ಬೆಂಗಳೂರಿನಲ್ಲಿದ್ದಾರೆ 97 ಲಕ್ಷ ಮತದಾರರು: ಮತದಾರರ ಕರಡು ಪಟ್ಟಿ ಪ್ರಕಟ, ಆಕ್ಷೇಪಣೆ ಸಲ್ಲಿಸಲು ಡಿ. 9ರ ವರೆಗೆ ಅವಕಾಶ

Bengaluru draft electoral roll released: ಕರಡು ಪಟ್ಟಿಯಲ್ಲಿ ಹೆಸರು ಸೇರಿದಂತೆ ಏನೇ ತಪ್ಪಿದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಲು ಡಿಸೆಂಬರ್ 9 ರವರೆಗೆ ಅವಕಾಶ ನೀಡಲಾಗಿದೆ. ಡಿಸೆಂಬರ್ 26 ರ ಒಳಗೆ ಆಕ್ಷೇಪಣೆಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. 2024ರ ವರ್ಷ ಜನವರಿ 5 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.

ಬೆಂಗಳೂರಿನಲ್ಲಿದ್ದಾರೆ 97 ಲಕ್ಷ ಮತದಾರರು: ಮತದಾರರ ಕರಡು ಪಟ್ಟಿ ಪ್ರಕಟ, ಆಕ್ಷೇಪಣೆ ಸಲ್ಲಿಸಲು ಡಿ. 9ರ ವರೆಗೆ ಅವಕಾಶ
ಬಿಬಿಎಂಪಿ ಅಧಿಕಾರಿಗಳು ಬೆಂಗಳೂರಿನಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದರು
Follow us
Ganapathi Sharma
|

Updated on:Oct 27, 2023 | 5:58 PM

ಬೆಂಗಳೂರು, ಅಕ್ಟೋಬರ್ 27: ಭಾರತ ಚುನಾವಣಾ ಆಯೋಗದ (ECI) ಸೂಚನೆ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವಿಶೇಷ ಆಯುಕ್ತ ಆರ್ ರಾಮಚಂದ್ರನ್ ಅವರು ಶುಕ್ರವಾರ ಬೆಂಗಳೂರಿನ ಮತದಾರರ ಪಟ್ಟಿಯ ಕರಡು ಪ್ರತಿಯನ್ನು (Bengaluru draft electoral roll) ಬಿಡುಗಡೆ ಮಾಡಿದರು. ಅದರಂತೆ ನಗರದಲ್ಲಿ ಒಟ್ಟು 97,90,499 ಮತದಾರರಿದ್ದಾರೆ. ಈ ವರ್ಷದ ಜನವರಿ 1 ರಂದು ಒಟ್ಟು ಮತದಾರರ ಸಂಖ್ಯೆ 92,09,917 ಆಗಿದ್ದು, ಈಗ 5,80,582 ಮತದಾರರು ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಬೂತ್ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯನ್ನು ಪರಿಶೀಲಿಸಿದ ನಂತರ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ 97,90,499 ಮತದಾರರ ಪೈಕಿ 50,61,883 ಪುರುಷ ಮತದಾರರು, 47,26,856 ಮಹಿಳೆಯರು ಮತ್ತು 1760 ಇತರರು ಇದ್ದಾರೆ. ಮತದಾರರ ಸಂಖ್ಯೆ ಹೆಚ್ಚಳದಿಂದಾಗಿ ನಗರದ ಮತಗಟ್ಟೆಗಳ ಸಂಖ್ಯೆ 8,615 ರಿಂದ 8,982 ಕ್ಕೆ ಹೆಚ್ಚಳಗೊಂಡಿವೆ.

2,182 ಮತದಾರರು ಮೃತಪಟ್ಟಿದ್ದು ಅವರನ್ನು ಪಟ್ಟಿಯಿಂದ ತೆರವುಗೊಳಿಸಲಾಗಿದೆ. ಇನ್ನು 82,452 ಜನರು ತಮ್ಮ ಪ್ರಸ್ತುತ ವಿಳಾಸದಿಂದ ಬೇರೆ ಸ್ಥಳಗಳಿಗೆ ಸ್ಥಳಾಂತರಗೊಂಡಿದ್ದು, ಹೀಗಾಗಿ ಹೆಸರನ್ನು ಅಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತದಾರರ ಪಟ್ಟಿಯಿಂದ ಒಟ್ಟು 86,062 ಹೆಸರುಗಳನ್ನು ಅಳಿಸಲಾಗಿದೆ.

ಬಿಬಿಎಂಪಿ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಬೆಂಗಳೂರು ನಗರ ಅತಿ ಹೆಚ್ಚು ಅಂದರೆ 37,19,723 ಮತದಾರರನ್ನು ಹೊಂದಿದ್ದರೆ, ಬಿಬಿಎಂಪಿ ಉತ್ತರದಲ್ಲಿ 22,09,318, ಬಿಬಿಎಂಪಿ ದಕ್ಷಿಣದಲ್ಲಿ 20,56,109 ಮತ್ತು ಬಿಬಿಎಂಪಿ ಸೆಂಟ್ರಲ್ 18,05,349 ಮತದಾರರನ್ನು ಹೊಂದಿದೆ.

ಇದನ್ನೂ ಓದಿ: ಸಿಲಿಕಾನ್ ಸಿಟಿ ದೇವಸ್ಥಾನಗಳಿಗೂ ತಟ್ಟಿದ ಚಂದ್ರ ಗ್ರಹಣ ಎಫೆಕ್ಟ್: ನಾಳೆ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

ಕರಡು ಪಟ್ಟಿಯಲ್ಲಿ ಹೆಸರು ಸೇರಿದಂತೆ ಏನೇ ತಪ್ಪಿದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಲು ಡಿಸೆಂಬರ್ 9 ರವರೆಗೆ ಅವಕಾಶ ನೀಡಲಾಗಿದೆ. ಡಿಸೆಂಬರ್ 26 ರ ಒಳಗೆ ಆಕ್ಷೇಪಣೆಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. 2024ರ ವರ್ಷ ಜನವರಿ 5 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಬಿಬಿಎಂಪಿ ಚುನಾವಣೆಗೂ ಇದೇ ಮತದಾರರ ಪಟ್ಟಿಯನ್ನು ಬಳಸಿಕೊಳ್ಳುವ ನಿರೀಕ್ಷೆಯಿದೆ.

ರಾಜ್ಯದಲ್ಲಿ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಕರಡು ಮತದಾರರ ಪಟ್ಟಿಯಲ್ಲಿ 5,33,77,162 ಮಂದಿ ಇದ್ದಾರೆ. ಇವರಲ್ಲಿ 2,68,02,838 ಪುರುಷರು ಮತ್ತು 2,65,69,428 ಮಹಿಳೆಯರು ಮತ್ತು 4,896 ಇತರರಾಗಿದ್ದಾರೆ.

ಪಟ್ಟಿ ಪರಿಷ್ಕರಣೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳಿಗೆ ಚುನಾವಣಾಧಿಕಾರಿ ಮನವಿ

ರಾಜಕೀಯ ಪಕ್ಷಗಳು ತಮ್ಮ ಕಾರ್ಯಕರ್ತರು ಹಾಗೂ ಮತಗಟ್ಟೆ ಮಟ್ಟದ ಪಕ್ಷದ ಏಜೆಂಟರುಗಳ ಮುಖಾಂತರ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದರು. ಶುಕ್ರವಾರ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಡೆದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ರಾಜಕೀಯ ಪಕ್ಷಗಳ ಪ್ರತಿನಿದಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಹೆಚ್ಚಿನ ಕಾರ್ಯಕರ್ತರನ್ನು ಹೊಂದಿರುತ್ತಾರೆ, ನಿಮ್ಮ ಸಹಕಾರದಿಂದ ಅತ್ಯುತ್ತಮ ಪಟ್ಟಿಯನ್ನು ತಯಾರಿಸಲು ಸಹಕಾರವಾಗುತ್ತದೆ ಎಂದರು.

ಮುಂಬರುವ ಲೋಕಸಭೆ ಚುನಾವಣೆ-2024 ರ ಪೂರ್ವಭಾವಿ ತಯಾರಿ ಆರಂಭವಾಗಿದ್ದು, ಇಂದು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮತದಾರರು ತಮ್ಮ ಗುರುತಿನ ಚೀಟಿಯಲ್ಲಿ ತಪ್ಪುಗಳಿದ್ದಲ್ಲಿ ಇಂದಿನಿಂದ ಡಿಸೆಂಬರ್ 9 ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು 05 ಜನವರಿ 2024 ರಂದು ಪ್ರಕಟಿಸಲಾಗುವುದು.

ಆಕ್ಷೇಪಣೆ ಸಲ್ಲಿಸುವುದು ಹೇಗೆ?

ಕರಡು ಮತದಾರರ ಪಟ್ಟಿಯನ್ನು ಪಿಡಿಎಫ್ ಮಾದರಿಯಲ್ಲಿ https://ceo.karnataka.gov.in/en ರಲ್ಲಿ ಪ್ರಕಟಿಸಲಾಗಿದ್ದು, ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಕಾರ್ಯಕರ್ತರು ತಮ್ಮ ಹೆಸರುಗಳನ್ನು ಪರಿಶೀಲಿಸಕೊಳ್ಳಬಹುದಾಗಿದೆ, ತಪ್ಪುಗಳಿದ್ದಲ್ಲಿ ಅಥವಾ ಹೆಸರು ಬಿಟ್ಟು ಹೋಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ಸರಿಪಡಿಸಬಹುದಾಗಿದೆ.

ಈ ಹಿಂದೆ ವರ್ಷಕ್ಕೊಮ್ಮೆ ಮಾತ್ರ 18 ವರ್ಷ ತುಂಬಿದ ಯುವ ಮತದಾರರಿಗೆ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿತ್ತು. ಆದರೆ, ಕಳೆದ ವರ್ಷದಿಂದ ವರ್ಷದಲ್ಲಿ ನಾಲ್ಕು ಅವಕಾಶಗಳನ್ನು ನೀಡಲಾಗಿದೆ. ಯುವ ಹಾಗೂ ಹೊಸ ಮತದಾರರ ನೋಂದಣಿಗಾಗಿ ನವೆಂಬರ್ 18 ಮತ್ತು 19 ಹಾಗೂ ಡಿಸೆಂಬರ್ 02 ಮತ್ತು 03 ರಂದು ಶನಿವಾರ ಹಾಗೂ ಭಾನುವಾರಗಳಂದು ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ತಳಮಟ್ಟದಲ್ಲಿ ಮತದಾರರ ಮಾಹಿತಿಯನ್ನು ರಾಜಕೀಯ ಪಕ್ಷಗಳ ಪ್ರತಿನಿದಿಗಳು ಚೆನ್ನಾಗಿ ಅರಿತಿರುತ್ತಾರೆ, ತಮ್ಮ ತಮ್ಮ ವ್ಯಾಪ್ತಿಯಲ್ಲಿನ ಮತದಾರರ ಗುರುತಿನ ಚೀಟಿಗಳಲ್ಲಿ ಸಮಸ್ಯೆಗಳಿದ್ದಲ್ಲಿ, ವಿಳಾಸ ಬದಲಾದಲ್ಲಿ ಅಥವಾ ಹೊಸದಾಗಿ ಸೇರಿಸುವುದು ಸೇರಿದಂತೆ ಮತದಾರರಲ್ಲಿ ಜಾಗೃತಿ ಮೂಡಿಸಬೇಕು. ಈಗ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡಲ್ಲಿ ಚುನಾವಣಾ ಸಮಯದಲ್ಲಿ ಸಮಸ್ಯೆಗಳು ಉದ್ಭವಿಸುವುದಿಲ್ಲ, ಈ ಸಮಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು.

ಪ್ರತಿ ವಿಧಾನಸಭಾ ಕ್ಷೇತ್ರದ ಅಧಿಸೂಚಿತ ನೋಂದಣಾಧಿಕಾರಿ / ಸಹಾಯಕ ನೋಂದಣಾಧಿಕಾರಿಗೆ ನಿಗದಿತ ನಮೂನೆಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ.

1. ನಮೂನೆ 6: ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಜಿ. 2. ನಮೂನೆ 6A: ಸಾಗರೋತ್ತರ ಭಾರತೀಯ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ಅರ್ಜಿ. 3. ನಮೂನೆ 6B: ಮತದಾರರ ಪಟ್ಟಿಯಲ್ಲಿನ ವಿವರಗಳ ದೃಢೀಕರಣದ ಉದ್ದೇಶಕ್ಕಾಗಿ ಆಧಾರ್ ಸಂಖ್ಯೆಯ ಅಥವಾ ಇತರೆ 11 ದಾಖಲೆಗಳ ಮಾಹಿತಿ ಪತ್ರ. 4. ನಮೂನೆ 7: ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಲ್ಲಿ ಪ್ರಸ್ತಾಪಿತ ಸೇರ್ಪಡೆಗೆ ಆಕ್ಷೇಪಣೆಗಾಗಿ ಹೆಸರು ಅಳಿಸುವಿಕೆಗೆ ಅರ್ಜಿ ನಮೂನೆ 5. ನಮೂನೆ 8: ವಿಳಾಸವನ್ನು ಬದಲಾಯಿಸಲು/ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿ/ಬದಲಿ ಮತದಾರರ ಗುರುತಿನ ಚೀಟಿಗಾಗಿ/ವಿಕಲ ಚೇತನ ಮತದಾರರನ್ನುಗುರುತು ಮಾಡಲು ಅರ್ಜಿ ನಮೂನೆ.

ಮೇಲಿನ ಅರ್ಜಿಗಳನ್ನು ಮತದಾರರ ಸೇವಾ ಪೋರ್ಟಲ್ (https://voters.eci.gov.in/) ಅಥವಾ ವೋಟರ್‌ ಹೆಲ್ಪ್ ಲೈನ್ ಮೊಬೈಲ್ ಅಪ್ಲಿಕೇಶನ್ ಬಳಸಿ ಆನ್‌ಲೈನ್ ಮೂಲಕ ಸಲ್ಲಿಸಬಹುದು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪತ್ರಿಕಾ ಪ್ರಕಟಣೆಗಳ ಮೂಲಕ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಯವರು ರಾಜ್ಯ ಮಟ್ಟದಲ್ಲಿ ವ್ಯಾಪಕ ಪ್ರಚಾರವನ್ನು ನೀಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಉಪ ವಿಭಾಗ/ತಾಲ್ಲೂಕು ಮಟ್ಟದಲ್ಲಿ ಮತದಾರರ ನೋಂದಣಾಧಿಕಾರಿಗಳು / ಸಹಾಯಕ ಮತದಾರರ ನೋಂದಣಾಧಿಕಾರಿಗಳು ವಿವಿಧ ಮಾಧ್ಯಮಗಳ ಮೂಲಕ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಬಗ್ಗೆ ಪ್ರಚಾರವನ್ನು ನೀಡಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಸಭೆಯಲ್ಲಿ ಭಾಗವಹಿಸಿದ್ದ ರಾಜಕೀಯ ಪಕ್ಷಗಳ ಪ್ರತಿನಿದಿಗಳು ತಮ್ಮಅಭಿಪ್ರಾಯ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿಗಳಾದ ವೆಂಕಟೇಶ್ ಕುಮಾರ್ ಹಾಗೂ ಕೂರ್ಮಾ ರಾವ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Fri, 27 October 23

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ