AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಟ್ರಿಕ್​​ ವಾಹನಗಳ ಮಾರಾಟದಲ್ಲಿ ರಾಜ್ಯದ ಪೈಕಿ ಬೆಂಗಳೂರಿಗೇ ಅಗ್ರ ಸ್ಥಾನ: ಆಗಸ್ಟ್​​ನಲ್ಲಿ ಪ್ರತಿದಿನ ಸರಾಸರಿ 430 ವೆಹಿಕಲ್​​ಗಳು ರಸ್ತೆಗೆ

2026ರ ಆಗಸ್ಟ್‌ನಲ್ಲಿ ರಾಜ್ಯದಲ್ಲಿ ನೋಂದಣಿಯಾದ ಒಟ್ಟು ಎಲೆಕ್ಟ್ರಿಕ್ ವಾಹನಗಳಲ್ಲಿ ಅರ್ಧಕ್ಕಿಂತ ಹೆಚ್ಚು ಬೆಂಗಳೂರಿನಲ್ಲಿಯೇ ರಸ್ತೆಗಿಳಿದಿವೆ. ನಗರದಲ್ಲಿ ಪ್ರತಿದಿನ ಸರಾಸರಿ 430 ಹೊಸ ಇವಿ ವಾಹನಗಳು ನೋಂದಣಿಯಾಗುತ್ತಿದ್ದು, ರಾಜಧಾನಿಯ ಪ್ರಾಬಲ್ಯ ಮುಂದುವರಿದಿದೆ. ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ನೋಂದಣಿಯಾದ ಒಟ್ಟು ಎಲೆಕ್ಟ್ರಿಕ್ ವಾಹನಗಳಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಪಾಲು ಶೇ.71ರಷ್ಟಿದ್ದು, ಎಲೆಕ್ಟ್ರಿಕ್ ಕಾರುಗಳ ಪಾಲು ಶೇ.9ರಷ್ಟಿದೆ.

ಎಲೆಕ್ಟ್ರಿಕ್​​ ವಾಹನಗಳ ಮಾರಾಟದಲ್ಲಿ ರಾಜ್ಯದ ಪೈಕಿ ಬೆಂಗಳೂರಿಗೇ ಅಗ್ರ ಸ್ಥಾನ: ಆಗಸ್ಟ್​​ನಲ್ಲಿ ಪ್ರತಿದಿನ ಸರಾಸರಿ 430 ವೆಹಿಕಲ್​​ಗಳು ರಸ್ತೆಗೆ
ಸಾಂದರ್ಭಿಕ ಚಿತ್ರImage Credit source: Getty Images
ಪ್ರಸನ್ನ ಹೆಗಡೆ
|

Updated on: Sep 28, 2026 | 5:22 PM

Share

ಬೆಂಗಳೂರು, ಸೆಪ್ಟೆಂಬರ್​​ 28: 2026ರ ಆಗಸ್ಟ್‌ನಲ್ಲಿ ಪ್ರತಿದಿನ ಸುಮಾರು 2,500 ಹೊಸ ವಾಹನಗಳು ಬೆಂಗಳೂರಲ್ಲಿ ರಸ್ತೆಗಿಳಿದಿದ್ದು, ಅವುಗಳಲ್ಲಿ ಸುಮಾರು 430 ಎಲೆಕ್ಟ್ರಿಕ್ ವಾಹನಗಳು (EV) ಸೇರಿವೆ. ಸಾರಿಗೆ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಈ ತಿಂಗಳಲ್ಲಿ ಕರ್ನಾಟಕದಲ್ಲಿ ನೋಂದಣಿಯಾದ ಒಟ್ಟು ಎಲೆಕ್ಟ್ರಿಕ್ ವಾಹನಗಳ ಪೈಕಿ ಅರ್ಧದಷ್ಟು ಬೆಂಗಳೂರಿನಲ್ಲೇ ಆಗಿವೆ. ಆ ಮೂಲಕ ರಾಜ್ಯದ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಬೆಂಗಳೂರಿನ ಪ್ರಾಬಲ್ಯ ಮುಂದುವರಿದಿದೆ.

ಆಗಸ್ಟ್‌ನಲ್ಲಿ 76,508 ಹೊಸ ವಾಹನಗಳ ನೋಂದಣಿ

ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಒಟ್ಟು 76,508 ಹೊಸ ವಾಹನಗಳು ನೋಂದಣಿಯಾಗಿದ್ದು, ಅವುಗಳಲ್ಲಿ 13,389 ಎಲೆಕ್ಟ್ರಿಕ್ ವಾಹನಗಳಾಗಿವೆ. ಅಂದರೆ, ತಿಂಗಳಲ್ಲಿ ನಗರದಲ್ಲಿ ನೋಂದಣಿಯಾದ ಒಟ್ಟು ಹೊಸ ವಾಹನಗಳ ಪೈಕಿ ಶೇ.17.5ರಷ್ಟು ಎಲೆಕ್ಟ್ರಿಕ್ ವಾಹನಗಳಾಗಿವೆ. ಸರಿಸುಮಾರು ಪ್ರತಿ ಆರು ಹೊಸ ವಾಹನಗಳಲ್ಲಿ ಒಂದು ಎಲೆಕ್ಟ್ರಿಕ್ ವಾಹನವಾಗಿದೆ. ಇವುಗಳಲ್ಲಿ 9,453 ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಹಾಗೂ 1,258 ಎಲೆಕ್ಟ್ರಿಕ್ ಕಾರುಗಳು ಸೇರಿವೆ. ಅಂದರೆ, ಬೆಂಗಳೂರಿನ ರಸ್ತೆಗಳಿಗೆ ಪ್ರತಿದಿನ ಸರಾಸರಿ 300 ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಮತ್ತು 40 ಎಲೆಕ್ಟ್ರಿಕ್ ಕಾರುಗಳು ಸೇರ್ಪಡೆಯಾಗಿವೆ. ಇದರ ಜೊತೆಗೆ ಇತರ ವರ್ಗಗಳಿಗೆ ಸೇರಿದ ಸುಮಾರು 90 ಎಲೆಕ್ಟ್ರಿಕ್ ವಾಹನಗಳು ಪ್ರತಿದಿನ ನೋಂದಣಿಯಾಗಿವೆ.

LIVE TV

ಇದನ್ನೂ ಓದಿ: ಫೇಸ್‌ಬುಕ್ ಜಾಹೀರಾತು ನಂಬಿ 1.9 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಟೆಕ್ಕಿ!

ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ನೋಂದಣಿಯಾದ ಒಟ್ಟು ಎಲೆಕ್ಟ್ರಿಕ್ ವಾಹನಗಳಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಪಾಲು ಶೇ.71ರಷ್ಟಿದ್ದು, ಎಲೆಕ್ಟ್ರಿಕ್ ಕಾರುಗಳ ಪಾಲು ಶೇ.9ರಷ್ಟಿದೆ. ಕರ್ನಾಟಕದಲ್ಲಿ ಆಗಸ್ಟ್‌ನಲ್ಲಿ ಒಟ್ಟು 26,636 ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿದ್ದು, ಬೆಂಗಳೂರಿನಲ್ಲಿ 13,389 ವಾಹನಗಳು ನೋಂದಣಿಯಾಗಿವೆ. ಇದು ರಾಜ್ಯದ ಒಟ್ಟು EV ನೋಂದಣಿಗಳ ಶೇ.50.3ರಷ್ಟಾಗಿದೆ. ಬೆಂಗಳೂರಿನ ಒಟ್ಟಾರೆ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯಲ್ಲೂ ನಗರದ ಪ್ರಾಬಲ್ಯ ಮುಂದುವರಿದಿದೆ. ಆಗಸ್ಟ್ 30ರ ವೇಳೆಗೆ ಬೆಂಗಳೂರಿನಲ್ಲಿ 4.9 ಲಕ್ಷಕ್ಕೂ ಹೆಚ್ಚು ನೋಂದಾಯಿತ ಎಲೆಕ್ಟ್ರಿಕ್ ವಾಹನಗಳಿದ್ದರೆ, ಕರ್ನಾಟಕದಲ್ಲಿ ಈ ಸಂಖ್ಯೆ ಸುಮಾರು 8.9 ಲಕ್ಷದಷ್ಟಿತ್ತು. ಅಂದರೆ, ರಾಜ್ಯದ ಒಟ್ಟು ಎಲೆಕ್ಟ್ರಿಕ್ ವಾಹನಗಳ ಪೈಕಿ ಸುಮಾರು ಶೇ.56ರಷ್ಟು ಬೆಂಗಳೂರಿನಲ್ಲಿವೆ.

ಆಗಸ್ಟ್ ವೇಳೆಗೆ ಬೆಂಗಳೂರಿನಲ್ಲಿ 3.8 ಲಕ್ಷ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಮತ್ತು 46,596 ಎಲೆಕ್ಟ್ರಿಕ್ ಕಾರುಗಳಿದ್ದವು. ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳ ಪೈಕಿ 9,922 ಮೋಟಾರ್ ಕ್ಯಾಬ್‌ಗಳು, 6,855 ಪ್ರಯಾಣಿಕರ ತ್ರಿಚಕ್ರ ವಾಹನಗಳು ಹಾಗೂ 9,876 ಸರಕು ಸಾಗಣೆ ತ್ರಿಚಕ್ರ ವಾಹನಗಳು ಸೇರಿವೆ. ನಗರದ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಒಟ್ಟು 2,009 ಎಲೆಕ್ಟ್ರಿಕ್ ಬಸ್‌ಗಳು ನೋಂದಣಿಯಾಗಿವೆ. 2025-26ರಲ್ಲಿ ವಾರ್ಷಿಕ ಎಲೆಕ್ಟ್ರಿಕ್ ವಾಹನ ನೋಂದಣಿಯ ಸಂಖ್ಯೆ 2019-20ರ ಮಟ್ಟಕ್ಕಿಂತ 32 ಪಟ್ಟು ಹೆಚ್ಚಾಗಿದೆ ಎಂದು ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ