
ಬೆಂಗಳೂರು, ಜೂನ್ 23: ಕೃಷ್ಣ ಭೈರೇಗೌಡರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇಲಾಖೆಯ ಕಾರ್ಯಗಳಿಗೆ ಚುರುಕು ಮುಟ್ಟಿಸಿದ್ದು, ಮೇಲಿಂದ ಮೇಲೆ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಜಿಬಿಎ, ಬಿಎಂಆರ್ಸಿಎಲ್ ಮತ್ತು ಬಿ-ಸ್ಮೈಲ್ ಸಭೆಗಳಲ್ಲಿ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ವಿಚಾರ ಭಾರಿ ಸುದ್ದಿಯಾಗಿತ್ತು. ಈ ನಡುವೆ ಸಮಯ ಉಳಿತಾಯ ಮಾಡುವ ನಿಟ್ಟಿನಲ್ಲಿ ತಂತ್ರಜ್ಞಾನದ ನೆರವಿನಿಂದ ಕಾರಿನಲ್ಲಿ ಸಂಚಾರದ ಸಮಯದಲ್ಲೂ ವಿಡಿಯೋ ಕಾನ್ಫರೆನ್ಸ್ ಮೂಲಕ ಸಚಿವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
Catching up on time thanks to tech ! My first mobile meeting with UD Additional Chief Secretary, #GBA Chief Commissioner, Special Commissioner, Zone Commissioners, Chief Engineers, Executive Engineers, Assistant Executive Engineers, and Assistant Engineers via video conference.… pic.twitter.com/qDKSjFsFJI
— Krishna Byre Gowda (@krishnabgowda) June 23, 2026
ಆಡಳಿತಾತ್ಮಕ ಕಾರ್ಯಗಳ ಕುರಿತು ಪ್ರಯಾಣದ ವೇಳೆಯೇ ಅಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಕೃಷ್ಣ ಭೈರೇಗೌಡರು ಮೀಟಿಂಗ್ ನಡೆಸಿದ್ದು, ತಂತ್ರಜ್ಞಾನ ಬಳಸಿ ಆಡಳಿತಕ್ಕೆ ವೇಗ ನೀಡುವ ಸಂದೇಶ ನೀಡಿದ್ದಾರೆ. ಸಚಿವರು ನಡೆಸಿರುವ ಈ ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತರು, ವಿಶೇಷ ಆಯುಕ್ತರು, ಯುಡಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ವಲಯ ಆಯುಕ್ತರು, ಮುಖ್ಯ ಎಂಜಿನಿಯರ್ ಮತ್ತು ಕಾರ್ಯನಿರ್ವಾಹಕ ಎಂಜಿನಿಯರ್ಗಳು ಭಾಗಿಯಾಗಿದ್ದರು.
ಇದನ್ನೂ ಓದಿ: ಫ್ಲೈಓವರ್ ಬರುತ್ತೆ ಅಂತಾ ಗೊತ್ತಿದ್ರೂ ವೈಟ್ ಟ್ಯಾಪಿಂಗ್ ಮಾಡೋದೇಕೆ? ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಬೆಂಗಳೂರು ನಗರ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್(ಬಿ-ಸ್ಮೈಲ್) ಅಧಿಕಾರಿಗಳ ಜೊತೆ ನಿನ್ನೆ ಸಭೆ ನಡೆಸಿದ್ದ ಸಚಿವ ಕೃಷ್ಣ ಭೈರೇಗೌಡರು, ಕೆಲಸ ಕಾರ್ಯಗಳ ವಿಚಾರವಾಗಿ ಗರಂ ಆಗಿದ್ದರು. ಎಲಿವೇಟೆಡ್ ಕಾರಿಡಾರ್ ಆಗುತ್ತೆ, ಫ್ಲೈಓವರ್ ಬರುತ್ತೆ ಅಂತಾ ಗೊತ್ತಿದ್ದರೂ ವೈಟ್ ಟ್ಯಾಪಿಂಗ್ ಮಾಡೋದೇಕೆ, ಆಮೇಲೆ ಫ್ಲೈಓವರ್ ಕಾರಣಕ್ಕೆ ಮತ್ತೆ ವೈಟ್ ಟ್ಯಾಪಿಂಗ್ ಕಿತ್ತಾಕೋದು ಯಾರಿಗೆ ಬಿಲ್ ಮಾಡೋಕೆ? ಎಂದು ಅಧಿಕಾರಿಗಳನ್ನು ತರಾಟೆಗೆ ಪಡೆದಿದ್ದರು. ಬೆಂಗಳೂರಿನಲ್ಲಿ ಕಾಮಗಾರಿಗಳಿಂದ ವಾಹನ ಸಂಚಾರ ಅಸ್ತವ್ಯಸ್ತ ಹಿನ್ನೆಲೆ ಟ್ರಾಫಿಕ್‌ಜಾಮ್ ಆಗದಂತೆ ಕಾಮಗಾರಿಗಳನ್ನು ನಡೆಸಲು ಸೂಚನೆ ನೀಡಿದ್ದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:37 pm, Tue, 23 June 26