ಬೆಂಗಳೂರಿನಲ್ಲಿ ಬಾಂಗ್ಲಾದೇಶಿ ದಂಪತಿ ಮೇಲೆ ಹಲ್ಲೆ: ವೈದ್ಯನ ಬಂಧನ

ಬೆಂಗಳೂರಿನ ಬೆಳ್ಳಂದೂರಿನಲ್ಲಿ ವಾಸವಾಗಿದ್ದ ಬಾಂಗ್ಲಾದೇಶಿ ದಂಪತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸ್ಥಳೀಯ ಸಾಯಿ ಕ್ಲಿನಿಕ್ ವೈದ್ಯ ಡಾ. ನಾಗೇಂದ್ರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ವೈಟ್‌ಫೀಲ್ಡ್ ಭಾಗದಲ್ಲಿ ಅಕ್ರಮ ವಲಸಿಗರಿದ್ದರೆ ಕಾನೂನು ಕೈಗೆತ್ತಿಕೊಳ್ಳುವ ಬದಲು ಪೊಲೀಸರಿಗೆ ಮಾಹಿತಿ ನೀಡಬೇಕಿತ್ತು ಎಂದು ಬೆಳ್ಳಂದೂರು ಪೊಲೀಸರು ತಿಳಿಸಿದ್ದು, ಸದ್ಯ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಬಾಂಗ್ಲಾದೇಶಿ ದಂಪತಿ ಮೇಲೆ ಹಲ್ಲೆ: ವೈದ್ಯನ ಬಂಧನ
ಸಾಂದರ್ಭಿಕ ಚಿತ್ರ
Image Credit source: gettyimages.com

Updated on: Jul 26, 2026 | 1:47 PM

ಮುಖ್ಯಾಂಶಗಳು

  • ಬಾಂಗ್ಲಾದೇಶಿ ದಂಪತಿಯ ಮೇಲೆ ಹಲ್ಲೆ ನಡೆಸಿದ ಬೆಂಗಾಳೂರು ವೈದ್ಯನ ಬಂಧನ.
  • ಪೌರತ್ವದ ವಿಷಯವಾಗಿ ಗಲಾಟೆ ತೆಗೆದು ಹಲ್ಲೆ ನಡೆಸಿದ ಡಾ. ನಾಗೇಂದ್ರ.
  • ಕಾನೂನು ಕೈಗೆತ್ತಿಕೊಳ್ಳದೆ ಪೊಲೀಸರಿಗೆ ದೂರು ನೀಡಬೇಕಿತ್ತೆಂದು ತಿಳಿಸಿದ ತನಿಖಾಧಿಕಾರಿಗಳು.

ಬೆಂಗಳೂರು, ಜುಲೈ 26: ಬೆಳ್ಳಂದೂರಿನಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶಿ ದಂಪತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸ್ಥಳೀಯ ವೈದ್ಯರೊಬ್ಬರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಸಾಯಿ ಕ್ಲಿನಿಕ್‌ನ ಡಾ. ನಾಗೇಂದ್ರ ಬಂಧಿತ ವೈದ್ಯ. ವೈಟ್ ಫೀಲ್ಡ್ ಸಮೀಪದ ಬೆಟ್ಟದಾಸಪುರದಲ್ಲಿ ವಾಸವಾಗಿರುವ ಬಾಂಗ್ಲಾದೇಶ ಮೂಲದ ನಸ್ರೀನಾ ಬಿಲಾಲ್ (23) ಎಂಬ ಮಹಿಳೆ ನೀಡಿದ ದೂರಿನನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ನಡೆದಿದ್ದೇನು?

ನಸ್ರೀನಾ ಬಿಲಾಲ್ ಹಾಗೂ ಅವರ ಪತಿ ಮಹಮ್ಮದ್ ಬಿಲಾಲ್ (ಚಾಲಕ) ಅವರು ಬಾಂಗ್ಲಾದೇಶದ ನಿವಾಸಿಗಳು ಎಂಬ ಕಾರಣಕ್ಕೆ ಡಾ. ನಾಗೇಂದ್ರ ಅವರು ದಂಪತಿಯ ಪೌರತ್ವವನ್ನು ಪ್ರಶ್ನಿಸಿ ಜಗಳ ತೆಗೆದಿದ್ದಾರೆ. ಮಾತಿಗೆ ಮಾತು ಬೆಳೆದು ಆಕ್ರೋಶಗೊಂಡ ವೈದ್ಯ ನಾಗೇಂದ್ರ ದಂಪತಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೂರಿನ ಆಧಾರದ ಮೇಲೆ ಬೆಳ್ಳಂದೂರು ಪೊಲೀಸರು ಡಾ. ನಾಗೇಂದ್ರ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಅಧಿಕಾರಿಗಳು ಹೇಳಿದ್ದೇನು?

ಸಂತ್ರಸ್ತರು ಬಾಂಗ್ಲಾದೇಶಿ ಮೂಲದವರಾಗಿದ್ದು, ಪ್ರದೇಶದಲ್ಲಿ ಅಕ್ರಮ ವಲಸಿಗರು ಹೆಚ್ಚಾಗಿದ್ದಾರೆಂಬ ಭಾವೋದ್ವೇಗದಿಂದ ವೈದ್ಯರು ಈ ರೀತಿ ವರ್ತಿಸಿದ್ದಾರೆ ಎಂದು ತಿಳಿದುಬಂದಿದೆ. “ದಂಪತಿ ಬಾಂಗ್ಲಾದೇಶದವರಾಗಿದ್ದರೂ ಅವರ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ, ವೈದ್ಯರು ಕಾನೂನನ್ನು ಕೈಗೆ ತೆಗೆದುಕೊಳ್ಳುವ ಬದಲು ನಮಗೆ ಮಾಹಿತಿ ನೀಡಬೇಕಿತ್ತು” ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಈ ದಂಪತಿಯ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Loading...
Unable to load recommendations.
Follow Us