AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ಡ್ರಿಂಕ್ ಆ್ಯಂಡ್​​ ಡ್ರೈವ್ ಪರೀಕ್ಷೆ​: 8 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ

New Year 2024: ದಿನಗಳು ಉರುಳುತ್ತಿದ್ದು, ಹೊಸ ವರ್ಷ ಹತ್ತಿರ ಬರುತ್ತಿದೆ. ನ್ಯೂ ಇಯರ್ ಸ್ವಾಗತಕ್ಕೆ ಸಿಲಿಕಾನ್ ಸಿಟಿ ಸಜ್ಜಾಗಿದೆ. ಇತ್ತ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್​ಗೆ ಸಜ್ಜಾಗಿದೆ. ಡಿಸೆಂಬರ್ 31ರ ರಾತ್ರಿ ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳನ್ನು ಪರಿಶೀಲಿಸಲು ಪೊಲೀಸರು ಬೆಂಗಳೂರಿನಲ್ಲಿ 48 ಚೆಕ್‌ಪೋಸ್ಟ್‌ಗಳನ್ನು ಗುರುತಿಸಲಾಗಿದೆ. 

ಹೊಸ ವರ್ಷಕ್ಕೆ ಡ್ರಿಂಕ್ ಆ್ಯಂಡ್​​ ಡ್ರೈವ್ ಪರೀಕ್ಷೆ​: 8 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ
ಹೊಸ ವರ್ಷಾಚರಣೆ (ಸಂಗ್ರಹ ಚಿತ್ರ)
ಗಂಗಾಧರ​ ಬ. ಸಾಬೋಜಿ
|

Updated on:Dec 26, 2023 | 9:41 PM

Share

ಬೆಂಗಳೂರು, ಡಿಸೆಂಬರ್​26: ದಿನಗಳು ಉರುಳುತ್ತಿದ್ದು, ಹೊಸ ವರ್ಷ ಹತ್ತಿರ ಬರುತ್ತಿದೆ. ನ್ಯೂ ಇಯರ್ ಸ್ವಾಗತಕ್ಕೆ ಸಿಲಿಕಾನ್ ಸಿಟಿ ಸಜ್ಜಾಗಿದೆ. ಬಣ್ಣದ ಬೆಳಕಲ್ಲಿ ಜನ ಮಿಂದೇಳುವುದಕ್ಕೆ ಪ್ಲ್ಯಾನ್ ಮಾಡುತ್ತಿದ್ದಾರೆ. ಇತ್ತ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್​ಗೆ ಸಜ್ಜಾಗಿದೆ. ಡಿಸೆಂಬರ್ 31ರ ರಾತ್ರಿ ಡ್ರಿಂಕ್ ಆ್ಯಂಡ್ ಡ್ರೈವ್ (Drink and drive) ಪ್ರಕರಣಗಳನ್ನು ಪರಿಶೀಲಿಸಲು ಪೊಲೀಸರು ಬೆಂಗಳೂರಿನಲ್ಲಿ 48 ಚೆಕ್‌ಪೋಸ್ಟ್‌ಗಳನ್ನು ಗುರುತಿಸಲಾಗಿದೆ.

ಈ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ, ಉತ್ಸವದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ಬೆಂಗಳೂರಿನ ಪ್ರಮುಖ ನಗರಗಳಾದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಕಬ್ಬನ್ ಪಾರ್ಕ್, ಟ್ರಿನಿಟಿ ಮತ್ತು ಇತರೆ ಪ್ರದೇಶಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಡಿಸಿಪಿಗಳು, ಎಸಿಪಿಗಳು, ಇನ್ಸ್‌ಪೆಕ್ಟರ್‌ಗಳು, ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿದಂತೆ 8 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಕೋರಿ ಹೈಕೋರ್ಟ್​ಗೆ ಪಿಐಎಲ್

ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಆರೋಗ್ಯ ಇಲಾಖೆ ಹಾಗೂ ಬೆಸ್ಕಾಂ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಮತ್ತು ಮೇಲ್ವಿಚಾರಣೆಗಾಗಿ ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಗುವುದು ಎಂದು ಹೇಳಿದ್ದಾರೆ.

‘ಹೊಸ’ ರೂಲ್ಸ್

ಡಿಸೆಂಬರ್ 31ರ ರಾತ್ರಿ 1 ಗಂಟೆವರೆಗೆ ಹೊಸ ವರ್ಷಾಚರಣೆಗೆ ಅನುಮತಿ ನೀಡಲಾಗಿದೆ. ಕ್ಲಬ್​ಗಳಿಗೂ 1 ಗಂಟೆವರೆಗೆ ಕ್ಲಬ್​ಗಳಿಗೆ ಅವಕಾಶ ನೀಡಲಾಗಿದೆ. ಆದರೆ ಡಿಸೆಂಬರ್​ 31ರ ರಾತ್ರಿ 12ರವರೆಗೆ ವೈನ್ ಶಾಪ್​ಗಳಿಗೆ ಅವಕಾಶ ಇದೆ. ಇನ್ನು ಪಬ್​ಗಳಲ್ಲಿ ಮಿತಿಗಿಂತ ಹೆಚ್ಚು ಟಿಕೆಟ್ ಮಾರಾಟ ಮಾಡಿದರೆ ಕ್ರಮ ತೆಗೆದುಕೊಳ್ಳಲಾಗುತ್ತೆ. ಡಿಸೆಂಬರ್ 31ರಂದು ಎಲ್ಲಾ ಫ್ಲೈಓವರ್​ಗಳು ಬಂದ್​ ಆಗಲಿವೆ. ಏರ್​ಪೋರ್ಟ್ ರಸ್ತೆ ಹೊರತುಪಡಿಸಿ ಎಲ್ಲಾ ಫ್ಲೈಓವರ್​ಗಳು ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆವರೆಗೆ ಎಲ್ಲಾ ಫ್ಲೈಓವರ್​ಗಳು ಬಂದ್ ಆಗಲಿವೆ.

ಇದನ್ನೂ ಓದಿ: New Year Guidelines: ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಬೆಂಗಳೂರು ಪೊಲೀಸ್​ ಆಯುಕ್ತ: ಇಲ್ಲಿದೆ ಮಾಹಿತಿ

ಬ್ರಿಗೇಡ್, ಎಂ.ಜಿ.ರೋಡ್, ಚರ್ಚ್​ ಸ್ಟ್ರೀಟ್, ಅನಿಲ್​ ಕುಂಬ್ಳೆ ಜಂಕ್ಷನ್, ಮೆಯೋಹಾಲ್ ಜಂಕ್ಷನ್​ಗಳಲ್ಲಿ ವಾಹನಗಳ ನಿಲುಗಡೆ ನಿಷೇಧ ಮಾಡಲಾಗಿದೆ. ಇದರ ಜತೆಗೆ ಹೊಸ ವರ್ಷಾಚರಣೆ ವೇಳೆ ಡ್ರಂಕ್ & ಡ್ರೈವ್ ಮಾಡಿದರೆ ಪಕ್ಕಾ ಕ್ರಮಕೈಗೊಳ್ಳಲಾಗುತ್ತಿದೆ. ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ಡ್ರಂಕ್ & ಡ್ರೈವ್ ಪರಿಶೀಲನೆ ಮಾಡಲಾಗುತ್ತೆ.

ಭಾರಿ ಪೊಲೀಸ್​ ಭದ್ರತೆ

ಹೊಸ ವರ್ಷಾಚರಣೆ ನಿಮಿತ್ತ ಈ ಬಾರಿ ಬೆಂಗಳೂರಿನಲ್ಲಿ ಭಾರಿ ಪೊಲೀಸ್​ ಭದ್ರತೆ ಮಾಡಲಾಗಿದೆ. ಓರ್ವ ಜಂಟಿ ಪೊಲೀಸ್ ಆಯುಕ್ತ, 15 ಡಿಸಿಪಿ, 45 ಎಸಿಪಿಗಳು 160 ಪಿಐ, 600 ಸಬ್ ​​ಇನ್ಸ್​​ಪೆಕ್ಟರ್​​ಗಳು, 600 ಎಎಸ್​ಐಗಳು 1800 ಹೆಡ್ ​ಕಾನ್ಸ್​ಟೇಬಲ್ಸ್, 5200 ಕಾನ್ಸ್​ಟೇಬಲ್ಸ್ ಭದ್ರತೆಗೆ ಡ್ರೋನ್, ಸಿಸಿ ಕ್ಯಾಮರಾ ಕಣ್ಣು, ವೀಕ್ಷಣಾ ಗೋಪುರ ನಿರ್ಮಾಣದ ಜತೆಗೆ ಸಿವಿಲ್ ಡ್ರೆಸ್​​ಗಳಲ್ಲಿ ಪೊಲೀಸರು ಮಫ್ತಿಯಲ್ಲಿ ಓಡಾಟ ಮಾಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:01 pm, Tue, 26 December 23

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ