AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರದಲ್ಲಿ ಹೆಚ್ಚಿದ ಡಿಜಿಟಲ್ ಅರೆಸ್ಟ್ ಸ್ಕ್ಯಾಮ್; ನಿವೃತ್ತ ಸಂಶೋಧಕನಿಗೆ 5 ಕೋಟಿ ರೂ. ವಂಚನೆ!

ಬೆಂಗಳೂರಿನಲ್ಲಿ 'ಡಿಜಿಟಲ್ ಅರೆಸ್ಟ್' ಹೆಸರಿನ ಸೈಬರ್ ವಂಚನೆ ಹೆಚ್ಚುತ್ತಿದ್ದು, 2 ದಿನಗಳ ಹಿಂದೆಯಷ್ಟೇ ವೃದ್ಧ ಉದ್ಯಮಿಯೊಬ್ಬರು 15 ಕೋಟಿ ರೂ. ಕಳೆದುಕೊಂಡ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಸೈಬರ್ ವಂಚನೆಗೆ 94 ವರ್ಷದ ನಿವೃತ್ತ ಸಂಶೋಧಕರೊಬ್ಬರು 5 ಕೋಟಿ ರೂ. ಕಳೆದುಕೊಂಡಿದ್ದಾರೆ. ಮಾನವ ಕಳ್ಳಸಾಗಣೆ ಪ್ರಕರಣದ ಬೆದರಿಕೆ ಹಾಗೂ ನಕಲಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಈ ವಂಚನೆ ನಡೆಸಲಾಗಿದೆ. ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನಗರದಲ್ಲಿ ಹೆಚ್ಚಿದ ಡಿಜಿಟಲ್ ಅರೆಸ್ಟ್ ಸ್ಕ್ಯಾಮ್; ನಿವೃತ್ತ ಸಂಶೋಧಕನಿಗೆ 5 ಕೋಟಿ ರೂ. ವಂಚನೆ!
ನಗರದಲ್ಲಿ ಮತ್ತೊಂದು ಡಿಜಿಟಲ್ ಅರೆಸ್ಟ್ ಪ್ರಕರಣ; ನಿವೃತ್ತ ಸಂಶೋಧಕನಿಗೆ 5 ಕೋಟಿ ರೂ. ವಂಚನೆ!
ರಾಚಪ್ಪಾಜಿ ನಾಯ್ಕ್
| Edited By: |

Updated on: Mar 23, 2026 | 11:23 AM

Share

ಬೆಂಗಳೂರು, ಮಾರ್ಚ್​ 23: ನಗರದಲ್ಲಿ ಡಿಜಿಟಲ್ ಅರೆಸ್ಟ್   (Digital Arrest) ಹೆಸರಿನ ವಂಚನೆ ಜಾಲ ಬೆಳೆಯುತ್ತಲೇ ಇದೆ. ಕೆಲ ದಿನಗಳ ಹಿಂದೆಯಷ್ಟೇ ವೃದ್ಧ ಉದ್ಯಮಿಗೆ ಇದೇ ರೀತಿ 15 ಕೋಟಿ ರೂ. ವಂಚಿಸಲಾಗಿತ್ತು. ಇದೀಗ ಮತ್ತೊಮ್ಮೆ ಅದೇ ರೀತಿಯ ಸೈಬರ್ ವಂಚನೆಯ ಪ್ರಕರಣ ಬೆಳಕಿಗೆ ಬಂದಿದೆ. ನಗರದ ನಿವೃತ್ತ ಸಂಶೋಧಕರೊಬ್ಬರಿಗೆ ಬರೋಬ್ಬರಿ 5 ಕೋಟಿ ರೂ. ಸೈಬರ್ ವಂಚನೆ ಮಾಡಿದ್ದು, ವೃದ್ಧನನ್ನು ಬೆದರಿಸಿ ಹಣ ವರ್ಗಾಯಿಸಿಕೊಳ್ಳಲಾಗಿದೆ ಎನ್ನಲಾಗಿದೆ.

ಮಾನವ ಕಳ್ಳಸಾಗಾಣಿಗೆ ಮಾಡಿದ್ದೀರೆಂದು ನಕಲಿ ಎಫ್​ಐಆರ್​ ಕಳಿಸಿದ ವಂಚಕರು

94 ವರ್ಷದ ನಿವೃತ್ತ ಸಂಶೋಧಕರಿಗೆ ಅಪರಿಚಿತ ವ್ಯಕ್ತಿಯೊಬ್ಬ ಲ್ಯಾಂಡ್ ಲೈನ್‌ಗೆ ಕರೆ ಮಾಡಿ, ನಿಮ್ಮ ವಿರುದ್ಧ ಬಳ್ಳಾರಿಯಲ್ಲಿ ಮಾನವ ಕಳ್ಳ ಸಾಗಾಣಿಕೆ ಪ್ರಕರಣ ದಾಖಲಾಗಿದೆ ಎಂದು ಹೇಳಿ ಬೆದರಿಕೆ ಹಾಕಿದ್ದಾನೆ. ನಂತರ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡ ಮತ್ತೊಬ್ಬ ವ್ಯಕ್ತಿ ‘ಸಂದೀಪ್ ರಾವ್’ ಎಂಬ ಹೆಸರಿನಲ್ಲಿ ಕರೆ ಮಾಡಿ, ಆಧಾರ್ ಕಾರ್ಡ್ ವಿವರಗಳನ್ನು ವಾಟ್ಸಪ್ ಮೂಲಕ ಪಡೆದಿದ್ದಾನೆ. ಬಳಿಕ ನಕಲಿ ಎಫ್‌ಐಆರ್ ಕಳುಹಿಸಿ, ಸಿಬಿಐ ಅಧಿಕಾರಿಗಳಂತೆ ವೇಷ ಹಾಕಿಕೊಂಡು ವಿಡಿಯೋ ಕಾಲ್ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ವೃದ್ಧ ಆರೋಪಿಸಿದ್ದಾರೆ.

ಇದನ್ನೂ ಓದಿ ಡಿಜಿಟಲ್ ಅರೆಸ್ಟ್ ಎಂದು ಯಾಮಾರಿಸಿ ವೃದ್ಧ ಉದ್ಯಮಿಯ 15 ಕೋಟಿ ರೂ. ಎಗರಿಸಿದ್ರು!

ಕೇಸ್ ಕೈ ಬಿಡಲು ಹಣ ನೀಡಬೇಕು ಎಂದು ಒತ್ತಾಯಿಸಿದ ಆರೋಪಿಗಳು, ಜನವರಿ 17ರಿಂದ ಫೆಬ್ರವರಿ 23ರವರೆಗೆ ಹಂತ ಹಂತವಾಗಿ ಒಟ್ಟು 4.91 ಕೋಟಿ ರೂಪಾಯಿಯನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ಇನ್ನಷ್ಟು ಹಣ ಕೇಳಿದಾಗ ಅನುಮಾನಗೊಂಡ ವೃದ್ಧ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಈ ಸಂಬಂಧ ಸೆಂಟ್ರಲ್ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು