AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕನ ಸಾವಿಗೆ ಕಾರಣವಾಯ್ತಾ ವೆಬ್ ಸಿರೀಸ್? ಪೊಲೀಸ್​ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲು

ಬೆಂಗಳೂರಿನ ಸಿಕೆ ಅಚ್ಚುಕಟ್ಟುವಿನಲ್ಲಿ 7ನೇ ತರಗತಿ‌ ಬಾಲಕ ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಆದರೆ ಆತ ಏಕೆ ಆತ್ಮಹತ್ಯೆ ಮಾಡಿಕೊಂಡವೆಂಬುದು ನಿಗೂಢವಾಗಿತ್ತು. ಸದ್ಯ ಈ ಬಗ್ಗೆ ಪೊಲೀಸರು ಸ್ಫೋಟಕ ವಿಚಾರ ಬಯಲು ಮಾಡಿದ್ದಾರೆ. ಜಪಾನೀಸ್ ಭಾಷೆಯ ವೆಬ್ ಸಿರೀಸ್ ಹುಚ್ಚಿನಿಂದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬಾಲಕನ ಸಾವಿಗೆ ಕಾರಣವಾಯ್ತಾ ವೆಬ್ ಸಿರೀಸ್? ಪೊಲೀಸ್​ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲು
ಮೃತ ಗಾಂಧಾರ್​
ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 08, 2025 | 12:42 PM

Share

ಬೆಂಗಳೂರು, ಆಗಸ್ಟ್​ 08: ಇತ್ತೀಚೆಗೆ ನಗರದ ಸಿಕೆ ಅಚ್ಚುಕಟ್ಟುವಿನಲ್ಲಿ 7ನೇ ತರಗತಿ‌ ಬಾಲಕನ ಆತ್ಮಹತ್ಯೆ (death) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಸ್ಫೋಟಕ ವಿಚಾರವೊಂದು ಬೆಳಕಿಗೆ ಬಂದಿದೆ. ಜಪಾನೀಸ್ ಭಾಷೆಯ ವೆಬ್ ಸಿರೀಸ್ (Web series) ಹುಚ್ಚಿನಿಂದ ಬಾಲಕ ಆತ್ಮಹತ್ಯೆ ಮಾಡುಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಈ ಬಗ್ಗೆ ಸಿ.ಕೆ ಅಚ್ಚುಕಟ್ಟು ಪೊಲೀಸರಿಂದ ತನಿಖೆ ಮುಂದುವರಿದಿದೆ.

ಜಾನಪದ ಕಲಾವಿದರಾಗಿರುವ ಗಣೇಶ್ ಪ್ರಸಾದ್ ಮತ್ತು ಸವಿತಾರ ಎರಡನೇ ಪುತ್ರ ಗಾಂಧರ್​​ (14 ವರ್ಷ) ಆ. 04ರಂದು ಡೆತ್​​ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಮೊದಲಿಗೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿರಲಿಲ್ಲ. ಆದರೆ ಇದೀಗ ಸಿ.ಕೆ ಅಚ್ಚುಕಟ್ಟು ಪೊಲೀಸ ಪ್ರಾಥಮಿಕ ತನಿಖೆ ವೇಳೆ ಬಾಲಕನ ಸಾವಿಗೆ ಜಪಾನೀಸ್ ವೆಬ್ ಸಿರೀಸ್ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಏಕೆಂದರೆ ಆತನ ರೂಮ್​ನಲ್ಲಿ ವೆಬ್ ಸಿರೀಸ್​ ಪಾತ್ರದ ಚಿತ್ರ ಬರೆದಿದ್ದ.

ಬಾಲಕನ ಸಾವಿಗೆ ಕಾರಣವಾಯ್ತಾ ವೆಬ್ ಸಿರೀಸ್?

ಗಾಂಧಾರ್​, ಜಪಾನೀಸ್ ಭಾಷೆಯ ‘ಡೆತ್​​ನೋಟ್’ (Death Note) ಎಂಬ ವೆಬ್ ಸಿರೀಸ್ ನೋಡುತ್ತಿದ್ದ. ಇದರಿಂದ ಪ್ರೇರಣೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ‌ ವ್ಯಕ್ತವಾಗಿದೆ. ಪೊಲೀಸರ ತನಿಖೆ ವೇಳೆ ಈ ವಿಚಾರ ಬಯಲಾಗಿದೆ. ಸದ್ಯ ಪೊಲೀಸರು ತನಿಖೆ ಮುಂದುವರೆಸಿದ್ದು, ಬಾಲಕ ಬಳಸುತ್ತಿದ್ದ ಮೊಬೈಲ್ ಮತ್ತು ಪೋಷಕರನ್ನ ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಪ್ರಕರಣ ಹಿನ್ನಲೆ

ಬಾಲಕನ ತಾಯಿ ಸವಿತಾ ಕಾರ್ಯಕ್ರಮ ನಿಮಿತ್ತ ಆಸ್ಟ್ರೇಲಿಯಾಗೆ ತೆರಳಿದ್ದರು. ತಂದೆ, ಅಣ್ಣನ ಜತೆ ಚೆನ್ನಾಗಿಯೇ ಇದ್ದ ಗಾಂಧಾರ್​, ರಾತ್ರಿ ಅಪ್ಪ, ಅಣ್ಣ ಜತೆ ಊಟ ಮಾಡಿ ರೂಮ್​​ನಲ್ಲಿ ಮಲಗಿದ್ದಾನೆ. ಬೆಳಗ್ಗೆ 5.30ಕ್ಕೆ ತಂದೆ ಎದ್ದಿದ್ದು, ಶ್ವಾನವನ್ನ ವಾಕಿಂಗ್​ಗೆ ಕರೆದೊಯ್ಯಲು ರೂಮ್​​ಗೆ ಬಂದಿದ್ದಾರೆ. ಆಗ ಘನಘೋರವೇ ಕಂಡಿದೆ.

ಇದನ್ನೂ ಓದಿ: ‘ನನ್ನನ್ನು ಕ್ಷಮಿಸು’: ಡೆತ್​ನೋಟ್ ಬರೆದಿಟ್ಟು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಗಿಟಾರ್ ಸಿಕ್ಕಿಸುವ ಹೋಲ್ಡರ್​ಗೆ ಟವಲ್​​ನಿಂದ ನೇಣು ಬಿಗಿದುಕೊಂಡು ಗಾಂಧಾರ್​ ಆತ್ಮಹತ್ಯೆ ಮಾಡಿಕೊಂಡಿದ್ದ. ಗಾಂಧಾರ್​ ಡೆತ್​ನೋಟ್ ಕೂಡ ಬರೆದಿದ್ದು, ಹೆತ್ತವರ ಬಳಿ ಕ್ಷಮೆ ಕೇಳಿದ್ದ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು