ಸೈಕಲ್ ಓಡಿಸುತ್ತಿದ್ದ ಬಾಲಕನಿಗೆ ಸಾಕು ನಾಯಿ ಕಡಿತ; ನಾಯಿ ಮಾಲೀಕರ ಮೇಲೆ ಎಫ್ಐಆರ್!

ಬೆಂಗಳೂರಿನಲ್ಲಿ ನಾಯಿಗಳ ಹಾವಳಿ ಆತಂಕಕಾರಿ ಮಟ್ಟಕ್ಕೆ ಏರಿದೆ. ರಾಜಾಜಿನಗರದಲ್ಲಿ 11 ವರ್ಷದ ಬಾಲಕನ ಮೇಲೆ ಸಾಕು ನಾಯಿ ದಾಳಿ ನಡೆಸಿದ್ದು, ಗಂಭೀರ ಗಾಯಗಳಾಗಿವೆ. ನಾಯಿ ಮಾಲೀಕರು ಘಟನೆ ನಂತರವೂ ನಿರ್ಲಕ್ಷ್ಯ ತೋರಿ, ಚಿಕಿತ್ಸೆ ವೆಚ್ಚ ಭರಿಸಲು ನಿರಾಕರಿಸಿದ್ದಾರೆ. ಪೋಷಕರು ಎಫ್‌ಐಆರ್ ದಾಖಲಿಸಿದ್ದು, ಪೊಲೀಸರು ಮಾಲೀಕನಿಗೆ ನೋಟಿಸ್ ನೀಡಿದ್ದಾರೆ.

ಸೈಕಲ್ ಓಡಿಸುತ್ತಿದ್ದ ಬಾಲಕನಿಗೆ ಸಾಕು ನಾಯಿ ಕಡಿತ; ನಾಯಿ ಮಾಲೀಕರ ಮೇಲೆ ಎಫ್ಐಆರ್!
ಸೈಕಲ್ ಓಡಿಸುತ್ತಿದ್ದ ಬಾಲಕನಿಗೆ ಸಾಕು ನಾಯಿ ಕಡಿತ; ನಾಯಿ ಮಾಲೀಕರ ಮೇಲೆ ಎಫ್ಐಆರ್!
Edited By:

Updated on: Apr 07, 2026 | 3:10 PM

ಬೆಂಗಳೂರು, ಏಪ್ರಿಲ್ 07: ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಬೀದಿ ನಾಯಿಗಳ (Stray Dogs) ಜೊತೆಗೆ ಸಾಕು ನಾಯಿಗಳ ದಾಳಿಯೂ ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ರಾಜಾಜಿನಗರದ 1ನೇ ಬ್ಲಾಕ್‌ನಲ್ಲಿ 11 ವರ್ಷದ ಬಾಲಕನ ಮೇಲೆ ಸಾಕು ನಾಯಿ ದಾಳಿ ನಡೆಸಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಬಾಲಕ ಒದ್ದಾಡುತ್ತಿದ್ದರೂ ಕ್ಯಾರೇ ಎನ್ನದ ಮಾಲೀಕರು

ಮಾರ್ಚ್ 21ರಂದು ಬೆಳಗ್ಗೆ ಬ್ರೆಡ್ ತರಲು ಸೈಕಲ್‌ನಲ್ಲಿ ತೆರಳುತ್ತಿದ್ದ ಬಾಲಕನ ಮೇಲೆ ವಾಕ್‌ಗೆ ಕರೆತಂದ ನಾಯಿಯು ಏಕಾಏಕಿ ದಾಳಿ ಮಾಡಿ ತೊಡೆಗೆ ಕಚ್ಚಿ ಗಾಯಗೊಳಿಸಿದೆ. ಘಟನೆಯಿಂದ ಬೆಚ್ಚಿಬಿದ್ದ ಬಾಲಕ ನೋವಿನಿಂದ ಬಳಲುತ್ತಿದ್ದರೂ, ನಾಯಿ ಮಾಲೀಕರು ಯಾವುದೇ ರೀತಿಯ ಸಹಾಯ ಮಾಡದೇ ಉದಾಸೀನತೆ ತೋರಿದ್ದಾರೆ ಎಂದು ಆರೋಪಿಸಲಾಗಿದೆ. ಚಿಕಿತ್ಸೆ ವೆಚ್ಚವನ್ನು ಕುಟುಂಬಸ್ಥರೇ ಭರಿಸಿದ್ದು, ಇದರಿಂದ ಆಕ್ರೋಶಗೊಂಡ ಪೋಷಕರು ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ನಾಯಿ ಮಾಲೀಕನಿಗೆ ನೋಟಿಸ್

ಘಟನೆಯಾಗಿ 15 ದಿನಗಳು ಕಳೆದರೂ ನ್ಯಾಯ ಸಿಗದ ಹಿನ್ನೆಲೆಯಲ್ಲಿ ಪೊಲೀಸರು ಇದೀಗ ನಾಯಿ ಮಾಲೀಕನಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲು ಮುಂದಾಗಿದ್ದಾರೆ. ಬಾಲಕನ ತಾತ ವೇಣು ಮಾಧವ ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ನಗರದಲ್ಲಿ ಹೆಚ್ಚುತ್ತಿರುವ ಇಂತಹ ಘಟನೆಗಳು ಜನರಲ್ಲಿ ಭೀತಿ ಹುಟ್ಟಿಸುತ್ತಿವೆ. ಸಾಕು ಪ್ರಾಣಿಗಳನ್ನು ಹೊರಗೆ ಕರೆದುಕೊಂಡು ಹೋಗುವಾಗ ಮಾಲೀಕರು ಕಡ್ಡಾಯವಾಗಿ ಮುನ್ನೆಚ್ಚರಿಕೆ ವಹಿಸಬೇಕು, ಇಲ್ಲವಾದರೆ ಇಂತಹ ಅಪಾಯಗಳು ಮರುಕಳಿಸುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us