AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dog Bite Relief Fund: ನಾಯಿ ಕಚ್ಚಿ ಸಾವನ್ನಪ್ಪಿದವರಿಗೆ 5 ಲಕ್ಷ ರೂ.ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರಿನಲ್ಲಿ ಬೀದಿ ನಾಯಿ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದವರಿಗೆ ಕರ್ನಾಟಕ ಸರ್ಕಾರ ಪರಿಷ್ಕೃತ ಪರಿಹಾರ ಮಾರ್ಗಸೂಚಿ ಪ್ರಕಟಿಸಿದೆ. ಸಣ್ಣ ಗಾಯಗಳಿಗೆ 5,000 ರೂ., ಸಾವು ಸಂಭವಿಸಿದರೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗಾಗಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ಧನಸಹಾಯ ನೀಡಲಾಗುತ್ತದೆ. ಉತ್ತಮ ವೈದ್ಯಕೀಯ ಆರೈಕೆ ಮತ್ತು ಆರ್ಥಿಕ ನೆರವು ಒದಗಿಸುವುದು ಸರ್ಕಾರದ ಮುಖ್ಯ ಉದ್ದೇಶ.

Dog Bite Relief Fund: ನಾಯಿ ಕಚ್ಚಿ ಸಾವನ್ನಪ್ಪಿದವರಿಗೆ 5 ಲಕ್ಷ ರೂ.ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 20, 2025 | 2:17 PM

Share

ಬೆಂಗಳೂರು, ನ.20: ಬೆಂಗಳೂರು ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದ ಜನರಿಗೆ ಪರಿಹಾರ ಮಾರ್ಗಸೂಚಿಗಳನ್ನು (Bengaluru dog attack compensation) ಪರಿಷ್ಕರಿಸಿ ಕರ್ನಾಟಕ ಸರ್ಕಾರ ನವೀಕರಿಸಿದ ಆದೇಶವನ್ನು ಬಿಡುಗಡೆ ಮಾಡಿದೆ. ನಾಯಿಗಳ ದಾಳಿಯಿಂದ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆಯನ್ನು ನೀಡಲು ಹಾಗೂ ಸಾವನ್ನಪ್ಪಿದವರ ಮನೆಯ ಆರ್ಥಿಕ ಸಹಾಯಕ್ಕಾಗಿ ಈ ಪರಿಷ್ಕರಣೆ ಮಾಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿದೆ. ನಾಯಿ ಕಚ್ಚಿದ ಗಾಯ, ಮೂಗೇಟುಗಳು ಮತ್ತು ರಕ್ತಸ್ರಾವದ ಸಮಸ್ಯೆ, ಸೀಳುವಿಕೆ, ಇಂತಹ ಗಾಯಗಳು ಕಂಡು ಬಂದರೆ 5 ಸಾವಿರ ರೂ. ವರೆಗೆ ಪರಿಹಾರವನ್ನು ನೀಡಲಾಗುವುದು. 2023ರಲ್ಲಿ ನಾಯಿಗಳ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದವರಿಗೆ ವಿಶೇಷ ಯೋಜನೆಯನ್ನು ಮಾಡಲಾಗಿತ್ತು.ಇದೀಗ ಆ ಯೋಜನೆಯನ್ನೇ ಮುಂದುವರಿಸಲಾಗುವುದು. ಆದರೆ ಇದರಲ್ಲಿ ಕೆಲವೊಂದನ್ನು ಬದಲಾವಣೆ ಮಾಡಲಾಗಿದೆ. ಈ 5,000 ರೂ.ಗಳಲ್ಲಿ 3,500 ರೂ.ಗಳನ್ನು ನಗರಾಭಿವೃದ್ಧಿ ಇಲಾಖೆ ನೀಡುತ್ತದೆ. ಉಳಿದ 1,500 ರೂ. ಅನ್ನು ಆರೋಗ್ಯ ಇಲಾಖೆಯ ಅಡಿಯಲ್ಲಿ ಬರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ವರ್ಗಾಯಿಸಲಾಗುತ್ತದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ನಾಯಿ ಕಚ್ಚಿದ ವ್ಯಕ್ತಿಗೆ ತಕ್ಷಣದ ವೈದ್ಯಕೀಯ ಆರೈಕೆ ಸಿಗುವಂತೆ ನೋಡಿಕೊಳ್ಳುವುದು ಈ ನಿಧಿಯ ಉದ್ದೇಶವಾಗಿದೆ. ಪರಿಹಾರದ ಒಂದು ಭಾಗವನ್ನು ಆರೋಗ್ಯ ಟ್ರಸ್ಟ್‌ಗೆ ನೀಡಲಾಗುವುದು. ಸರ್ಕಾರವು ಆರಂಭಿಕ ಚಿಕಿತ್ಸಾ ವೆಚ್ಚವನ್ನು ಮುಂಗಡವಾಗಿ ಭರಿಸುವ ಯೋಜನೆಯನ್ನು ಕೂಡ ಹೊಂದಿದೆ. ಇದರಿಂದ ಯಾರಿಗೆ ಮುಂಗಡವಾಗಿ ಹಣ ಪಾವತಿ ಮಾಡಲು ಸಾಧ್ಯವಾಗುವುದಿಲ್ಲ, ಅವರಿಗೆ ಸಹಾಯವಾಗುತ್ತದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇದನ್ನೂ ಓದಿ: ಯಮರೂಪಿ ಬಿಎಂಟಿಸಿಗೆ ಮುಂದುವರಿದ ಬಲಿ: ಮಡಿವಾಳದಲ್ಲಿ ಬಸ್​​ ಡಿಕ್ಕಿಯಾಗಿ ವೃದ್ಧ ಸಾವು

ಇನ್ನು ಬೀದಿ ನಾಯಿ ದಾಳಿಯಿಂದ ಅಥವಾ ರೇಬೀಸ್‌ನಿಂದ ವ್ಯಕ್ತಿ ಸಾವನ್ನಪ್ಪಿದರೆ, ಅವರ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ಇದರಿಂದ ಆರ್ಥಿಕ ಒತ್ತಡವನ್ನು ಎದುರಿಸುತ್ತಿರುವ ಕುಟುಂಬಗಳಿಗೆ ಸಹಾಯವಾಗುತ್ತದೆ. ನಗರದಲ್ಲಿ ಬೀದಿ ನಾಯಿಗಳ ದಾಳಿಗೆ ಜನರಲ್ಲಿ ಆತಂಕ ಹೆಚ್ಚಾಗಿದೆ. ಅಂತಹ ಘಟನೆಗಳು ನಡೆದಾಗ ತಕ್ಷಣದ ಚಿಕಿತ್ಸೆಯನ್ನು ನೀಡಲು ಈ ಯೋಜನೆಯನ್ನು ಮಾಡಲಾಗಿದೆ. ಈ ಮೂಲಕ ನಾಯಿಗಳ ದಾಳಿಯಿಂದ ಆಗಿರುವ ಗಾಯಗಳಿಗೆ ಸರಿಯಾದ ಚಿಕಿತ್ಸೆ ನೀಡಿ, ಗುಣಮುಖ ಮಾಡುವುದು ಸರ್ಕಾರ ಉದ್ದೇಶವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ