AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಖಾಕಿ ಬಿಗ್‌ ಬೇಟೆ: 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್‌ಗಳ ಸೆರೆ!

ರಾಜಧಾನಿ ಬೆಂಗಳೂರಿನಲ್ಲಿ 'ಮಿಷನ್ RISE' ಮತ್ತು 'ಬೇಡ ಬ್ರೋ' ಅಭಿಯಾನದಡಿ ಭಾರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬರೋಬ್ಬರಿ 55.8 ಕೋಟಿ ರೂಪಾಯಿ ಮೌಲ್ಯದ 200 ಕೆಜಿಗೂ ಅಧಿಕ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. 8 ಮಂದಿ ವಿದೇಶಿಯರು ಸೇರಿ 39 ಆರೋಪಿಗಳನ್ನು ಬಂಧಿಸಲಾಗಿದ್ದು, ಅಮೃತಹಳ್ಳಿ ಪೊಲೀಸರು ಒಂದೇ ಪ್ರಕರಣದಲ್ಲಿ 28.8 ಕೋಟಿ ಮೌಲ್ಯದ MDMA ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಖಾಕಿ ಬಿಗ್‌ ಬೇಟೆ: 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್‌ಗಳ ಸೆರೆ!
ಸಾಂದರ್ಭಿಕ ಚಿತ್ರImage Credit source: gettyimages.com
ವಿಕಾಸ್​ ಬಿಎಂ
| Edited By: |

Updated on: Aug 10, 2026 | 2:25 PM

Share

ಮುಖ್ಯಾಂಶಗಳು

  • ಬೆಂಗಳೂರು ಪೊಲೀಸರ ಕಾರ್ಯಾಚರಣೆಯಲ್ಲಿ 55.8 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿಯಾಗಿದೆ.
  • 8 ವಿದೇಶಿಯರು ಸೇರಿದಂತೆ ಒಟ್ಟು 39 ಮಾದಕ ವಸ್ತು ಮಾರಾಟಗಾರರ ಬಂಧನ.
  • ಅಮೃತಹಳ್ಳಿ ಪೊಲೀಸರಿಂದ ದೆಹಲಿಯಲ್ಲಿ 28.8 ಕೋಟಿ ಮೌಲ್ಯದ ಎಂಡಿಎಂಎ ಸೀಜ್.

ಬೆಂಗಳೂರು, ಆಗಸ್ಟ್ 10: ನಗರದಲ್ಲಿ (Bengaluru) ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ನಗರ ಪೊಲೀಸರು ಕೈಗೊಂಡಿರುವ ‘ಮಿಷನ್ RISE’ ಹಾಗೂ ‘ಬೇಡ ಬ್ರೋ’ ಅಭಿಯಾನದಡಿ ಭಾರಿ ಯಶಸ್ಸು ಸಿಕ್ಕಿದೆ. ಸಿಸಿಬಿ ಸೇರಿದಂತೆ ಒಟ್ಟು 16 ಪೊಲೀಸ್ ಯೂನಿಟ್‌ಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 55.8 ಕೋಟಿ ರೂಪಾಯಿ ಮೌಲ್ಯದ 200 ಕೆಜಿಗೂ ಅಧಿಕ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, 8 ಮಂದಿ ವಿದೇಶಿಯರು ಹಾಗೂ 21 ಅನ್ಯರಾಜ್ಯದವರು ಸೇರಿದಂತೆ ಒಟ್ಟು 39 ಆರೋಪಿಗಳನ್ನು ಬಂಧಿಸಲಾಗಿದೆ.

16 ಠಾಣಾ ವ್ಯಾಪ್ತಿಯಲ್ಲಿ ಖಾಕಿ ಕಾರ್ಯಾಚರಣೆ

ಕಳೆದ ಹತ್ತು ದಿನಗಳಿಂದ ಸತತ ಕಾರ್ಯಾಚರಣೆ ನಡೆಸಿದ ಪೊಲೀಸರು ಅಮೃತಹಳ್ಳಿ, ಗಿರಿನಗರ, ಕೆಐಎ (ವಿಮಾನ ನಿಲ್ದಾಣ), ಯಶವಂತಪುರ, ಯಲಹಂಕ, ಹೆಬ್ಬಾಳ, ನಂದಿನಿ ಲೇಔಟ್, ಕಾಡುಗೋಡಿ, ಮಲ್ಲೇಶ್ವರಂ, ಗೋವಿಂದಪುರ, ಬಾಗಲೂರು, ಮಹದೇವಪುರ, ಮಹಾಲಕ್ಷ್ಮೀ ಲೇಔಟ್, ಬೇಗೂರು ಹಾಗೂ ಕೊತ್ತನೂರು ಠಾಣಾ ವ್ಯಾಪ್ತಿಯಲ್ಲಿ ಮಾದಕ ದಂಧೆಕೋರರ ಜಾಲವನ್ನು ಭೇದಿಸಿದ್ದಾರೆ. ಬಂಧಿತರಿಂದ 17 ಲಕ್ಷ ರೂಪಾಯಿ ನಗದು, 22 ಮೊಬೈಲ್ ಫೋನ್‌ಗಳು ಹಾಗೂ 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೃಹತ್ ಪ್ರಮಾಣದ ಡ್ರಗ್ಸ್ ಜಪ್ತಿ

ಎಂಡಿಎಂಎ: 21 ಕೆಜಿ 641 ಗ್ರಾಂ ಗಾಂಜಾ: 184 ಕೆಜಿ 625 ಗ್ರಾಂ ಹೈಡ್ರೋ ಗಾಂಜಾ: 4 ಕೆಜಿ 493 ಗ್ರಾಂ ಅಫೀಮು: 1 ಕೆಜಿ 65 ಗ್ರಾಂ ಕೊಕೇನ್: 738 ಗ್ರಾಂ ಮಾರ್ಫಿನ್: 25 ಗ್ರಾಂ

ದೆಹಲಿಯಲ್ಲಿ ತಯಾರಾಗುತ್ತಿತ್ತು MDMA!

ಈ ಇಡೀ ಕಾರ್ಯಾಚರಣೆಯಲ್ಲಿ ಅಮೃತಹಳ್ಳಿ ಪೊಲೀಸರು ಅತ್ಯಂತ ದೊಡ್ಡ ಮೊತ್ತದ ಡ್ರಗ್ಸ್ ಜಾಲವನ್ನು ಭೇದಿಸಿದ್ದಾರೆ. ಬರೋಬ್ಬರಿ 28.8 ಕೋಟಿ ರೂಪಾಯಿ ಮೌಲ್ಯದ MDMA ವಶಪಡಿಸಿಕೊಂಡಿರುವ ಪೊಲೀಸರು, ದೆಹಲಿ ಮೂಲದ ಆಮ್ನಿ ಸಿಂಗ್ ಹಾಗೂ ನೈಜೀರಿಯಾ ಮೂಲದ ಓಬಮ್ ಎಂಬಿಬ್ಬರನ್ನು ದೆಹಲಿಯಲ್ಲೇ ಬಂಧಿಸಿದ್ದಾರೆ. ಆರೋಪಿಗಳು ದೆಹಲಿಯಲ್ಲೇ ಮಾದಕ ವಸ್ತುವನ್ನು ತಯಾರಿಸಿ, ಬೆಂಗಳೂರಿನ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್