್ ಬರುತ್ತೆ ಅಂತಾ ಗೊತ್ತಿದ್ರೂ ವೈಟ್ ಟ್ಯಾಪಿಂಗ್ ಮಾಡೋದೇಕೆ? ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್

ಬೆಂಗಳೂರು ನಗರ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್(ಬಿ-ಸ್ಮೈಲ್) ಅಧಿಕಾರಿಗಳ ಜೊತೆ ನಿನ್ನೆ ಸಭೆ ನಡೆಸಿದ್ದ ಸಚಿವ ಕೃಷ್ಣ ಭೈರೇಗೌಡರು, ಕೆಲಸ ಕಾರ್ಯಗಳ ವಿಚಾರವಾಗಿ ಗರಂ ಆಗಿದ್ದರು. ಎಲಿವೇಟೆಡ್ ಕಾರಿಡಾರ್ ಆಗುತ್ತೆ, ಫ್ಲೈಓವರ್ ಬರುತ್ತೆ ಅಂತಾ ಗೊತ್ತಿದ್ದರೂ ವೈಟ್ ಟ್ಯಾಪಿಂಗ್ ಮಾಡೋದೇಕೆ, ಆಮೇಲೆ ಫ್ಲೈಓವರ್ ಕಾರಣಕ್ಕೆ ಮತ್ತೆ ವೈಟ್ ಟ್ಯಾಪಿಂಗ್ ಕಿತ್ತಾಕೋದು ಯಾರಿಗೆ ಬಿಲ್ ಮಾಡೋಕೆ? ಎಂದು ಅಧಿಕಾರಿಗಳನ್ನು ತರಾಟೆಗೆ ಪಡೆದಿದ್ದರು. ಬೆಂಗಳೂರಿನಲ್ಲಿ ಕಾಮಗಾರಿಗಳಿಂದ ವಾಹನ ಸಂಚಾರ ಅಸ್ತವ್ಯಸ್ತ ಹಿನ್ನೆಲೆ ಟ್ರಾಫಿಕ್‌ಜಾಮ್‌ ಆಗದಂತೆ ಕಾಮಗಾರಿಗಳನ್ನು ನಡೆಸಲು ಸೂಚನೆ ನೀಡಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:37 pm, Tue, 23 June 26

Follow Us
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ