
ಬೆಂಗಳೂರು, ಜನವರಿ 28: ಡ್ರಗ್ಸ್ ಸಾಗಾಟ (drug bust) ಮಾಡುತ್ತಿದ್ದ ಕೇರಳ ಮೂಲದ 7 ಜನರು ಸೇರಿ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ. ಆ ಮೂಲಕ ಅಮೃತಹಳ್ಳಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. 4 ಕೋಟಿ ರೂ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಜೊತೆಗೆ ಬಂಧಿತರಿಂದ 3 ಕೆಜಿ ಹೈಡ್ರೋ ಗಾಂಜಾ, 50 ಗ್ರಾಂ MDMA ಮತ್ತು ಚರಸ್, 500 LSD ಸ್ಟ್ರಿಪ್ಸ್, 10 ಕೆಜಿ ಗಾಂಜಾ, 2 ಕಾರು, 14 ಮೊಬೈಲ್ಗಳನ್ನು ಜಪ್ತಿ ಮಾಡಲಾಗಿದೆ.
ಇನ್ನು ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಹೇಳಿಕೆ ನೀಡಿದ್ದು, ಬೆಂಗಳೂರಿನಲ್ಲಿ 4 ಕೋಟಿ ರೂ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಜ.19ರ ಮಧ್ಯಾಹ್ನ ಜಕ್ಕೂರು ರೈಲ್ವೆ ಟ್ರ್ಯಾಕ್ ಬಳಿ ಡ್ರಗ್ಸ್ ಪತ್ತೆಯಾಗಿತ್ತು. ಜ.21ರಂದು ಜಿಕೆವಿಕೆ ಮೈದಾನದಲ್ಲಿ 2 ಕೆಜಿ ಹೈಡ್ರೋ ಗಾಂಜಾ ಸೀಜ್ ಮಾಡಲಾಗಿದೆ ಎಂದರು.
ಇದನ್ನೂ ಓದಿ: Bengaluru: ಡ್ರಗ್ಸ್ ದಂಧೆಕೋರರಿಗೆ ಶಾಕ್; 3 ಕೆ.ಜಿ. MDMA ಸೀಜ್, ಇಬ್ಬರು ಅರೆಸ್ಟ್
ಮೈಸೂರು ರಸ್ತೆ ಸ್ಯಾಟ್ಲೈಟ್ ನಿಲ್ದಾಣ ಬಳಿ 2 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. 500 ಎಲ್ಎಸ್ಡಿ ಸ್ಟ್ರಿಪ್ಸ್ ವಶಕ್ಕೆ ಪಡೆಯಲಾಗಿದೆ. 10 ಆರೋಪಿಗಳನ್ನು ಬಂಧಿಸಿ ಅಮೃತಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.
3 ಕೋಟಿ ರೂ ಮೌಲ್ಯದ ಡ್ರಗ್ಸ್ ಸೀಜ್
ಇನ್ನು ಇತ್ತೀಚೆಗೆ ನಗರದಲ್ಲಿ ಡ್ರಗ್ಸ್ ಸಪ್ಲೈಗೆ ಸಿದ್ದವಾಗಿದ್ದ 3 ಕೋಟಿ ರೂ ಮೌಲ್ಯದ ಡ್ರಗ್ಸ್ ಸೀಜ್ ಮಾಡಲಾಗಿದ್ದು, ಇಬ್ಬರು ಪೆಡ್ಲರ್‌ಗಳನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದರು. ಹೊಸ ವರ್ಷದ ಪಾರ್ಟಿಗಳಿಗೆ ಮಾರಾಟ ಮಾಡಲು ಸಿದ್ಧವಾಗಿದ್ದ 3 ಕೋಟಿ ರೂ. ಮೌಲ್ಯದ 3.2 ಕೆ.ಜಿ. ಎಂಡಿಎಂಎ ಕ್ರಿಸ್ಟಲ್ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುವ ಪೊಲೀಸರು, ಇಬ್ಬರು ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಿದ್ದರು.
ಇದನ್ನೂ ಓದಿ: ಮೈಸೂರಿನಲ್ಲೇ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಈ ಕೋಟ್ಯಂತರ ಮೌಲ್ಯದ ಡ್ರಗ್ಸ್ ಡೀಲ್ ಹಿಂದೆ ನೈಜೀರಿಯಾ ಮೂಲದ ಪ್ರಮುಖ ಪೆಡ್ಲರ್‌ನ ಲಿಂಕ್ ಇರುವುದು ದೃಢಪಟ್ಟಿತ್ತು. ಪ್ರಮುಖ ಆರೋಪಿ ನೈಜೀರಿಯಾ ಮೂಲದ ಪೆಡ್ಲರ್‌ನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.